PU Practical Exams: ಏಪ್ರಿಲ್ 28ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ

Karnataka 2nd PU Exams: ವಾರಾಂತ್ಯಗಳಲ್ಲಿ ಕರ್ಫ್ಯೂ ಇರುವ ಕಾರಣ ಶನಿವಾರ ಮತ್ತು ಭಾನುವಾರ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಆರೋಗ್ಯ ಇಲಾಖೆ ನೀಡಿರುವ ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಬಿಡುಗಡೆ ಮಾಡಿರುವ ಮಾರ್ಗಸೂಚಿ ತಿಳಿಸಿದೆ.

PU Practical Exams: ಏಪ್ರಿಲ್ 28ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on: Apr 23, 2021 | 9:05 PM

ಬೆಂಗಳೂರು: ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಕಾಲೇಜುಗಳ ಹಂತದಲ್ಲೇ ನಡೆಸಲು ಪಿಯು ಬೋರ್ಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ, ದೇಹದ ಉಷ್ಣಾಂಶ ಪರಿಶೀಲಿಸಿ ಒಳಗೆ ಪ್ರವೇಶ ನೀಡಬೇಕು ಎಂದು ಮಾರ್ಗಸೂಚಿ ತಿಳಿಸಿದೆ. ಏಪ್ರಿಲ್ 28ರಿಂದ ಮೇ 18ರವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬಳಿಕ ಆಯಾ ಕಾಲೇಜುಗಳು ಆನ್​ಲೈನ್​ನಲ್ಲಿ ಅಂಕ ನಮೂದಿಸಬೇಕು. ಮಾಹಿತಿ ಕೊರತೆಯಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರೆ ಆಯಾ ಕಾಲೇಜಿನ ಪ್ರಾಂಶುಪಾಲರೇ ನೇರ ಹೊಣೆಯಾಗಲಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.

ವಾರಾಂತ್ಯಗಳಲ್ಲಿ ಕರ್ಫ್ಯೂ ಇರುವ ಕಾರಣ ಶನಿವಾರ ಮತ್ತು ಭಾನುವಾರ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಆರೋಗ್ಯ ಇಲಾಖೆ ನೀಡಿರುವ ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಬಿಡುಗಡೆ ಮಾಡಿರುವ ಮಾರ್ಗಸೂಚಿ ತಿಳಿಸಿದೆ.

ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಸ್ಥಗಿತಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿದೆ. ಮೇ 4ರವರೆಗೆ ಪಿಯುಸಿ ಭೌತಿಕ ತರಗತಿಗಳು ಸ್ಥಗಿತಗೊಳ್ಳಲಿದ್ದು, ಪ್ರಥಮ, ದ್ವಿತೀಯ ಪಿಯು ತರಗತಿಗಳಿಗೆ ಆನ್‌ಲೈನ್‌ ಕ್ಲಾಸ್‌ ಮಾತ್ರ ನಡೆಯಲಿದೆ. ದ್ವಿತೀಯ ಪಿಯು ಪೂರ್ವ ಸಿದ್ಧತೆ ಪರೀಕ್ಷೆಗಳೂ ಸ್ಥಗಿತಗೊಳ್ಳಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪ್ರಶ್ನೆ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ನಿರ್ದೇಶನ ನೀಡಿದೆ.

ಮೇ 4ರವರೆಗೆ ಪಿಯುಸಿ ತರಗತಿಗಳು ಬಂದ್ ಆಗುವ ಕಾರಣ ವರ್ಕ್ ಫ್ರಂ ಹೋಂ ನೀಡಲು ಪಿಯು ಉಪನ್ಯಾಸಕರು ಮನವಿ ಸಲ್ಲಿಸಿದ್ದಾರೆ. ಮನೆಯಿಂದಲೆ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ  ಉಪನ್ಯಾಸಕರ ಸಂಘದಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್​ಗೆ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 26,962 ಮಂದಿಗೆ ಕೊರೊನಾ ಸೋಂಕು, 190 ಸಾವು

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ