Karnataka Rains: ಮುಂಗಾರು ಪೂರ್ವ ಮಳೆಗೆ ಈ ವರ್ಷ ರಾಜ್ಯದಲ್ಲಿ 52 ಮಂದಿ ಸಾವು; ಕಳೆದ ವರ್ಷ ಮೃತಪಟ್ಟವರೆಷ್ಟು?

ಕಳೆದ ವಾರಾಂತ್ಯದಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರ ಕಡೆಗಳಲ್ಲಿ ಸುರಿದಿರುವ ಮುಂಗಾರು ಪೂರ್ವ ಮಳೆ, ಈ ವರ್ಷದ ಮುಂಗಾರು ಕೂಡ 2022 ಕ್ಕಿಂತ ಕಡಿಮೆ ಇರಲಾರದು ಎಂಬ ಸುಳಿವು ನೀಡಿದೆ.

Karnataka Rains: ಮುಂಗಾರು ಪೂರ್ವ ಮಳೆಗೆ ಈ ವರ್ಷ ರಾಜ್ಯದಲ್ಲಿ 52 ಮಂದಿ ಸಾವು; ಕಳೆದ ವರ್ಷ ಮೃತಪಟ್ಟವರೆಷ್ಟು?
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 23, 2023 | 8:53 PM

ಬೆಂಗಳೂರು: ಕಳೆದ ವಾರಾಂತ್ಯದಲ್ಲಿ ಬೆಂಗಳೂರು ಮತ್ತು ರಾಜ್ಯದ ಇತರ ಕಡೆಗಳಲ್ಲಿ ಸುರಿದಿರುವ ಮುಂಗಾರು ಪೂರ್ವ ಮಳೆ (Karnataka Rains), ಈ ವರ್ಷದ ಮುಂಗಾರು ಕೂಡ 2022 ಕ್ಕಿಂತ ಕಡಿಮೆ ಇರಲಾರದು ಎಂಬ ಸುಳಿವು ನೀಡಿದೆ. ಕಳೆದ ಕೆಲವು ದಿನಗಳಲ್ಲಿ ಸುರಿದಿರುವ ಅಕಾಲಿಕ ಭಾರೀ ಮಳೆಯಿಂದ (Heavy Rains) ಕೃಷಿ ಮತ್ತು ವ್ಯಾಪಕ ಹಾನಿ ಸಂಭವಿಸಿದೆ. ಆಸ್ತಿ ಮತ್ತು ದೊಡ್ಡ ಪ್ರಮಾಣದ ಜೀವ ಹಾನಿಯಾಗಿದೆ. ಸಾಮಾನ್ಯವಾಗಿ ರಾಜ್ಯದಲ್ಲಿ ಜೂನ್ ಎರಡನೇ ವಾರದಲ್ಲಿ ಮುಂಗಾರು ಮಳೆ (Monsoon Rain) ಆರಂಭವಾಗುತ್ತದೆ.

ಜೂನ್ 2 ರವರೆಗೆ ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸಾಮಾನ್ಯವಾಗಿರಲಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಭಾಗಗಳಲ್ಲಿ ಸಾಧಾರಣವಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ರೈತರು, ವಿಶೇಷವಾಗಿ ತೋಟಗಾರಿಕಾ ತಜ್ಞರು, ಜೂನ್ 9 ರ ಮುಂಗಾರು ಪ್ರಾರಂಭವಾಗಬಹುದು ಎಂಬ ಆತಂಕದಲ್ಲಿದ್ದಾರೆ.

ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಈಗಾಗಲೇ 52 ಮಂದಿ ಸಾವನ್ನಪ್ಪಿದ್ದು, ಕಳೆದ ವರ್ಷ 71 ಮಂದಿ ಸಾವನ್ನಪ್ಪಿದ್ದರು. ಸಿಡಿಲು ಬಡಿದು ಇದುವರೆಗೆ 34 ಮಂದಿ ಮೃತಪಟ್ಟಿದ್ದಾರೆ. 2022 ರ ಇಡೀ ಮುಂಗಾರು ಅವಧಿಯಲ್ಲಿ, 56 ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದರು. ಈ ವರ್ಷ ಮರಗಳು ಬಿದ್ದು ಈವರೆಗೆ ಮೂವರು ಮೃತಪಟ್ಟಿದ್ದಾರೆ. ಕಳೆದ ವರ್ಷ ಮರ ಬಿದ್ದು ಮೃತಪಟ್ಟವರ ಸಂಖ್ಯೆ ಆರು ಆಗಿತ್ತು. ಆದಾಗ್ಯೂ, ಕಳೆದ ವರ್ಷದ ಅಂಕಿಅಂಶಗಳಿಗಿಂತ ಈ ವರ್ಷ ಮುಂಗಾರು ಪೂರ್ವ ಅವಧಿಯಲ್ಲಿ ಮನೆ ಕುಸಿದು (7) ಮತ್ತು ಮುಳುಗುವಿಕೆಯಿಂದ (5) ಸಾವುಗಳು ಹೆಚ್ಚಾಗಿವೆ. ಹೆಚ್ಚುವರಿಯಾಗಿ, ಈ ವರ್ಷ ಮೂರು ಜನರು ವಿದ್ಯುದಾಘಾತಕ್ಕೆ ಒಳಗಾಗಿದ್ದಾರೆ. ಕಳೆದ ವರ್ಷ ವಿದ್ಯುದಾಘಾತಕ್ಕೆ ಒಳಗಾಗಿ ಯಾರೂ ಮೃತಪಟ್ಟಿರಲಿಲ್ಲ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮಳೆ ಅವಾಂತರ, ಅಪಾರ ಹಾನಿ; ಚಿತ್ರಗಳು ಇಲ್ಲಿವೆ ನೋಡಿ

ಕಳೆದ ವರ್ಷ 171 ಸಾಕು ಪ್ರಾಣಿಗಳು ಮೃತಪಟ್ಟಿದ್ದರೆ ಈ ವರ್ಷ ಈವರೆಗೆ 155 ಪ್ರಾಣಿಗಳು ಸಾವಿಗೀಡಾಗಿವೆ. ಕಳೆದ ವರ್ಷ 669 ಸಣ್ಣ ಪ್ರಾಣಿಗಳು ಸಾವನ್ನಪ್ಪಿದ್ದರೆ, ಈ ವರ್ಷ ಈಗಾಗಲೇ 163 ಸಣ್ಣ ಪ್ರಾಣಿಗಳು ಮಳೆ ಸಂಬಂಧಿ ಅವಘಡಗಳಿಗೆ ಬಲಿಯಾಗಿವೆ. ಈ ವರ್ಷ ಇದುವರೆಗೆ 19 ಮನೆಗಳು ಸಂಪೂರ್ಣ ಕುಸಿದು ಬಿದ್ದಿದ್ದರೆ, ಕಳೆದ ವರ್ಷ 131 ಮನೆಗಳು ಕುಸಿದು ಬಿದ್ದಿದ್ದವು.

ಬೆಳೆ ಹಾನಿ ಹೆಚ್ಚು

ಮುಂಗಾರು ಪೂರ್ವ ಮಳೆಯಿಂದ ತೋಟಗಾರಿಕೆ ಬೆಳೆಗಳು ಹೆಚ್ಚು ಹಾನಿಗೀಡಾಗಿವೆ. ಮಳೆಯಿಂದಾಗಿ ಬೆಳೆದು ನಿಂತಿದ್ದ ಬೆಳೆಗಳು ಹಾಗೂ ಮಾವಿನ ತೋಟಗಳಿಗೆ ಭಾರಿ ಹಾನಿಯಾಗಿದೆ. 10,067 ಹೆಕ್ಟೇರ್‌ನಲ್ಲಿನ ತೋಟಗಾರಿಕೆ ಬೆಳೆಗಳು ನಾಶವಾಗಿದ್ದರೆ, ಕಳೆದ ವರ್ಷ ಸಂಪೂರ್ಣ ಮಳೆಗಾಲದಲ್ಲಿ 9,843 ಹೆಕ್ಟೇರ್‌ನಲ್ಲಿನ ಬೆಳೆ ಹಾನಿಯಾಗಿತ್ತು ಎಂದು ‘ನ್ಯೂಸ್9’ ವರದಿ ಮಾಡಿದೆ.

ಕೃಷಿಗೂ ಭಾರಿ ಹಾನಿಯಾಗಿದೆ. ಮುಂಗಾರು ಪೂರ್ವ ಧಾರಾಕಾರ ಮಳೆಗೆ 9,398 ಹೆಕ್ಟೇರ್‌ನಲ್ಲಿ ಬೆಳೆದು ನಿಂತ ಬೆಳೆ ನಾಶವಾಗಿದ್ದರೆ, ಕಳೆದ ವರ್ಷ ಇಡೀ ಮಳೆಗಾಲದಲ್ಲಿ 16,623 ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್