AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS Officers transfer: ಚುನಾವಣೆ ಘೋಷಣೆ ಬೆನ್ನಲ್ಲೇ ಐಎಎಸ್‌ ಅಧಿಕಾರಿಗಳ ವರ್ಗಾವಣೆ

ರಾಜ್ಯ ವಿಧಾನಸಬೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ 6 ಐಎಎಸ್ ಅಧಿಕಾರಿಗಳನ್ನು (IAS Officials) ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

IAS Officers transfer: ಚುನಾವಣೆ ಘೋಷಣೆ ಬೆನ್ನಲ್ಲೇ ಐಎಎಸ್‌ ಅಧಿಕಾರಿಗಳ ವರ್ಗಾವಣೆ
ವಿಧಾನಸೌಧ
Follow us
Ganapathi Sharma
|

Updated on: Mar 29, 2023 | 7:47 PM

ಬೆಂಗಳೂರು: ರಾಜ್ಯ ವಿಧಾನಸಬೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ 6 ಐಎಎಸ್ ಅಧಿಕಾರಿಗಳನ್ನು (IAS Officials) ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಶ್ರೀಕರ್ ಎಂಎಸ್ (ಡಿಪಿಎಆರ್ ಕಾರ್ಯದರ್ಶಿ), ಶೇಕ್ ತನ್ವೀರ್ ಆಸೀಫ್ (ಮಂಡ್ಯ ಜಿ.ಪಂ ಸಿಇಒ), ಲೋಕಂಡೆ ಸ್ನೇಹಲ್‌ ಸುಧಾಕರ್ (ಶಿವಮೊಗ್ಗ ಜಿ.ಪಂ ಸಿಇಒ), ರಂಗಪ್ಪ.ಎಸ್ (ಔಷಧ ಸರಬರಾಜು ನಿಗಮದ ಎಂಡಿ), ಗರಿಮಾ‌ ಪವಾರ್ (ಯಾದಗಿರಿ ಜಿ.ಪಂ ಸಿಇಒ), ಆಕೃತಿ ಬನ್ಸಾಲ್ (ಸಹಾಯಕ ಸ್ಥಾನೀಯ ಆಯುಕ್ತೆ, ಕರ್ನಾಟಕ ಭವನ) ಅವರನ್ನು ವರ್ಗಾವಣೆ ಮಾಡಲಾಗಿದೆ. ಆಯುಷ್ ಇಲಾಖೆ ಆಯುಕ್ತ ಜೆ. ಮಂಜುನಾಥ್‌ಗೆ ಹೆಚ್ಚುವರಿ ಯೋಜನಾ ನಿರ್ದೇಶಕ ಹುದ್ದೆ ಹೊಣೆಗಾರಿಕೆ ನೀಡಲಾಗಿದೆ. ಅವರು ಸದ್ಯ ಏಡ್ಸ್‌ ನಿಯಂತ್ರಣ ಮಂಡಳಿಯ ಯೋಜನಾ ನಿರ್ದೇಶಕರಾಗಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Election 2023: ಬುಧವಾರವೇ ಚುನಾವಣೆ ನಿಗದಿ ಮಾಡಿದ್ದೇಕೆ? ಇಲ್ಲಿದೆ ಕಾರಣ

ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿರುತ್ತದೆ. ಏಪ್ರಿಲ್ 21ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ 13 ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ