AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ‘ಕೈ’ ಮುಖಂಡ ಸಾವು, ಇತ್ತೀಚೆಗೆ ಎಸಿಬಿ ದಾಳಿ ಎದುರಿಸಿದ್ದ ಸಕಾಲ ಅಧಿಕಾರಿ ಪತ್ನಿ ಕೊನೆಯುಸಿರು

ಸಕಾಲ ಅಧಿಕಾರಿ L.C.ನಾಗರಾಜ್ ಪತ್ನಿ ನಾಗರತ್ನ(48) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ನಾಗರಾಜ್ ಮನೆ ಮೇಲೆ ಎಸಿಬಿ ದಾಳಿ ನಡೆದಿತ್ತು.

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ‘ಕೈ’ ಮುಖಂಡ ಸಾವು, ಇತ್ತೀಚೆಗೆ ಎಸಿಬಿ ದಾಳಿ ಎದುರಿಸಿದ್ದ ಸಕಾಲ ಅಧಿಕಾರಿ ಪತ್ನಿ ಕೊನೆಯುಸಿರು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 02, 2021 | 9:07 AM

Share

ಮೈಸೂರು: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ‘ಕೈ’ ಮುಖಂಡ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ H.D.ಕೋಟೆ ತಾಲೂಕಿನ ಹ್ಯಾಂಡಪೋಸ್ಟ್ ಬಳಿ ನಡೆದಿದೆ. ಸರಗೂರು ನಿವಾಸಿ ಜಾಹಾಶಾದ್(58) ಮೃತ ದುರ್ದೈವಿ. ಮಟಕೆರೆ ಗ್ರಾಮದ ಮಗಳ‌ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷಿಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಕೃಷಿಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮದ ಸುರೇಶ್ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನು ಮತ್ತೊಂದು ಕಡೆ ಗಾಣಿಗನ‌ ಕೊಪ್ಪಲಿನಲ್ಲಿ ತೆಂಗಿನ ಮರದಿಂದ ಬಿದ್ದು ರೈತ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಗಾಣಿಗನ‌ ಕೊಪ್ಪಲು ಗ್ರಾಮದ ಮಂಜು(38) ಮೃತ ದುರ್ದೈವಿ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಾರ್ಥನ ಮಂದಿರದಲ್ಲಿ ತೆಂಗಿನ ಕಾಯಿ ಕೀಳಲು ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಅಗತ್ಯ ಮುಂಜಾಗೃತ ಕ್ರಮ ಕೈಗೊಳ್ಳದ ಪ್ರಾರ್ಥನ ಮಂದಿದರವರೇ ಮಂಜು ಸಾವಿಗೆ ಕಾರಣ ಎಂದು ಮೃತ ಮಂಜು ಪತ್ನಿ ಆರೋಪ ಮಾಡಿದ್ದಾರೆ. ಬನ್ನೂರೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಹುಣಸೂರು ಮೈಸೂರು ರಸ್ತೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಾಮೇಗೌಡನಹಳ್ಳಿಯ ರಮೇಶ್ ಮೃತ ದುರ್ದೈವಿ. ಗಾರೆ ಕೆಲಸ ಮಾಡುತ್ತಿದ್ದ ರಮೇಶ್ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಹುಣಸೂರು ಟೌನ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಲಾರಿ ಡಿಕ್ಕಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದಲ್ಲಿ ಅಪಘಾತಯೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿಯಲ್ಲಿ ಸಿಲುಕಿದ್ದ ಚಾಲಕ, ಕ್ಲೀನರ್ ರಕ್ಷಣೆ ಮಾಡಲಾಗಿದ್ದು ಗಾಯಾಳು ಚಾಲಕ, ಕ್ಲೀನರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಕಾಲ ಅಧಿಕಾರಿ L.C.ನಾಗರಾಜ್ ಪತ್ನಿ ನಾಗರತ್ನ ಸಾವು ಸಕಾಲ ಅಧಿಕಾರಿ L.C.ನಾಗರಾಜ್ ಪತ್ನಿ ನಾಗರತ್ನ(48) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ನಾಗರಾಜ್ ಮನೆ ಮೇಲೆ ಎಸಿಬಿ ದಾಳಿ ನಡೆದಿತ್ತು. ನವೆಂಬರ್ 29 ರಂದು ನಾಗರತ್ನರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಇಂದು ಬೆಳಗಿನ ಜಾವ 3:30ರಲ್ಲಿ ಬಹು ಅಂಗಾಂಗಳ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ. ಸತತ 4ದಿನಗಳ ಬಳಿಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಚಳಿಗಾಲದಲ್ಲಿ ಈ ತರಕಾರಿಗಳ ಸೇವನೆ ಬಹಳ ಮುಖ್ಯ; ಆರೋಗ್ಯದಲ್ಲಿನ ಬದಲಾವಣೆ ಬಗ್ಗೆ ತಿಳಿಯಿರಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್