Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Accidents: ಕರಾಳ ಗುರುವಾರ: ಕರ್ನಾಟಕದಾದ್ಯಂತ ಸರಣಿ ಅಪಘಾತಗಳಲ್ಲಿ 17 ಜನ ಸಾವು

ಕರ್ನಾಟಕ ಅಪಘಾತಗಳು: ಕರ್ನಾಟಕದ ಪಾಲಿಗೆ ಗುರುವಾರ ಕರಾಳ ದಿನವಾಗಿ ಪರಿಣಮಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾವಣಗೆರೆ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 17 ಮಂದಿ ಮೃತಪಟ್ಟು ಹತ್ತಾರು ಜನ ಗಾಯಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ.

Karnataka Accidents: ಕರಾಳ ಗುರುವಾರ: ಕರ್ನಾಟಕದಾದ್ಯಂತ ಸರಣಿ ಅಪಘಾತಗಳಲ್ಲಿ 17 ಜನ ಸಾವು
ಯಾದಗಿರಿ ಅಪಘಾತದಲ್ಲಿ ಜಖಂಗೊಂಡಿರುವ ಬಸ್
Follow us
Ganapathi Sharma
|

Updated on:Apr 11, 2025 | 7:23 AM

ಬೆಂಗಳೂರು, ಏಪ್ರಿಲ್ 11: ರಸ್ತೆ ಅಪಘಾತಗಳನ್ನು (Road Accidents) ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು (Traffic Police) ಅನೇಕ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ದಿನನಿತ್ಯ ಆಕ್ಸಿಡೆಂಟ್‌ಗಳು ಮಾತ್ರ ತಪ್ಪುತ್ತಿಲ್ಲ.‌ ಗುರುವಾರ ಒಂದೇ ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 17 ಜನ ಅಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರೊಂದಿಗೆ, ಕರ್ನಾಟಕದ (Karnataka) ಪಾಲಿಗೆ ಗುರುವಾರ ಕರಾಳ ದಿನವಾಗಿ (Black Thursday) ಮಾರ್ಪಟ್ಟಿದೆ.

ಯಾದಗಿರಿ: ಸರ್ಕಾರಿ ಬಸ್​ಗೆ ಪಿಕ್​ಅಪ್​ ಡಿಕ್ಕಿ, ನಾಲ್ವರು ಸಾವು

ಸರ್ಕಾರಿ ಬಸ್ ಡಿಕ್ಕಿಯಾಗಿ ಮಹೀಂದ್ರ ಪಿಕ್​ಅಪ್ ವಾಹನದಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಸಂಭವಿಸಿದೆ. ಮೃತಪಟ್ಟವರು ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಫತ್ತರಗಿಗೆ ಹೋಗಿ ಬರುತ್ತಿದ್ದಾಗ ದುರಂತ ಸಂಭವಿಸಿದೆ.

ಡಿವೈಡರ್​ಗೆ ಕಾರು ಡಿಕ್ಕಿ: ಮೂವರ ದಾರುಣ ಸಾವು

ಇತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ತುಮಕೂರಿಗೆ ತೆರಳುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ಗೋಪಾಲ್, ಪತ್ನಿ ಶಶಿಕಲಾ ಹಾಗೂ ಮಗಳು ದೀಪಾ ಮೃತಪಟ್ಟಿದ್ದಾರೆ.

ಇದನ್ನೂ ಓದಿ
Image
ಆನ್​ಲೈನ್​ ಬೆಟ್ಟಿಂಗ್, ಗೇಮಿಂಗ್ ಆ್ಯಪ್​​ಗೆ ಕಡಿವಾಣ: ಶೀಘ್ರ ಹೊಸ ಮಾನದಂಡ
Image
ರಜೆಯೆಂದು ಮನೆಗೆ ಬೀಗ ಹಾಕಿ ಊರು, ಪ್ರವಾಸ ಹೋಗೋ ಮುನ್ನ ಪೊಲೀಸರ ಸಲಹೆ ಗಮನಿಸಿ
Image
ಇಂದು, ನಾಳೆ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
Image
ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ

ಕೆರೆಯಲ್ಲಿ ಈಜಲು ಹೋಗಿ ಐವರು ದಾರುಣ ಸಾವು

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಭರಮಸಮುದ್ರ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಕೊನೆಯುಸಿರೆಳೆದಿದ್ದಾರೆ. ರಜೆ ಕಾರಣ ಬೆಂಗಳೂರಿಂದ ಸ್ವಗ್ರಾಮಕ್ಕೆ ಬಂದಿದ್ದ ಅಜಯ್ ಹಾಗೂ ಓಬಳೇಶ್ ಮೃತಪಟ್ಟಿದ್ದಾರೆ. ಅದೇ ರೀತಿ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೂಡದಮಿಟ್ಟೆ ಕೆರೆಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿ ಮೂವರು ಸಾವನ್ನಪ್ಪಿದ್ದಾರೆ. ವಾಟರ್ ಮ್ಯಾನ್ ಆಗಿದ್ದ ರಮೇಶ್, ಮಗ ಅಗಸ್ತ್ಯ ಹಾಗೂ ಸ್ನೇಹಿತ ಶರಣ್ ಮೃತಪಟ್ಟಿದ್ದಾರೆ.

ಅರಕಲಗೂಡು: ವಿದ್ಯುತ್ ಶಾಕ್​​ನಿಂದ ಇಬ್ಬರು ಸಾವು

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಗರಿಘಟ್ಟ ಗ್ರಾಮದಲ್ಲಿ ವಿದ್ಯುತ್ ಶಾಕ್‌ನಿಂದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮರಗೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಸೃಜನ್ ಹಾಗೂ ಸಂಜಯ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್​

ಚಿಕ್ಕಬಳ್ಳಾಪುರ ತಾಲೂಕಿನ ಪೊಶೆಟ್ಟಿಹಳ್ಳಿ ಬಳಿ ಇನ್ನೊವಾ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಂದೆಡೆ, ಶಿವಮೊಗ್ಗದ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ಕಾರೊಂದು ಟಾಟಾ ಗೂಡ್ಸ್​ ವಾಹನಕ್ಕೆ ಡಿಕ್ಕಿ ಹೊಡೆದು ಚಾಲಕ ಶಾಶ್ವತ್ ಮೃತಪಟ್ಟಿದ್ದಾನೆ. ಚಾಲಕ ನಿದ್ರೆ ಮಂಪರಿನಲ್ಲಿದ್ದ ಕಾರಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ಅತ್ತ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಕಲಮರಹಳ್ಳಿ ಗ್ರಾಮದ ವೀರಭದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:52 am, Fri, 11 April 25

ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..