ರಸ್ತೆ ಅಪಘಾತ: ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಲ್ವರ ಸಾವು

ಬೆಂಗಳೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ನಾಲ್ಕು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿದ್ದು, ಚಿಕ್ಕಮಗಳೂರಿನಲ್ಲಿ ಕಾರು ಅಪಘಾತದಿಂದ ತಲಾ ಇಬ್ಬರು ಮೃತಪಟ್ಟಿದ್ದಾರೆ. ಘಟನೆಗಳ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ರಸ್ತೆ ಅಪಘಾತ: ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಲ್ವರ ಸಾವು
ರಾಜ್ಯದಲ್ಲಿ ಮೂರು ಪ್ರತ್ಯೇಕ ದುರ್ಘಟನೆಗಳಲ್ಲಿ 6 ಜನರು ಸ್ಥಳದಲ್ಲೇ ಸಾವು

Updated on: Nov 09, 2025 | 10:35 AM

ಬೆಂಗಳೂರು, ನವೆಂಬರ್ 9: ನೆಲಮಂಗಲ, ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಒಟ್ಟೂ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿದ್ದು, ಬೈಕ್ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಇಬ್ಬರ ಸಾವು

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ರಸ್ತೆಪಾಳ್ಯ ಗ್ರಾಮದ ಬಳಿ ಬೈಕ್ ಡಿವೈಡರ್ಗೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೇಶವ್ (19) ಮತ್ತು ಮಯೂರ್ (19)ಮೃತ ದುರ್ದೈವಿಗಳು. ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿದ್ದು, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ‌ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚನ್ನಗಿರಿ ಮೂಲದ ಕುಮಾರಪ್ಪ (60) ಮತ್ತು ಸತೀಶ್ (35) ಮೃತಪಟ್ಟಿದ್ದು, ಮತ್ತೊಂದು ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳದಲ್ಲಿ ಈಜಲು ಹೋಗಿ ಮೃತಪಟ್ಟ ಬಾಲಕರ ಕೇಸಿಗೆ ಟ್ವಿಸ್ಟ್

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹೊಮ್ಮಿನಾಳದಲ್ಲಿ ಇಬ್ಬರು ಬಾಲಕರು ಈಜಲು ಹೋಗಿ ಮುಳುಗಿದ್ದಾರೆ ಎಂದು ಹೇಳಲಾಗಿದ್ದ ಪ್ರಕರಣಕ್ಕೀಗ ಟ್ವಿಸ್ಟ್ ಸಿಕ್ಕಿದೆ.  ಹನುಮೇಶ (6ನೇ ತರಗತಿ) ಮತ್ತು ಯಮನೂರಪ್ಪ (8ನೇ ತರಗತಿ) ಎಂಬ ಬಾಲಕರ  ನರೇಗಾ ಕಾಮಗಾರಿಯ ನಿರ್ಲಕ್ಷ್ಯದಿಂದ ಸಾವಿಗೀಡಾಗಿದ್ದಾರೆಂದು ಪಾಲಕರು ಆರೋಪಿಸಿದ್ದಾರೆ. ಕುಟುಂಬಸ್ಥರ ಪ್ರಕಾರ, ಹೊಲಕ್ಕೆ ತೆರಳುವ ರಸ್ತೆಯ ಪಕ್ಕದಲ್ಲೇ ನರೇಗಾ ಯೋಜನೆಯಡಿ ಆಳವಾದ ತೆಗ್ಗು ತೆಗೆಯಲಾಗಿದ್ದು, ಮಳೆಯಿಂದ ನೀರು ತುಂಬಿಕೊಂಡಿತ್ತು.

ರಸ್ತೆಯ ಸಮನಾಗಿ ನೀರು ತುಂಬಿದ್ದ ತೆಗ್ಗಿಗೆ ಬಿದ್ದ ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ ನರೇಗ ಅಧಿಕಾರಿಗಳ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನರೇಗಾ ಕೂಲಿ ಹಣದ ಬಿಲ್​​ಗಾಗಿ ಹೊಲದ ರಸ್ತೆ ಎಂದು ಗೊತ್ತಿದ್ದು ರಸ್ತೆ ಪಕ್ಕದಲ್ಲೇ ಆಳಾವಾಗಿ ತೆಗ್ಗು ತಗೆಯಲಾಗಿದೆ ಎಂದು ಆರೋಪಿಸಿರುವ ಪಾಲಕರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 am, Sun, 9 November 25