ಮಳೆ ಕೊರತೆ ನಡುವೆಯೂ ರಾಜ್ಯದಲ್ಲಿ ಶೇ 75 ರಷ್ಟು ಬಿತ್ತನೆ: ಸಚಿವ ಚಲುವರಾಯಸ್ವಾಮಿ
ಕರ್ನಾಟಕದಲ್ಲಿ ಮಳೆ ಕೊರತೆ ನಡುವೆಯೂ ಶೇ 75 ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು. ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಒಟ್ಟು 82.35 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ 61.72 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಪೂರ್ಣಗೊಂಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮಳೆ (Karnataka Rain) ಕೊರತೆ ನಡುವೆಯೂ ಶೇ 75 ರಷ್ಟು ಬಿತ್ತನೆ ಕಾರ್ಯ (Kharif Sowing) ಪೂರ್ಣಗೊಂಡಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ (Chaluvarayaswamy) ಹೇಳಿದರು. ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಒಟ್ಟು 82.35 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ 61.72 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಪೂರ್ಣಗೊಂಡಿದೆ. ಮಳೆ ಕೊರತೆಯಿಂದ ಗುರಿ ಮುಟ್ಟಲು ಸಾಧ್ಯವಾಗಿಲ್ಲ. ಕಳೆದ ಎರಡು ವಾರಗಳಲ್ಲಿ ಮಳೆಯ ಪ್ರಮಾಣ ಕ್ಷೀಣವಾಗಿದ್ದು, ಮುಂದಿನ ಒಂದು ವಾರದಲ್ಲಿ ಮಳೆಯಾಗದಿದ್ದರೆ ಬೆಳೆಗಳು ಒಣಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಗುರುವಾರ ಬಿಡುಗಡೆಯಾದ ಅಂಕಿಅಂಶಗಳ ಪ್ರಕಾರ, ಜೂನ್ 1 ರಿಂದ ಆಗಸ್ಟ್ 16 ರ ನಡುವೆ 472 ಮಿಮೀ ಮಳೆಯಾಗಿದೆ. ಈ ಸಮಯದಲ್ಲಿ 601 ಮಿಮೀ ಮಳೆ ನಿರೀಕ್ಷಿಸಲಾಗಿತ್ತು ಆದರೆ ಇದೀಗ ಶೇ 22 ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಶೇ 29 ಕ್ಕಿಂತ ಹೆಚ್ಚು ಅಂದರೇ 349 ಮಿಮೀ ಮಳೆಯಾಗಿದೆ ಎಂದರು.
ಇದನ್ನೂ ಓದಿ: ಉತ್ತರ ಕರ್ನಾಟಕ ರೈತರಿಗೆ ಸಿಹಿ ಸುದ್ದಿ; ಮಳೆ ಕೊರತೆಯ ನಡುವೆಯೂ ಭರ್ತಿಯಾಯ್ತು ಆಲಮಟ್ಟಿ ಜಲಾಶಯ
ಕೇಂದ್ರದ ನಿಯಮಗಳ ಪ್ರಕಾರ ಶೇ 60 ರಷ್ಟು ಮಳೆ ಕೊರತೆ ಉಂಟಾಗಬೇಕು. ಶೇ 75 ಕ್ಕಿಂತ ಕಡಿಮೆ ಪ್ರದೇಶದಲ್ಲಿ ಬಿತ್ತನೆ ಮತ್ತು ಶೇ 50 ಕ್ಕಿಂತ ಕಡಿಮೆ ತೇವಾಂಶವಿದ್ದರೇ ಮಾತ್ರ ಬರಗಾಲ ಎಂದು ಘೋಷಣೆ ಮಾಡಲಾಗುವುದು ಎಂದು ಹಲವಾರು ಮಾರ್ಗಸೂಚಿಗಳನ್ನು ನಿಗದಿಪಡಿಸಿದೆ ಎಂದು ತಿಳಿಸಿದರು.
ಈ ಎಲ್ಲ ಮಾಹಿತಿ ಪಡೆದ ಬಳಿಕ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು. ಬರ ಘೋಷಣೆ ಬಳಿಕ ಮೋಡ ಬಿತ್ತನೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಬರ ಘೋಷಣೆಗೆ ಶೇ 60 ರಷ್ಟು ಬರ ಇದ್ದರೆ ಕೇಂದ್ರ ಸರ್ಕಾರ ಅನುದಾದ ಬಿಡುಗಡೆ ಮಾಡುತ್ತೆ. ಇದನ್ನು ಶೇ 30ಕ್ಕೆ ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ