Advocate KS Anil: ನ್ಯಾಯಾಂಗ ವ್ಯವಸ್ಥೆ ವಿರುದ್ಧ ಆರೋಪ ಮಾಡಿ ಜೈಲುಪಾಲಾದ ವಕೀಲ; ನಾಳೆ ಮತ್ತೆ ಹಾಜರು

Advocate KS Anil Sent to judicial custody: ನ್ಯಾಯಾಂಗ ವ್ಯವಸ್ಥೆ ವಿರುದ್ಧ ಆರೋಪ ಮಾಡಿದ ಕಾರಣಕ್ಕೆ ವಕೀಲ ಕೆಎಸ್ ಅನಿಲ್ ಅವರನ್ನು ಒಂದು ವಾರ ಕಾಲ ಜುಡಿಶಿಯಲ್ ಕಸ್ಟಡಿಗೆ ಒಪ್ಪಿಸಲಾಗಿದೆ. ಫೆ. 10, ನಾಳೆ ಅವರನ್ನು ಮತ್ತೆ ಹೈಕೋರ್ಟ್ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗುತ್ತಿದೆ.

Advocate KS Anil: ನ್ಯಾಯಾಂಗ ವ್ಯವಸ್ಥೆ ವಿರುದ್ಧ ಆರೋಪ ಮಾಡಿ ಜೈಲುಪಾಲಾದ ವಕೀಲ; ನಾಳೆ ಮತ್ತೆ ಹಾಜರು
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Feb 09, 2023 | 10:43 AM

ಬೆಂಗಳೂರು: ನ್ಯಾಯಾಂಗ ವ್ಯವಸ್ಥೆ ಮತ್ತು ನ್ಯಾಯಾಧೀಶರ ಮೇಲೆ ಆರೋಪಗಳನ್ನು (Wild Allegations Against Judicial System) ಮಾಡಿದ ಕಾರಣಕ್ಕೆ ವಕೀಲರೊಬ್ಬರಿಗೆ ಒಂದು ವಾರ ಸಜೆ ವಿಧಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಅಡ್ವೊಕೇಟ್ ಕೆ.ಎಸ್. ಅನಿಲ್ (Advocate KS Anil) ಅವರನ್ನು ಒಂದು ವಾರ ಕಾಲ ಜೈಲಿಗೆ ಕಳುಹಿಸಲಾಗಿದೆ. ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ ವರಲೆ ಮತ್ತು ನ್ಯಾ| ಅಶೋಕ್ ಎಸ್ ಕಿಣಗಿ ಅವರಿರುವ ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠವೊಂದು ಫೆಬ್ರುವರಿ 2ರಂದು ಈ ಆದೇಶ ನೀಡಿರುವುದು ತಿಳಿದುಬಂದಿದೆ. ನಾಳೆ, ಅಂದರೆ ಫೆಬ್ರುವರಿ 10ರಂದು ಅಡ್ವೊಕೇಟ್ ಅನಿಲ್ ಅವರನ್ನು ಮತ್ತೊಮ್ಮೆ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗುತ್ತಿದೆ.

ವಕೀಲ ಕೆಎಸ್ ಅನಿಲ್ ವಿರುದ್ಧ ನ್ಯಾಯಾಂಗ ನಿಂದನೆ (Contempt of Court) ಆರೋಪಗಳ ಪ್ರಕರಣಗಳಿವೆ. ನ್ಯಾಯಾಂಗ ವ್ಯವಸ್ಥೆ ಮತ್ತು ನ್ಯಾಯಮೂರ್ತಿಗಳ ಬಗ್ಗೆ ಅವಹೇಳನಕಾರಿಯಾಗುವಂತಹ ಹೇಳಿಕೆಗಳನ್ನು ಅವರು ನೀಡಿರುವ ಆರೋಪಗಳಿವೆ.

ಇದನ್ನೂ ಓದಿ: ಲಂಚ ಸ್ವೀಕರಿಸಿ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ, ಲಂಚ ನೀಡದಿದ್ದಕ್ಕೆ ದೂರುದಾರರಿಗೆ ಏನು ಮಾಡಿದ್ದರು ಗೊತ್ತಾ?

2019ರಲ್ಲಿ ಅನಿಲ್ ವಿರುದ್ಧ ಕ್ರಿಮಿನಲ್ ನಿಂದನೆ ಪ್ರಕರಣ ದಾಖಲಾಗಿತ್ತು. ನಂತರ ಮತ್ತೊಂದು ಸ್ವಯಂಪ್ರೇರಿತ ಪ್ರಕರಣ ಅವರ ಮೇಲೆ ದಾಖಲಾಯಿತು. ಪೊಲೀಸರು ಜಾಮೀನುಸಹಿತ ವಾರಂಟ್ ನೀಡಲು ಹೋದಾಗ ಅನಿಲ್ ಸ್ಪಂದಿಸಿಲ್ಲ. ಅಲ್ಲದೇ ಈ ಪ್ರಕರಣದಲ್ಲಿ ತಾನು ಮುಖ್ಯನ್ಯಾಯಾಧೀಶರ ವಿರುದ್ಧ ಆರೋಪ ಮಾಡಿರುವುದರಿಂದ ಪ್ರಕರಣದ ವಿಚಾರಣೆಯನ್ನು ಬೇರೊಂದು ನ್ಯಾಯಪೀಠಕ್ಕೆ ವರ್ಗಾಯಿಸಬೇಕೆಂಬುದು ಅನಿಲ್ ಅವರ ವಾದ.

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ಧೋರಣೆ ನೋಡಿದರೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಇದ್ದಂತಿಲ್ಲ. ನ್ಯಾಯಾಂಗ ಭ್ರಷ್ಟಾಚಾರವನ್ನು ಜೀವಂತವಾಗಿ ಇಡಲಾಗಿದೆ. ನ್ಯಾಯಾಂಗ ವಿಚಾರಣೆ ಪ್ರಕ್ರಿಯೆಯ ನೇರ ಪ್ರಸಾರ ವ್ಯವಸ್ಥೆಯನ್ನು ಪೂರ್ಣವಾಗಿ ಮಾಡುತ್ತಿಲ್ಲ ಎಂದು ವಕೀಲ ಅನಿಲ್ ಹೇಳಿದ್ದರು.

ಇದನ್ನೂ ಓದಿ: BMRCL SOP: ನಿರ್ಮಾಣ ಕಾಮಗಾರಿ ವೇಳೆ ಅನುಸರಿಸಬೇಕಾದ ಮಾರ್ಗಸೂಚಿ ಪರಿಷ್ಕರಿಸಿದ ಮೆಟ್ರೋ ನಿಗಮ, ಅವಘಡ ತಡೆಗೆ ಕ್ರಮ

ಈ ವಿಚಾರಗಳನ್ನು ಫೆಬ್ರುವರಿ 2ರಂದು ನಡೆದ ವಿಚಾರಣೆ ವೇಳೆ ಪರಿಗಣನೆಗೆ ತೆಗೆದುಕೊಂಡ ಹೈಕೋರ್ಟ್ ನ್ಯಾಯಪೀಠ, ಆರೋಪಿಯು ನ್ಯಾಯಾಂಗ ವ್ಯವಸ್ಥೆಗಿರುವ ಗೌರವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ. ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸದೇ ಬೇರೆ ದಾರಿ ಇಲ್ಲ ಎಂದು ಆದೇಶ ಹೊರಡಿಸಿತು.

ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ