AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳಲ್ಲದೇ ಮತ್ತಿನ್ನೇನು? BC ಪಾಟೀಲ್ ಪರ ಮಗಳ ಬ್ಯಾಟಿಂಗ್

ಕೃಷಿ ಸಚಿವರು ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ ಅಂತ ಹೇಳಿರುವುದರಲ್ಲಿ ತಪ್ಪೇನಿದೆ. ಜೀವ ಮತ್ತು ಜೀವನ ಇರೋದೇ ಒಂದು. ಇದ್ದು ಜಯಿಸಬೇಕೇ ಹೊರತು ಆತ್ಮಹತ್ಯೆಯನ್ನು ಮಾಡಿಕೊಳ್ಳುವುದು ಸರಿ ಅಲ್ಲ.

ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳಲ್ಲದೇ ಮತ್ತಿನ್ನೇನು? BC ಪಾಟೀಲ್ ಪರ ಮಗಳ ಬ್ಯಾಟಿಂಗ್
ಕೃಷಿ ಸಚಿವ ಬಿ.ಸಿ.ಪಾಟೀಲ್​ ಮತ್ತು ಅವರ ಪುತ್ರಿ ಸೃಷ್ಟಿ ಪಾಟೀಲ್
Skanda
| Edited By: ಸಾಧು ಶ್ರೀನಾಥ್​|

Updated on:Dec 03, 2020 | 4:55 PM

Share

ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳಿಕೆ ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಕೃಷಿ ಸಚಿವರು ಇಂತಹ ಹೇಳಿಕೆಯನ್ನು ನೀಡುವ ಮೂಲಕ ರೈತರನ್ನು ಲೇವಡಿ ಮಾಡಿದ್ದಾರೆ ಎಂದು ಕೆಲವೆಡೆ ಆರೋಪ ವ್ಯಕ್ತವಾಗಿದೆ. ಬಿ.ಸಿ. ಪಾಟೀಲ್ ಹೇಳಿಕೆಗೆ ವಿರೋಧ ಆರಂಭವಾಗುತ್ತಿದ್ದಂತೆಯೇ ಅವರ ಪುತ್ರಿ ಸೃಷ್ಟಿ ಪಾಟೀಲ್ ತಂದೆಯ ಬೆನ್ನಿಗೆ ನಿಂತಿದ್ದಾರೆ.

ಯಾರೇ ಆತ್ಮಹತ್ಯೆ ಮಾಡಿಕೊಂಡರೂ ಅದು ಹೇಡಿತನದ ಕೆಲಸ. ಕೃಷಿ ಸಚಿವರು ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ ಅಂತ ಹೇಳಿರುವುದರಲ್ಲಿ ತಪ್ಪೇನಿದೆ. ಜೀವ ಮತ್ತು ಜೀವನ ಇರೋದೇ ಒಂದು. ಇದ್ದು ಜಯಿಸಬೇಕೇ ಹೊರತು ಆತ್ಮಹತ್ಯೆಯನ್ನು ಮಾಡಿಕೊಳ್ಳುವುದು ಸರಿ ಅಲ್ಲ. ಅವರು ರೈತರಾಗಲಿ ಅಥವಾ ಬೇರೆ ಯಾರೇ ಆಗಲಿ ಆತ್ಮಹತ್ಯೆಗೆ ಶರಣಾದಾಗ ಅವರ ಹೆಂಡತಿ ಮಕ್ಕಳು ಹಾಗೂ ಸಂಬಂಧಿಕರ ಗತಿ ಏನು ಎಂದು ಟ್ವೀಟ್ ಮಾಡುವ ಮೂಲಕ ಅಪ್ಪನ ಪರ ಬ್ಯಾಟಿಂಗ್ ಮಾಡಿದ್ದಾರೆ.

ಬಿ.ಸಿ. ಪಾಟೀಲ್ ಹೇಳಿಕೆಯನ್ನು ವಿವಾದ ಮಾಡಿದ ಕಾರಣಕ್ಕೆ ಕೆಲ ಮಾಧ್ಯಮಗಳ ಮೇಲೆ ಕಿಡಿಕಾರಿರುವ ಸೃಷ್ಟಿ ಪಾಟೀಲ್, ಟ್ವಿಟರ್​ನಲ್ಲಿ ಮೇಲಿನಂತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಆತ್ಮಹತ್ಯೆ ಮಾಡಿಕೊಳ್ಳೋ ರೈತರು ಹೇಡಿಗಳು.. ಹೆಂಡತಿ, ಮಕ್ಕಳನ್ನ ನೋಡಿಕೊಳ್ಳಲಾರದವನು ಹೇಡಿ’

Published On - 4:54 pm, Thu, 3 December 20

Follow Us
Skanda
Skanda
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?