AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 23ರವರೆಗೆ ರಾಜ್ಯದ ಎಲ್ಲ ಉಪ ನೋಂದಣಿ ಕಚೇರಿ ಸ್ಥಗಿತ

ನಗರಾಭಿವೃದ್ಧಿ, ಆಹಾರ, ಇಂಧನ, ಆರ್ಥಿಕ, ಪಶು ಸಂಗೋಪನೆ, ಆಡಳಿತ ಸುಧಾರಣಾ ಇಲಾಖೆ, ಮೀನುಗಾರಿಕೆ, ಕೃಷಿ, ವಾಣಿಜ್ಯ, ಕೈಗಾರಿಕಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಶೇಕಡಾ 50ರಷ್ಟು ಹಾಜರಾತಿಯಲ್ಲಿರಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುತ್ತೋಲೆ ಪ್ರಕಟಿಸಿದ್ದಾರೆ.

ಮೇ 23ರವರೆಗೆ ರಾಜ್ಯದ ಎಲ್ಲ ಉಪ ನೋಂದಣಿ ಕಚೇರಿ ಸ್ಥಗಿತ
ಸಾಂಕೇತಿಕ ಚಿತ್ರ
guruganesh bhat
|

Updated on: May 10, 2021 | 10:53 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಸ್ಥಗಿತಗೊಳ್ಳಲಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಜತೆಗೆ ಜಿಲ್ಲಾ ಉಪ ನೋಂದಣಿ ಕಚೇರಿಗಳು ಸಹ ಸ್ಥಗಿತಗೊಳ್ಳಲಿವೆ ಎಂದು ಸರ್ಕಾರ ತಿಳಿಸಿದೆ. ಮೇ 23ರವರೆಗೆ ಕಚೇರಿ ಬಂದ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದ್ದು, ಅಗತ್ಯ ಸೇವಾ ವ್ಯಾಪ್ತಿಯ ವೈದ್ಯಕೀಯ ಶಿಕ್ಷಣ, ಆರೋಗ್ಯ, ಒಳಾಡಳಿತ, ಕಂದಾಯ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ‌, ಮಕ್ಕಳ ಕಲ್ಯಾಣ ಇಲಾಖೆ ಎಲ್ಲ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುತ್ತೋಲೆ ಪ್ರಕಟಿಸಿದ್ದಾರೆ. ನಗರಾಭಿವೃದ್ಧಿ, ಆಹಾರ, ಇಂಧನ, ಆರ್ಥಿಕ, ಪಶು ಸಂಗೋಪನೆ, ಆಡಳಿತ ಸುಧಾರಣಾ ಇಲಾಖೆ, ಮೀನುಗಾರಿಕೆ, ಕೃಷಿ, ವಾಣಿಜ್ಯ, ಕೈಗಾರಿಕಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಶೇಕಡಾ 50ರಷ್ಟು ಹಾಜರಾತಿಯಲ್ಲಿರಬೇಕು. ಪಾಳಿ ಪ್ರಕಾರದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲಾಕ್​ಡೌನ್ ಅವಧಿ ಮುಗಿಯುವರೆಗೆ ಈ ನಿರ್ದೇಶನ ಅನ್ವಯವಾಗಲಿದೆ ಎಂದು ಸುತ್ತೋಲೆ ತಿಳಿಸಿದೆ.

ಕರ್ನಾಟಕದಲ್ಲಿ ಇಂದು ಪತ್ತೆಯಾದ ಸೋಂಕಿತರೆಷ್ಟು?  ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 39,305 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊವಿಡ್ 19ರಿಂದ 596 ಜನರ ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರಿನಲ್ಲಿ 16,747 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 374 ಜನರು ರಾಜಧಾನಿಯೊಂದರಲ್ಲೇ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗಿನ ಕೊರೊನಾ ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿದ್ದು, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 9,67,640ಕ್ಕೆ ಏರಿಕೆಯಾಗಿದೆ. 571006 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಮೃತಪಟ್ಟವರನ್ನೂ ಸೇರಿ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 19,372 ಜನರ ಸಾವನ್ನಪ್ಪಿದ್ದು, 5,71,006 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 8,431 ಜನರ ಸಾವನ್ನಪ್ಪಿದ್ದು, 3,52,454 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಹತ್ತಿರದ ಅಂಗಡಿಗೆ ತೆರಳಲು ವಾಹನ ಬಳಸಬಹುದು, ಅವಕಾಶ ದುರ್ಬಳಕೆ ಮಾಡಿಕೊಳ್ಳುವಂತಿಲ್ಲ: ಪ್ರವೀಣ್ ಸೂದ್ 

16 ಜನರ ಮೇಲೆ ಅಪರಾಧ ಹೊರಿಸಿದ್ದು ನಾನಲ್ಲ; ಅವರನ್ನು ಬಿಬಿಎಂಪಿ ಮೊದಲೇ ಕೆಲಸದಿಂದ ತೆಗೆದಿತ್ತು- ಸಂಸದ ತೇಜಸ್ವಿ ಸೂರ್ಯ

(Karnataka all sub registrar offices are closed till May 23rd due to lockdown)

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ