ಮೇ 23ರವರೆಗೆ ರಾಜ್ಯದ ಎಲ್ಲ ಉಪ ನೋಂದಣಿ ಕಚೇರಿ ಸ್ಥಗಿತ

ನಗರಾಭಿವೃದ್ಧಿ, ಆಹಾರ, ಇಂಧನ, ಆರ್ಥಿಕ, ಪಶು ಸಂಗೋಪನೆ, ಆಡಳಿತ ಸುಧಾರಣಾ ಇಲಾಖೆ, ಮೀನುಗಾರಿಕೆ, ಕೃಷಿ, ವಾಣಿಜ್ಯ, ಕೈಗಾರಿಕಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಶೇಕಡಾ 50ರಷ್ಟು ಹಾಜರಾತಿಯಲ್ಲಿರಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುತ್ತೋಲೆ ಪ್ರಕಟಿಸಿದ್ದಾರೆ.

ಮೇ 23ರವರೆಗೆ ರಾಜ್ಯದ ಎಲ್ಲ ಉಪ ನೋಂದಣಿ ಕಚೇರಿ ಸ್ಥಗಿತ
ಸಾಂಕೇತಿಕ ಚಿತ್ರ

Updated on: May 10, 2021 | 10:53 PM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ಉಪ ನೋಂದಣಿ ಕಚೇರಿಗಳು ಸ್ಥಗಿತಗೊಳ್ಳಲಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಜತೆಗೆ ಜಿಲ್ಲಾ ಉಪ ನೋಂದಣಿ ಕಚೇರಿಗಳು ಸಹ ಸ್ಥಗಿತಗೊಳ್ಳಲಿವೆ ಎಂದು ಸರ್ಕಾರ ತಿಳಿಸಿದೆ. ಮೇ 23ರವರೆಗೆ ಕಚೇರಿ ಬಂದ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದ್ದು, ಅಗತ್ಯ ಸೇವಾ ವ್ಯಾಪ್ತಿಯ ವೈದ್ಯಕೀಯ ಶಿಕ್ಷಣ, ಆರೋಗ್ಯ, ಒಳಾಡಳಿತ, ಕಂದಾಯ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ‌, ಮಕ್ಕಳ ಕಲ್ಯಾಣ ಇಲಾಖೆ ಎಲ್ಲ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸುತ್ತೋಲೆ ಪ್ರಕಟಿಸಿದ್ದಾರೆ. ನಗರಾಭಿವೃದ್ಧಿ, ಆಹಾರ, ಇಂಧನ, ಆರ್ಥಿಕ, ಪಶು ಸಂಗೋಪನೆ, ಆಡಳಿತ ಸುಧಾರಣಾ ಇಲಾಖೆ, ಮೀನುಗಾರಿಕೆ, ಕೃಷಿ, ವಾಣಿಜ್ಯ, ಕೈಗಾರಿಕಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಶೇಕಡಾ 50ರಷ್ಟು ಹಾಜರಾತಿಯಲ್ಲಿರಬೇಕು. ಪಾಳಿ ಪ್ರಕಾರದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲಾಕ್​ಡೌನ್ ಅವಧಿ ಮುಗಿಯುವರೆಗೆ ಈ ನಿರ್ದೇಶನ ಅನ್ವಯವಾಗಲಿದೆ ಎಂದು ಸುತ್ತೋಲೆ ತಿಳಿಸಿದೆ.

ಕರ್ನಾಟಕದಲ್ಲಿ ಇಂದು ಪತ್ತೆಯಾದ ಸೋಂಕಿತರೆಷ್ಟು? 
ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 39,305 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊವಿಡ್ 19ರಿಂದ 596 ಜನರ ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರಿನಲ್ಲಿ 16,747 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 374 ಜನರು ರಾಜಧಾನಿಯೊಂದರಲ್ಲೇ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗಿನ ಕೊರೊನಾ ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿದ್ದು, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 9,67,640ಕ್ಕೆ ಏರಿಕೆಯಾಗಿದೆ. 571006 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಮೃತಪಟ್ಟವರನ್ನೂ ಸೇರಿ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 19,372 ಜನರ ಸಾವನ್ನಪ್ಪಿದ್ದು, 5,71,006 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 8,431 ಜನರ ಸಾವನ್ನಪ್ಪಿದ್ದು, 3,52,454 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಹತ್ತಿರದ ಅಂಗಡಿಗೆ ತೆರಳಲು ವಾಹನ ಬಳಸಬಹುದು, ಅವಕಾಶ ದುರ್ಬಳಕೆ ಮಾಡಿಕೊಳ್ಳುವಂತಿಲ್ಲ: ಪ್ರವೀಣ್ ಸೂದ್ 

16 ಜನರ ಮೇಲೆ ಅಪರಾಧ ಹೊರಿಸಿದ್ದು ನಾನಲ್ಲ; ಅವರನ್ನು ಬಿಬಿಎಂಪಿ ಮೊದಲೇ ಕೆಲಸದಿಂದ ತೆಗೆದಿತ್ತು- ಸಂಸದ ತೇಜಸ್ವಿ ಸೂರ್ಯ

(Karnataka all sub registrar offices are closed till May 23rd due to lockdown)