Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕ ಹಿಂಜರಿತದ ನಡುವೆಯೇ ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ; ಕೇಳಿಬಂತು ಟೀಕೆ

ಬಸವಣ್ಣನವರ ಪ್ರತಿಮೆಯನ್ನು ನಿರ್ಮಿಸುವ ನಿರ್ಧಾರದ ಬಗ್ಗೆ ಕಾಂಗ್ರೆಸ್​ ಮುಖಂಡ ರೆಹಮಾನ್​ ಖಾನ್​ ಪ್ರತಿಕ್ರಿಯಿಸಿ, ವಿಧಾನಸೌಧ ಆವರಣದಲ್ಲಿ ಪ್ರತಿಮೆಗಳೇ ತುಂಬಿಹೋಗಲಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡಿಸಿದ್ದಾರೆ.

ಆರ್ಥಿಕ ಹಿಂಜರಿತದ ನಡುವೆಯೇ ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ; ಕೇಳಿಬಂತು ಟೀಕೆ
ಪಿಟಿಐ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jul 15, 2021 | 4:10 PM

ಬೆಂಗಳೂರು: ಆರ್ಥಿಕ ಬಿಕ್ಕಟ್ಟಿನ ಮಧ್ಯೆ, ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ವಿಧಾನಸೌಧ ಆವರಣದಲ್ಲಿ ಸಮಾಜ ಸುಧಾರಕ ಬಸವಣ್ಣನವರ ಪ್ರತಿಮೆ ನಿರ್ಮಿಸಲು ಅನುಮೋದನೆ ನೀಡಿದೆ. 12ನೇ ಶತಮಾನದ ತತ್ವಜ್ಞಾನಿ ಮತ್ತು ಲಿಂಗಾಯತ ಪಂಥದ ಸ್ಥಾಪಕ ಬಸವೇಶ್ವರ ಪ್ರತಿಮೆ ಸ್ಥಾಪನೆಯ ಮೂಲಕ ಮುಖ್ಯಮಂತ್ರಿ ನಾಯಕತ್ವ ಬದಲಾವಣೆಯ ಭೀತಿಯ ಮಧ್ಯೆ ಲಿಂಗಾಯತ ಸಮುದಾಯವನ್ನು ಮೆಚ್ಚಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಇವುಗಳ ಮಧ್ಯೆ ಬಸವಣ್ಣನವರ ಪ್ರತಿಮೆ ನಿರ್ಮಿಸುವ ನಿರ್ಧಾರದ ಬಗ್ಗೆ ಕಾಂಗ್ರೆಸ್​ ಮುಖಂಡ ರೆಹಮಾನ್​ ಖಾನ್​ ಪ್ರತಿಕ್ರಿಯಿಸಿ, ವಿಧಾನಸೌಧದ ಆವರಣದಲ್ಲಿ ಪ್ರತಿಮೆಗಳೇ ತುಂಬಿಹೋಗಲಿವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡಿಸಿದ್ದಾರೆ. ರೆಹಮಾನ್​ ಖಾನ್​ ಅವರ ಮಾತಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ, ಇಲ್ಲಿ ಯಾರನ್ನೂ ಸಮಾಧಾನಪಡಿಸುವ ಪ್ರಶ್ನೆಯೇ ಇಲ್ಲ. ಅವರ ಹೇಳಿಕೆಗಳು ಕಾಂಗ್ರೆಸ್​ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಅಷ್ಟೇ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರವು ಬಸವಕಲ್ಯಾಣದಲ್ಲಿ ₹ 500 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಕಾಮಗಾರಿ ಆರಂಭಿಸಿದೆ. ಏತನ್ಮಧ್ಯೆ ಬಸವಣ್ಣನವರ ಪ್ರತಿಮೆ ನಿರ್ಮಿಸಲು ಮುಂದಾಗಿದೆ.

ಬಿಕ್ಕಟ್ಟು ನಿರ್ವಹಣೆ ಮಾಹಿತಿ ನೀಡಲು ಸಿದ್ದರಾಮಯ್ಯ ಆಗ್ರಹ ಕೊವಿಡ್​ 19 ಬಿಕ್ಕಟ್ಟು ನಿರ್ವಹಣೆ, ರಾಜ್ಯದ ಆರ್ಥಿಕ ಪರಿಸ್ಥಿತಿ, ವ್ಯಾಕ್ಸಿನೇಷನ್​ ಡ್ರೈವ್​ ಮತ್ತು ಭ್ರಷ್ಟಾಚಾರ ಆರೋಪಗಳ ಬಗ್ಗೆ ಚರ್ಚೆ ನಡೆಸಲು ಕರ್ನಾಟಕ ವಿಧಾನಸಭೆ ಅಧಿವೇಶನವನ್ನು ಕರೆಯಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ  ಯಡಿಯೂರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.  ರಾಜ್ಯದ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರವು ಎರಡನೇ ಅಲೆಯನ್ನು ನಿರ್ವಹಿಸಿದ ರೀತಿ ಅಜಾಗರೂಕತೆಗೆ ಕಾರಣವಾಯಿತು ಇದು ರಾಜ್ಯದ ಜನರಿಗೆ ಮಾರಕವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕೊವಿಡ್​ 19 ಮೂರನೇ ಅಲೆಯ ಭಯ ಈಗಾಗಲೇ ಇದೆ ಇದನ್ನು ನಿಭಾಯಿಸಲು ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ

ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಗೆ ಸ್ಥಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

Published On - 3:56 pm, Thu, 15 July 21