ಬೆಂಗಳೂರು: ಉಪಚುನಾವಣೆ ಸಮೀಪಿಸುತ್ತಿದ್ದಂತೆ ಮೂರು ಪಕ್ಷದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೊನ್ನೆಯಷ್ಟೇ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿತ್ತು. ಇದೀಗ ಜೆಡಿಎಸ್ ಸಹ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, JDS ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಮೊದಲ ಸ್ಥಾನವಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಎರಡನೇ ಸ್ಥಾನ ನೀಡಲಾಗಿದ್ದು, JDS ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ 3ನೇ ಸ್ಥಾನದಲ್ಲಿದ್ದಾರೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣ 4ನೇ ಸ್ಥಾನದಲ್ಲಿದ್ದರೆ, ಜಿ.ಟಿ.ದೇವೇಗೌಡರಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಿಲ್ಲ.
ಇತ್ತೀಚಿಗೆ ಜೆಡಿಎಸ್ ಪಕ್ಷದಿಂದ ದೂರ ಉಳಿದು ಜಿ.ಟಿ.ದೇವೇಗೌಡರು ಹೆಚ್ಚಾಗಿ ಬಿಜೆಪಿ ನಾಯಕರ ಜೊತೆ ಗುರುತಿಸಿಕೊಳ್ಳುತ್ತಿದ್ದರು. ಇದೀಗ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಜಿಟಿಡಿ ಹೆಸರನ್ನು ಜೆಡಿಎಸ್ ವರಿಷ್ಠರು ಕೈಬಿಟ್ಟಿದ್ದಾರೆ.
Published On - 7:46 pm, Mon, 18 November 19