ಚನ್ನಪಟ್ಟಣದಲ್ಲಿ ಕಾಂಗ್ರೆಸ್​, JDS ಮಧ್ಯೆ ಬೆಟ್ಟಿಂಗ್ ಭರಾಟೆ: ಯಾರು ಫೆವರೇಟ್…?

ಸೋಲು, ಗೆಲುವಿನ ಜಿದ್ದಾಜಿದ್ದಿ.. ಟಫ್​ ಪೈಟ್​.. ಕೂದಲೆಳೆ ಅಂತರದಲ್ಲಿ ಗೆಲ್ಲೋ ವಿಶ್ಲೇಷಣೆ.. ಬೈಎಲೆಕ್ಷನ್​ ರಿಸಲ್ಟ್​ ಮೇಲೆ ಇಡೀ ರಾಜ್ಯದ ಚಿತ್ತ ನೆಟ್ಟಿದೆ. 3 ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಪ್ರಕಟಕ್ಕೆ ಕೇವಲ 1 ದಿನ ಅಷ್ಟೇ ಬಾಕಿ ಇದೆ. ಇದರ ಮಧ್ಯೆಯೇ ಸಾಕಷ್ಟು ಕುತೂಹಲ ಹುಟ್ಟಿಸಿರೋ, ಹೈವೋಲ್ಟೇಜ್ ಕದನ ಕಣವಾಗಿರೋ ಚನ್ನಪಟ್ಟಣದಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿಯೇ ನಡೆದಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್​, JDS ಮಧ್ಯೆ ಬೆಟ್ಟಿಂಗ್ ಭರಾಟೆ: ಯಾರು ಫೆವರೇಟ್...?
ಯೋಗೇಶ್ವರ್, ನಿಖಿಲ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 21, 2024 | 5:23 PM

ಬೆಂಗಳೂರು, (ನವೆಂಬರ್ 21):  ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಅಭ್ಯರ್ಥಿಗಳಿಗೆ ಎದೆಯಲ್ಲಿ ಡವಡವ ಶುರುವಾಗಿದೆ. ಕೇವಲ ಅಭ್ಯರ್ಥಿಗಳು ಮಾತ್ರವಲ್ಲ ಕಾರ್ಯಕರ್ತರನ್ನೂ ಫಲಿತಾಂಶದ ಕುತೂಹಲ ಹೆಚ್ಚಿಸಿದೆ.ಅದರಲ್ಲೂ ಗೊಂಬೆನಾಡು ಚನ್ನಪಟ್ಟಣದ ಸಾಮ್ರಾಜ್ಯಾಧಿಪತಿ ಯಾರಾಗುತ್ತಾರೆ ಎನ್ನುವುದು ಸಾಕಷ್ಟು ಕುತೂಹಲವನ್ನೇ ಹುಟ್ಟಿಸಿದೆ. ಎನ್​ಡಿಎ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ, ಕಾಂಗ್ರೆಸ್​ ಅಭ್ಯರ್ಥಿ ಯೋಗೇಶ್ವರ್ ಮಧ್ಯೆ ಟಫ್ ಫೈಟ್ ನಡೆಯುತ್ತಿದೆ. ಯಾರು ಗೆಲ್ಲುತ್ತಾರೆ ಎಂದು ವಿಶ್ಲೇಷಣೆ ಮಾಡುವುದಕ್ಕೆ ಆಗದಿರುವಷ್ಟು ಜಿದ್ದಾಜಿದ್ದಿ ಏರ್ಪಟ್ಟಿದೆ. ಇದರಿಂದ ಬೆಟ್ಟಿಂಗೆ ಭರಾಟೆ ಜೋರಾಗಿದೆ.  ಚನ್ನಪಟ್ಟಣ, ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಬೆಟ್ಟಿಂಗ್ ಭರಾಟೆ ಜೋರಾಗಿದೆ.

NDA ಅಭ್ಯರ್ಥಿ ನಿಖಿಲ್ ಪರವಾಗಿ ಹೆಚ್ಚು ಬೆಟ್ಟಿಂಗ್!

ಮಂಡ್ಯದಲ್ಲೂ ಚನ್ನಪಟ್ಟಣ ಅಭ್ಯರ್ಥಿಯ ಪರ ಬೆಟ್ಟಿಂಗ್ ನಡೆದಿದೆ. ತಮ್ಮ ಅಭ್ಯರ್ಥಿ ಗೆಲುವು ಖಚಿತವೆಂದು ಕಾರ್ಯಕರ್ತರು ಬೆಟ್ಟಿಂಗ್ ಕಟ್ಟಿದ್ದಾರೆ. ಕಾರ್ಯಕರ್ತರು, ಆತ್ಮೀಯರು ಮತ್ತು ಪರಿಚಯಸ್ಥರ ಮಧ್ಯೆ ಬೆಟ್ಟಿಂಗ್ ನಡೆದಿದೆ. ಅರಂಭದಲ್ಲಿ ಯೋಗೇಶ್ವರ್ ಪರ ಹೆಚ್ಚು ಬೆಟ್ಟಿಂಗ್ ಕಟ್ತಿದ್ದ ಕಾರ್ಯಕರ್ತರು ಇದೀಗ ನಿಖಿಲ್ ಕುಮಾರಸ್ವಾಮಿ ಪರ ಹೆಚ್ಚು ಬಾಜಿ ಕಟ್ತಿದ್ದಾರೆ. ಕೋಟಿ ಕೋಟಿ ಎಂಬಂತೆ ಬೆಟ್ಟಿಂಗ್ ನಡೆದಿದೆ. ಇದಕ್ಕೆ ಕಾರಣವೇ ಫಲಿತಾಂಶಕ್ಕೂ ಮುನ್ನ ಸಿಪಿ.ಯೋಗೇಶ್ವರ್ ಆಡಿದ ಸೋಲಿನ ಮಾತು.

ಇದನ್ನೂ ಓದಿ: Karnataka Assembly ByElection 2024 Result Date: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಮತಎಣಿಕೆ ಯಾವಾಗ?

ಹೌದು..ಮೊನ್ನೇ ಬಹಿರಂಗವಾಗಿಯೇ ಸಿ.ಪಿ.ಯೋಗೇಶ್ವರ್  ಆಡಿದ ಸೋಲಿನ ಮಾತಿನಿಂದ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಬೆಟ್ಟಿಂಗ್ ಕಟ್ಟುವುದಕ್ಕೆ ಹಿಂದೇಟು ಹಾಕ್ತಿದ್ದಾರಂತೆ. ಒನ್ ಸೈಡ್​ ಗೆಲುವಿನ ಲೆಕ್ಕಾಚಾರದಲ್ಲಿರೋ ಕಾಂಗ್ರೆಸ್​ ಕಾರ್ಯಕರ್ತರು ಅತಿಯಾದ ಆತ್ಮವಿಶ್ವಾಸವೂ ತೋರಿಸುತ್ತಿಲ್ಲ ಎನ್ನಲಾಗಿದೆ.

ಹೈವೋಲ್ಟೇಜ್​ ಶಿಗ್ಗಾಂವಿ ಕ್ಷೇತ್ರದಲ್ಲೂ ಬೆಟ್ಟಿಂಗ್ ಭರಾಟೆ!

ಇನ್ನು ಹೈವೋಲ್ಟೇಜ್​ ಕದನ ಕಣವಾಗಿರುವ ಶಿಗ್ಗಾಂವಿಯಲ್ಲೂ ಬಾಜಿ ಭರಾಟೆ ಜೋರಾಗಿದೆ. ಅದರಲ್ಲೂ ಈ ಬಾರಿ ಸಂಸದ, ಮಾಜಿ ಸಿಎಂ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋದ್ರಿಂದ, ತೀವ್ರ ಕುತೂಹಲ ಮೂಡಿಸಿದೆ. ಶಿಗ್ಗಾಂವಿಯ ಹಳ್ಳಿಯೊಂದರಲ್ಲಿ ಜೋಡೆತ್ತುಗಳನ್ನ ಬಾಜಿ ಕಟ್ಟೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಒಬ್ಬರಿಗೊಬ್ಬರು ಜೋಡೆತ್ತುಗಳನ್ನ ಬಾಜಿ ಕಟ್ಟಿ ನಮ್ಮ ಅಭ್ಯರ್ಥಿಯೇ ಗೆಲ್ಲುವುದು ಎಂದು ಚಾಲೆಂಜ್ ಹಾಕಿದ್ದಾರೆ. ಇನ್ನು ಶಿಗ್ಗಾಂವಿಯಲ್ಲಿ ಈ ಬಾರಿಯೂ ಬಿಜೆಪಿ ಗೆಲ್ಲಲಿದೆ ಎನ್ನುವ ಚರ್ಚೆ ಕ್ಷೇತ್ರದಲ್ಲಿ ಜೋರಾಗಿದೆ.

ಸಂಡೂರು ಕಥೆ ಏನು?

ಎರಡೂ ಕ್ಷೇತ್ರಗಳಿಗೆ ಹೋಲಿಸಿದರೆ ಸಂಡೂರಿನಲ್ಲಿ ಅಷ್ಟೇನು ಬೆಟ್ಟಿಂಗ್ ನಡೆಯುತ್ತಿಲ್ಲ. ಕಾಂಗ್ರೆಸ್​​ನ ಭದ್ರಕೋಟೆಯಾಗಿರುವ ಸಂಡೂರಿನಲ್ಲಿ ಈ ಬಾರಿಯೂ ಕೈವಶವಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಸಮೀಕ್ಷೆಗಳ ಪ್ರಕಾರ ಸಂಡೂರಿನಲ್ಲಿ ಕಾಂಗ್ರೆಸ್​, ಚನ್ನಪಟ್ಟಣ ಜೆಡಿಎಸ್​ ಹಾಗೂ ಶಿಗ್ಗಾಂವಿ ಬಿಜೆಪಿ ಪಾಲಾಗಲಿದೆ ಎಂದು ತಿಳಿಸಿವೆ. ಅದರಲ್ಲೂ ಹೇಳಿ ಕೇಳಿ ಕಾಂಗ್ರೆಸ್​ನ ಭದ್ರಕೋಟೆಯಾಗಿರುವುದರಿಂದ ಬಿಜೆಪಿ ಕಾರ್ಯಕರ್ತರು ಬೆಟ್ಟಿಂಗ್ ಕಟ್ಟುತ್ತಿಲ್ಲ ಎನ್ನಲಾಗಿದೆ. ಆದ್ರೆ, ಬಿಜೆಪಿ ನಾಯಕರು ಗೆಲುವಿನ ಆಶಾಭಾವನೆ ಹೊಂದಿದ್ದಾರೆ. ಆಡಳಿತ ವಿರೋಧಿ ಅಲೆ ಇದ್ದಿದ್ದರಿಂದ ಈ ಬಾರಿ ಮತದಾರ ಹೊಸ ಬದಲಾವಣೆ ಬಯಸಿ ಬಿಜೆಪಿಗೆ ಆಶೀರ್ವಾದ ಮಾಡಿದ್ದಾನೆ ಎನ್ನುವ ವಿಶ್ವಾಸದಲ್ಲಿ ಬಿಜೆಪಿ ನಾಯಕರು ಇದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್