Karnataka Assembly By-Election 2024 Result Date: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಮತಎಣಿಕೆ ಯಾವಾಗ?

|

Updated on: Nov 21, 2024 | 6:02 PM

Channapatna, Sandur, Shiggaon Vidhan Sabha ByPolls 2024 Result Date, Time: ಈಗಾಗಲೇ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಉಪಚುನಾವಣೆಯ ಮತದಾನ ಮುಕ್ತಾಯವಾಗಿದೆ. ಎಕ್ಸಿಟ್ ಪೋಲ್ ಸಮೀಕ್ಷೆಯ ಪ್ರಕಾರ ಈ ಮೂರು ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಹಾಗೂ ಒಂದರಲ್ಲಿ ಕಾಂಗ್ರೆಸ್ ಗೆಲುವು ಕಾಣಲಿದೆ. ಹಾಗಾದರೆ, ಈ ಮೂರು ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟವಾಗುವುದು ಯಾವಾಗ? ಎಂಬ ಕುರಿತು ಮಾಹಿತಿ ಇಲ್ಲಿದೆ.

Karnataka Assembly By-Election 2024 Result Date: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳ ಉಪಚುನಾವಣೆ ಮತಎಣಿಕೆ ಯಾವಾಗ?
karnataka polls
Follow us on

ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಉಪಚುನಾವಣೆ ನಡೆದಿದೆ. ಬಹಳ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ನವೆಂಬರ್ 23ಕ್ಕೆ ಪ್ರಕಟವಾಗಲಿದೆ. ನಿನ್ನೆಯಷ್ಟೇ ಚುನಾವಣೋತ್ತರ ಸಮೀಕ್ಷೆಗಳು ಕೂಡ ಹೊರಬಿದ್ದಿದ್ದು, ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಕೂಟ ಗೆಲ್ಲುವ ಸಾಧ್ಯತೆಯಿದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ.

ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಸೋಲನ್ನಪ್ಪಿ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಚನ್ನಪಟ್ಟಣ ಜೆಡಿಎಸ್​ ಭದ್ರಕೋಟೆಯಾಗಿದ್ದರೂ ಇದು ಡಿಕೆ ಬ್ರದರ್ಸ್​ಗೆ ಪ್ರತಿಷ್ಠೆಯ ಕಣವಾಗಿತ್ತು.

ಇದನ್ನೂ ಓದಿ: Jharkhand Exit Poll: ಜಾರ್ಖಂಡ್​ನಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಪರ ಎಕ್ಸಿಟ್ ಪೋಲ್ ಫಲಿತಾಂಶ

ಶಿಗ್ಗಾಂವಿಯಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಶಿಗ್ಗಾಂವಿಯಲ್ಲಿ ಈ ಬಾರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅವರ ವಿರುದ್ಧ ಕಾಂಗ್ರೆಸ್ ಯಾಸಿರ್ ಅಹಮದ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿತ್ತು. ಮುಸ್ಲಿಮರ ಪ್ರಾಬಲ್ಯವಿರುವ ಈ ಕ್ಷೇತ್ರದಲ್ಲಿ ಲಿಂಗಾಯತರ ಮತಗಳೂ ನಿರ್ಣಾಯಕವಾಗಿವೆ. ಈ ಬಾರಿ ಇಲ್ಲಿನ ಮತದಾರರು ಬಿಜೆಪಿಯತ್ತ ಒಲವು ತೋರಿದ್ದಾರೆ ಎಂದು ಎಕ್ಸಿಟ್ ಪೋಲ್ ಫಲಿತಾಂಶ ಹೇಳಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: ಇವಿಎಂಗಳಲ್ಲಿ ಕನ್ನಡದಲ್ಲಿಯೂ ಕಾಣಿಸಿದ ಅಭ್ಯರ್ಥಿಗಳ ಹೆಸರು!

ಇನ್ನು, ಸಂಡೂರು ಕ್ಷೇತ್ರ ಈ ಬಾರಿ ಕಾಂಗ್ರೆಸ್ ಪಾಲಾಗುವ ಸಾಧ್ಯತೆಯಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್​ನ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಕೂಡ ಈ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸದಲ್ಲಿದೆ.

ಒಟ್ಟಾರೆ, ಈ ಮೂರು ಕ್ಷೇತ್ರಗಳಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲಕ್ಕೆ ನವೆಂಬರ್ 23ರಂದು ತೆರೆ ಬೀಳಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Thu, 21 November 24