AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ವಿವಿ ವಿಧೇಯಕಕ್ಕೆ ಅಂಗೀಕಾರ: ಇಂಥ ಇನ್ನೂ 10 ವಿವಿಗಳು ಬಂದ್ರೂ ಸೌಲಭ್ಯ ಕೊಡ್ತೇವೆ ಎಂದ ಸಿಎಂ

ಇಂಥ ಶಿಕ್ಷಣ ಸಂಸ್ಥೆಗಳಿಗೆ ಸಾಧ್ಯವಾದಷ್ಟೂ ಅನುಕೂಲ ಮಾಡಿಕೊಡಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರಕ್ಕೆ ಸಲಹೆ ಮಾಡಿದರು.

ಚಾಣಕ್ಯ ವಿವಿ ವಿಧೇಯಕಕ್ಕೆ ಅಂಗೀಕಾರ: ಇಂಥ ಇನ್ನೂ 10 ವಿವಿಗಳು ಬಂದ್ರೂ ಸೌಲಭ್ಯ ಕೊಡ್ತೇವೆ ಎಂದ ಸಿಎಂ
ಅಶ್ವತ್ಥ್ ನಾರಾಯಣ
TV9 Web
| Edited By: |

Updated on: Sep 21, 2021 | 10:49 PM

Share

ಬೆಂಗಳೂರು: ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಭೂಮಿ ನೀಡುವ ವಿಧೇಯಕ್ಕೆ ಕರ್ನಾಟಕ ವಿಧಾನಸಭೆ ಮಂಗಳವಾರ ಅನುಮೋದನೆ ನೀಡಿತು. ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಚಾಣಕ್ಯ ವಿವಿಗೆ ಭೂಮಿ ನೀಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದರು.

ಪ್ರತಿಪಕ್ಷ ಕಾಂಗ್ರೆಸ್​ನ ಸಿದ್ದರಾಮಯ್ಯ ಮತ್ತು ರಮೇಶ್​ ಕುಮಾರ್ ವಿಧೇಯಕಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರೈತರಿಂದ ಕೈಗಾರಿಕೆಗೆಂದು ವಶಪಡಿಸಿಕೊಂಡ ಭೂಮಿಯನ್ನು ಹೀಗೆ ಕಡಿಮೆ ದರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗೆ ನೀಡುವುದು ಕಾನೂನು ಬಾಹಿರ ಎಂದು ರಮೇಶ್​ ಕುಮಾರ್ ವಿಶ್ಲೇಷಿಸಿದರು.

ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟೊಯೊಟಾ ಕಾರ್ಖಾನೆಗೆ ಜಾಗ ಒದಗಿಸಿದಾಗ ನಾವು ವಿರೋಧಿಸಿದ್ದೆವು. ಅದರೆ ರಾಜ್ಯದ ಅಭಿವೃದ್ಧಿಗೆ ಅನಿವಾರ್ಯ ಎಂದು ನೀವು ಸಮಜಾಯಿಷಿ ಕೊಟ್ಟಿದ್ದಿರಿ. ಮಕ್ಕಳಿಗೆ ವಿದ್ಯೆ ಕೊಡುವ ಉದ್ದೇಶದಿಂದ ಬರುತ್ತಿರುವ ವಿಶ್ವವಿದ್ಯಾಲಯಕ್ಕೆ ಸರ್ಕಾರ ಭೂಮಿ ಒದಗಿಸಲಿದೆ. ಇಂಥ ಇನ್ನೂ 10 ವಿಶ್ವವಿದ್ಯಾಲಯಗಳು ಬಂದರೂ ಅಗತ್ಯ ಸೌಕರ್ಯ ಒದಗಿಸುತ್ತೇವೆ. ಇದು ನಮ್ಮ ಸರ್ಕಾರದ ನಿಲುವು ಎಂದು ಸ್ಪಷ್ಟಪಡಿಸಿದರು.

ವಿಧೇಯಕದ ಬಗ್ಗೆ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, ಈ ಹಿಂದೆಯೂ ಶಿಕ್ಷಣ ಸಂಸ್ಥೆಗಳಿಗೆ, ಹಲವು ವಿಶ್ವವಿದ್ಯಾಲಯಗಳಿಗೆ ಸರ್ಕಾರದಿಂದಲೇ ಜಾಗ ಕೊಡಲಾಗಿದೆ. ಚಾಣಕ್ಯ ವಿವಿ ಬಗ್ಗೆ ಯಾಕೆ ಬೊಟ್ಟುಮಾಡಿ ತೋರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಡಬೇಕು. ವಿಧಾನಸಭೆಯಲ್ಲಿ ಚಾಣಕ್ಯ ವಿವಿ ಬಿಲ್ ಪಾಸ್ ಮಾಡಲಾಗಿದೆ. ವಿಧಾನ ಪರಿಷತ್​ನಲ್ಲಿ ಚಾಣಕ್ಯ ವಿವಿ ಬಿಲ್ ಮಂಡಿಸಲಾಗಿದೆ. ಬಿಲ್​ ಅಂಗೀಕಾರವಾದ ನಂತರ ವಿವಿ ಆರಂಭಿಸಲಾಗುವುದು ಎಂದು ಹೇಳಿದರು.

ವಿಧೇಯಕ ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದರು. ಕಾಂಗ್ರೆಸ್ ಸಭಾತ್ಯಾಗ ನಡುವೆ ವಿಧೇಯಕ ಅಂಗೀಕಾರವಾಯಿತು. ಇಂಥ ಶಿಕ್ಷಣ ಸಂಸ್ಥೆಗಳಿಗೆ ಸಾಧ್ಯವಾದಷ್ಟೂ ಅನುಕೂಲ ಮಾಡಿಕೊಡಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರಕ್ಕೆ ಸಲಹೆ ಮಾಡಿದರು.

(Karnataka Assembly Gives nod to Chanakya University Bill)

ಇದನ್ನೂ ಓದಿ: ಆನ್​ಲೈನ್ ಜೂಜಿಗೆ ಕಡಿವಾಣ ಹಾಕುವ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

ಇದನ್ನೂ ಓದಿ: ರಿಯಲ್ ಎಸ್ಟೇಟ್​ಗೆ ತುಸು ಅನುಕೂಲ: ಮುದ್ರಾಂಕ ಶುಲ್ಕ ಕಡಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!