ವಿಧಾನಸಭೆ: ಭೂ ಕಂದಾಯ(ತಿದ್ದುಪಡಿ) ವಿಧೇಯಕ ಅಂಗೀಕಾರ

ಇಂದಿನ ವಿಧಾನಸಭೆ ಅಧಿವೇಶನದಲ್ಲಿ ಭೂ ಕಂದಾಯ(ತಿದ್ದುಪಡಿ) ವಿಧೇಯಕ ಅಂಗೀಕಾರ ಮಾಡಲಾಗಿದೆ. ಬಗರ್ ಹುಕುಂ ಸಮಿತಿಯಲ್ಲಿ ಸದಸ್ಯರಾಗಿ ಇರಲು ಇಚ್ಚೆ ಇಲ್ಲದ ಶಾಸಕರ ಕ್ಷೇತ್ರಗಳಲ್ಲಿ ಬೇರೆಯವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಲು ಅವಕಾಶ ಮಾಡಿಕೊಡುವ ವಿಧೇಯಕವನ್ನು ಕೂಡ ಅಂಗೀಕರಿಸಲಾಗಿದೆ.

ವಿಧಾನಸಭೆ: ಭೂ ಕಂದಾಯ(ತಿದ್ದುಪಡಿ) ವಿಧೇಯಕ ಅಂಗೀಕಾರ
ವಿಧಾನಸಭೆ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 23, 2024 | 12:31 PM

ಬೆಂಗಳೂರು, ಫೆಬ್ರವರಿ 23: ಇಂದಿನ ವಿಧಾನಸಭೆ ಅಧಿವೇಶನದಲ್ಲಿ ಭೂ ಕಂದಾಯ (Land Revenue) (ತಿದ್ದುಪಡಿ) ವಿಧೇಯಕ ಅಂಗೀಕಾರ ಮಾಡಲಾಗಿದೆ. ಬಗರ್ ಹುಕುಂ ಸಮಿತಿಯಲ್ಲಿ ಸದಸ್ಯರಾಗಿ ಇರಲು ಇಚ್ಚೆ ಇಲ್ಲದ ಶಾಸಕರ ಕ್ಷೇತ್ರಗಳಲ್ಲಿ ಬೇರೆಯವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಲು ಅವಕಾಶ ಮಾಡಿಕೊಡುವ ವಿಧೇಯಕವನ್ನು ಕೂಡ ಅಂಗೀಕರಿಸಲಾಗಿದೆ. ಕಳೆದ ವರ್ಷ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಭೂಕಂದಾಯ ಕಾಯ್ದೆ ಸೆಕ್ಷನ್ 95, 96ಕ್ಕೆ ತಿದ್ದುಪಡಿ ತರುವ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆ ಪ್ರಕ್ರಿಯೆ ಸರಳೀಕರಣವಾಗಿತ್ತು.

ಏನಿದು ಭೂ ಕಂದಾಯ (ತಿದ್ದುಪಡಿ) ವಿಧೇಯಕ?

ಕರ್ನಾಟಕ ಭೂ ಕಂದಾಯ ಅಥವಾ ಭೂ ಪರಿವರ್ತನೆ ವಿಧೇಯಕದಲ್ಲಿ ಕೃಷಿಯೇತರ ಉದ್ದೇಶಗಳಿಗಾಗಿ ಮಾಡಲಾಗಿರುವ ಭೂಮಿಯನ್ನು ಆ ಮಾಸ್ಟರ್ ಪ್ಲಾನ್​ನಲ್ಲಿ ಉಲ್ಲೇಖಿಸಿರುವ ಉದ್ದೇಶಗಳಿಗೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯವಿರುವುದಿಲ್ಲ.

ಇದನ್ನೂ ಓದಿ: Karnataka Budget Session: ಕೇಂದ್ರದ ವಿರುದ್ಧವೇ ಕರ್ನಾಟಕ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಯಾವುದೇ ಮಾಸ್ಟರ್ ಪ್ಲಾನ್ ಇಲ್ಲದ ಸ್ಥಳೀಯ ಯೋಜನಾ ಪ್ರದೇಶದ ಹೊರಗಿನ ಭೂಮಿಯನ್ನು ಪರಿವರ್ತನೆ ಮಾಡಿಕೊಳ್ಳಲು ಅರ್ಜಿದಾರರು ಅಫಿಡವಿಟ್ ಸಲ್ಲಿಸಬೇಕಾಗುತ್ತದೆ. ಜಿಲ್ಲಾಧಿಕಾರಿಯು 30 ದಿನಗಳೊಳಗೆ ಆದೇಶವನ್ನು ನೀಡದಿದ್ದರೆ, ಭೂ- ಪರಿವರ್ತನೆಯನ್ನು ಅನುಮೋದಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಆಡಳಿತದಲ್ಲಿನ ವಿಳಂಬ ಮತ್ತು ಜನರ ಸುಲಿಗೆಯನ್ನು ತಡೆಯುವ ನಿಟ್ಟಿನಲ್ಲಿ ಈ ವಿಧೇಯ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ: ಬಟನ್ ಒತ್ತಿದರೆ ಪೊಲೀಸ್​ ಹಾಜರ್​

ಈ ತಿದ್ದುಪಡಿಯನ್ನು ತರುವುದು ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಕೃಷಿಭೂಮಿಯ ನಿವಾಸಿಗಳು ಅದನ್ನು ಸಂಪೂರ್ಣವಾಗಿ ಅಥವಾ ಅದರ ಭಾಗವನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬೇರೆಡೆಗೆ ವರ್ಗಾವಣೆಗೆ ಬಯಸಿದರೆ, ಅವರು ಅರ್ಜಿಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಫಿಡವಿಟ್ ನ್ನು ಸಲ್ಲಿಸಬಹುದು. ಬಳಿಕ ಅರ್ಜಿ ಸ್ವೀಕರಿಸಿದ 7 ದಿನಗಳಲ್ಲಿ ಜಿಲ್ಲಾಧಿಕಾರಿ ಅನುಮೋದನೆ ನೀಡಲಾಗುತ್ತದೆ.

ವಿಪಕ್ಷ ನಾಯಕರು ಬಾವಿಗಳಿದು ಪ್ರತಿಭಟನೆ

ಶುಕ್ರವಾರ ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕರು ಬಾವಿಗಿಳಿದು ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ಇಂದು (ಫೆ.23) ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಹೀಗಾಗಿ ಸಭಾಪತಿಗಳು ಅಧಿವೇಶನವನ್ನು 10 ನಿಮಿಷ ಮುಂದೂಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ