Karnataka Assembly Poll 2023: ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಹ-ಪ್ರಭಾರಿಯಾಗಿ ಅಣ್ಣಾಮಲೈ ನೇಮಕ
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಿದೆ.
ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (dharmendra pradhan) ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ (K.Annamalai) ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಿದೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವಂತೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಜಗತ್ ಪ್ರಕಾಶ್ ನಡ್ಡಾ ಅವರು ಧರ್ಮೇಂದ್ರ ಪ್ರಧಾನ್, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ, ಭಾರತ ಸರ್ಕಾರದ ಉಸ್ತುವಾರಿ ಮತ್ತು ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದಾರೆ. ಕರ್ನಾಟಕ ರಾಜ್ಯದ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೆ. ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿದವರು, ಹಾಗಾಗಿ ಅವರು ಕರ್ನಾಟಕಕ್ಕೆ ಚಿರಪರಿಚಿತರು, ಕೆ. ಅಣ್ಣಾಮಲೈ ತಮ್ಮ ಪೊಲೀಸ್ (IPS) ಸೇವೆಗೆ 2019ರಲ್ಲಿ ರಾಜೀನಾಮೆ ನೀಡಿ, ಮೋದಿ ಅವರಿಂದ ಪ್ರಭಾವಿತರಾಗಿ, 2020ರಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಿದರು, ನಂತರ ತಮಿಳುನಾಡಿನ ಬಿಜೆಪಿ ರಾಜಾಧ್ಯಕ್ಷರಾಗಿ ನೇಮಕಗೊಂಡರು, ಇದೀಗ ಕೆ. ಅಣ್ಣಾಮಲೈ ಅವರನ್ನು ಕರ್ನಾಟಕದ 2023ರ ಚುನಾವಣೆಗಾಗಿ ಬಿಜೆಪಿ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ಕರ್ನಾಟಕಕ್ಕೂ ಅವರಿಗೂ ಒಂದು ಅವಿನಾಭಾವ ಸಂಬಂಧ ಇರುವ ಕಾರಣ, ಈ ವಿಚಾರವನ್ನೇ ಇಟ್ಟುಕೊಂಡು ಮುಂದಿನ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಬಹುದು ಎಂದು ಹೇಳಲಾಗುತ್ತಿದೆ.
Union Minister Dharmendra Pradhan appointed as the BJP’s Incharge and Tamil Nadu BJP president K Annamalai appointed as the Co-Incharge for the upcoming #KarnatakaElection2023 pic.twitter.com/UZQIonyXdQ
— ANI (@ANI) February 4, 2023
ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿ ನೇಮಕಾತಿ ಈ ತಕ್ಷಣದಿಂದ ಜಾರಿಗೆ ಬರಲಿದೆ ಎಂದರು. ಕರ್ನಾಟಕ ವಿಧಾನಸಭೆಯ ಚುನಾವಣೆಯು ಮೇ 2023 ರ ಮೊದಲು ನಡೆಯಲಿದೆ. ಆದ್ದರಿಂದ, ಕರ್ನಾಟಕ ವಿಧಾನಸಭೆಯ ಎಲ್ಲಾ 224 ಸದಸ್ಯರಿಗೆ ಚುನಾವಣೆಯನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ಪ್ರಕಟ ಮಾಡಲಿದೆ. ಪ್ರಸ್ತುತ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಈ ಬಗ್ಗೆ ಅನೇಕ ಯೋಜನೆಯನ್ನು ಹಾಕಿಕೊಂಡಿದೆ.
Published On - 11:09 am, Sat, 4 February 23