AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ, ಮಳೆನೀರು ಕೊಯ್ಲು ಕಡ್ಡಾಯ ಪ್ರಸ್ತಾಪವಿರುವ ವಿಧೇಯಕಗಳ ಮಂಡನೆ

ಇಂದು ವಿಧಾನಸಭೆಯಲ್ಲಿ ಒಟ್ಟು 10 ವಿಧೇಯಕಗಳನ್ನು ಮಂಡಿಸಲಾಗಿದೆ. ಯಾವ ವಿಧೇಯಕಗಳವು? ಇಲ್ಲಿದೆ ಓದಿ.

TV9 Web
| Updated By: guruganesh bhat|

Updated on: Sep 14, 2021 | 5:13 PM

Share

ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗಳನ್ನು ಮುಂದೂಡುವ ದಿಕ್ಕಿನಲ್ಲಿ ಸರ್ಕಾರ ಅಧಿಕೃತ ಹೆಜ್ಜೆಯಿಟ್ಟಿದೆ. ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದ್ದು, ಈ ತಿದ್ದುಪಡಿ ಪಂಚಾಯತ್ ರಾಜ್ ಸೀಮಾ ನಿರ್ಣಯಿಸಲು ಆಯೋಗ ರಚನೆಗೆ ಅವಕಾಶ ಮಾಡಿಕೊಡುವ ವಿಧೇಯಕವಾಗಿದೆ. ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮರು ವಿಂಗಡಣೆ, ವಾರ್ಡ್ ಮತ್ತು ಕ್ಷೇತ್ರಗಳ ಗಡಿ ಗುರುತಿಸಲು ಆಯೋಗ ರಚಿಸಲು ಸರ್ಕಾರ ಚಿಂತಿಸಿದೆ. ಆಯೋಗಕ್ಕೆ ನಿವೃತ್ತ ಸಿಎಸ್ ಅಥವಾ ಎಸಿಎಸ್ ಅಧ್ಯಕ್ಷರಾಗುವ ಸಾಧ್ಯತೆಯಿದೆ

ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ ತಿದ್ದುಪಡಿ ವಿಧೇಯಕ ಮಂಡನೆ ಬೆಂಗಳೂರಿನಲ್ಲಿ  ಮನೆ ಕಟ್ಟಿಸುವವರಿಗೆ ಮಳೆನೀರು ಕೊಯ್ಲು ಕಡ್ಡಾಯ ಪ್ರಸ್ತಾಪ ಇರುವ ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮಸಾರ ಚರಂಡಿ ವ್ಯವಸ್ಥೆ ತಿದ್ದುಪಡಿ  ವಿಧೇಯಕವನ್ನು ಸರ್ಕಾರ ಇಂದು ವಿಧಾನಸಭೆಯಲ್ಲಿ ಮಂಡಿಸಿದೆ. ಇಂದು ಮಂಡನೆಯಾಗಿರುವ ವಿಧೇಯಕ  30X40 ಚದರಡಿ ಮೇಲ್ಪಟ್ಟ ನಿವೇಶನದಲ್ಲಿ ಮನೆ ಕಟ್ಟುವವರಿಗೆ ಮಳೆ ನೀರು ಕೊಯ್ಲು ಮಾಡುವುದು ಕಡ್ಡಾಯವನ್ನಾಗಲಿಸಲಿದೆ.  ಜತೆಗೆ 40X60 ಚದರಡಿ ಮೇಲ್ಪಟ್ಟ ನಿವೇಶನದಲ್ಲಿರುವ ಕಟ್ಟಡಗಳಿಗೂ ಮಳೆ ನೀರು ಕೊಯ್ಲು ಕಡ್ಡಾಯವಾಗಲಿದೆ.

ಇಂದು ವಿಧಾನಸಭೆಯಲ್ಲಿ ಒಟ್ಟು 10 ವಿಧೇಯಕಗಳನ್ನು ಮಂಡಿಸಲಾಗಿದೆ. ಬೆಂಗಳೂರು ನೀರು‌ ಸರಬರಾಜು ಮತ್ತು ಗ್ರಾಮಸಾರ ವ್ಯವಸ್ಥೆ ತಿದ್ದುಪಡಿ ವಿಧೇಯಕ, ಬಂಧಿಗಳ ಗುರುತಿಸುವಿಕೆ ವಿಧೇಯಕ, ದಂಡ ಪ್ರಕ್ರಿಯಾ ಸಂಹಿತೆ ವಿಧೇಯಕ, ಬಂಧೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ, ಕೃಷಿ ಸಂಬಂಧಿ ಕೀಟಗಳು ಮತ್ತು ರೋಗಗಳ ತಿದ್ದುಪಡಿ ವಿಧೇಯಕ, ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ, ಖಾದಿ ಮತ್ತು ಗ್ರಾಮೋದ್ಯೋಗಗಳ ತಿದ್ದುಪಡಿ ವಿಧೇಯಕ, ಪೌರಸಭೆಗಳ ಮತ್ತು ಇತರೆ ಕೆಲವು ಕಾನೂನು ತಿದ್ದುಪಡಿ ವಿಧೇಯಕ, ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ ವಿಧೇಯಕ, ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲಾಗಿದೆ.

ಇದನ್ನೂ ಓದಿ: 

ಅಧಿವೇಶನಕ್ಕೆ ಯಾರೂ ಗೈರಾಗುವಂತಿಲ್ಲ; ಕೊನೆಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡಲಾಗುತ್ತದೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಸದನದಲ್ಲೂ ಚರ್ಚೆ ಆಯ್ತು ಸಂಚಾರಿ ವಿಜಯ್​ ಸಾಧನೆ; ಹಾಡಿ ಹೊಗಳಿದ ಸಿದ್ದರಾಮಯ್ಯ

(Karnataka Assembly Session 10 bills tabled including Bengaluru home builders must make water harvesting and ZP GP election postpone)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ