ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನೀರಸ ಪ್ರತಿಕ್ರಿಯೆ; ಗೃಹ ಸಚಿವ ಆರಗ ಜ್ಞಾನೇಂದ್ರ
ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಂಜೀವ ಮಠದೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ 4,000 ಕಾನ್ಸ್ಟೆಬಲ್ ಹುದ್ದೆಗಳಿಗೆ 3.5 ಲಕ್ಷಕ್ಕೂ ಅಧಿಕ ಅರ್ಜಿಗಳು ಬಂದಿವೆ ಮತ್ತು ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಬೆಳಗಾವಿ: ಕರ್ನಾಟಕದಲ್ಲಿ ಹೊಸದಾಗಿ ಸುಮಾರು 4,000 ಕಾನ್ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯದೆಲ್ಲೆಡೆಯಿಂದ ಸುಮಾರು ಮೂರೂವರೆ ಲಕ್ಷ ಅರ್ಜಿಗಳು ಬಂದಿವೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಿಂದ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾಗಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ವಿಧಾನ ಸಭೆಗೆ (Karnataka Assembly Session) ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಸಂಜೀವ ಮಠದೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಆರಗ ಜ್ಞಾನೇಂದ್ರ, ರಾಜ್ಯದಲ್ಲಿ 4,000 ಕಾನ್ಸ್ಟೆಬಲ್ ಹುದ್ದೆಗಳಿಗೆ ಒಟ್ಟಾರೆಯಾಗಿ 3.5 ಲಕ್ಷಕ್ಕೂ ಅಧಿಕ ಅರ್ಜಿಗಳು ಬಂದಿವೆ ಮತ್ತು ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಕಾನ್ಸ್ಟೆಬಲ್ ಹುದ್ದೆಗಳಿಗೆ ಸ್ವೀಕರಿಸಿದ ಅರ್ಜಿಗಳು ಕೆಲವೇ ಕೆಲವು ನೂರರಷ್ಟಿದ್ದು, ಸ್ಥಳೀಯ ಯುವಕರನ್ನು ಪೊಲೀಸ್ ಇಲಾಖೆಗೆ ಸೇರಲು ಪ್ರೋತ್ಸಾಹಿಸಲಾಗುತ್ತಿದೆ ಎಂದಿದ್ದಾರೆ.
ರಾಜ್ಯದ ಬೇರೆ ಭಾಗಗಳಿಗೆ ಹೋಲಿಸಿದರೆ ಕಾನ್ಸ್ಟೆಬಲ್ ಹುದ್ದೆಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದ ಅರ್ಜಿಗಳು ಬಹಳ ಕಡಿಮೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನ್ನಡ ಭಾಷೆಯಲ್ಲದೆ, ಉಪ ಭಾಷೆಗಳಾದ ತುಳು ಮತ್ತು ಇತರ ಭಾಷೆಗಳೂ ಹೆಚ್ಚು ಬಳಕೆಯಲ್ಲಿದ್ದು, ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಸ್ಥಳೀಯ ಆಡು ಭಾಷೆಯ ಜ್ಞಾನ ಅತ್ಯಗತ್ಯವಿದೆ ಎಂದಿದ್ದಾರೆ.
ಇನ್ನು, ವಿಧಾನಸಭಾ ಕಲಾಪಕ್ಕೆ ಶಾಸಕರು ಗೈರಾಗಿರುವುದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕರ ಗೈರು ವಿಚಾರವಾಗಿ ಇಂದು ಕಲಾಪದ ವೇಳೆ ಮಾತನಾಡಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ನಿನ್ನೆ ಸದನಕ್ಕೆ ಕೇವಲ 119 ಶಾಸಕರು ಹಾಜರಾಗಿದ್ದರು. ಆದರೆ 224 ರಲ್ಲಿ 119 ಶಾಸಕರು ಭಾಗಿಯಾಗಿರುವುದು ನಿರೀಕ್ಷಿತ ಸಂಖ್ಯೆ ಅಲ್ಲ. ಮುಂದಿನ ಅಧಿವೇಶನದಲ್ಲಿ ಶಾಸಕರೆಲ್ಲರೂ ಕಡ್ಡಾಯವಾಗಿ ಹಾಜರಾಗಬೇಕು. ಸೋಮವಾರ ಸದನಕ್ಕೆ ಕೇವಲ 119 ಶಾಸಕರು ಹಾಜರಾಗಿದ್ದರು. ಆದರೆ, 224ರಲ್ಲಿ 119 ಶಾಸಕರು ಭಾಗಿಯಾಗಿರುವುದು ನಿರೀಕ್ಷಿತ ಸಂಖ್ಯೆ ಅಲ್ಲ ಎಂದು ಶಾಸಕರ ಗೈರು ವಿಚಾರವಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಸರ್ಕಾರದ ಮೇಲೆ ಶೇ 40ರ ಕಮಿಷನ್ ಆರೋಪ: ಬೆಳಗಾವಿ ಅಧಿವೇಶನದಲ್ಲಿ ಗೋವಿಂದ ಕಾರಜೋಳ ಪ್ರತಿಕ್ರಿಯೆ
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭ; ವಿಧಾನಸಭೆ ಕಲಾಪ ನೇರ ಪ್ರಸಾರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ