ವಿಧಾನಪರಿಷತ್ ಕಲಾಪ: ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆಗೆ ಯತ್ನ, ಬೆಂಗಳೂರಿನಲ್ಲಿ 123 ಕೆರೆಗಳು ಮಾಯ

ವಿಧಾನ ಪರಿಷತ್​ ಕಲಾಪದಲ್ಲಿ ಪ್ರಸ್ತಾಪವಾದ ಅತ್ಯಂತ ಮುಖ್ಯವಾದ ಸಂಗತಿಗಳು ಇಲ್ಲಿವೆ.

ವಿಧಾನಪರಿಷತ್ ಕಲಾಪ: ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆಗೆ ಯತ್ನ, ಬೆಂಗಳೂರಿನಲ್ಲಿ 123 ಕೆರೆಗಳು ಮಾಯ
ಆರ್ ಅಶೋಕ್ ಮತ್ತು ಸುನೀಲ್ ಕುಮಾರ್
Follow us
TV9 Web
| Updated By: guruganesh bhat

Updated on: Sep 22, 2021 | 4:41 PM

ಬೆಂಗಳೂರು: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ದೊರಕಬೇಕು. ಈ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ವಿಧಾನಪರಿಷತ್‌ನಲ್ಲಿ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ತುಳು ಭಾಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಅಧಿಕಾರಿಗಳ ಭೇಟಿ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಬಿ.ಕೆ ಹರಿಪ್ರಸಾದ್ ತುಳು ಮತ್ತು ಕೊಡವ ಭಾಷೆಗೆ ಸಾಂವಿಧಾನಿಕ ಮಾನ್ಯತೆ ದೊರಕಬೇಕಿದೆ. ತುಳು ಮತ್ತು ಕೊಡವ ಭಾಷೆಗಳು ಅಳಿವು ಉಳಿವು ಮಾಡಬೇಕಾಗಿರುವ ಕೇಂದ್ರ ಸರ್ಕಾರ ಸುಮ್ಮನೆ ಕುಳಿತಿದೆ. ತುಳು ಕೊಡವ ಭಾಷೆಯನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಈಮುನ್ನ ವಿಧಾನಪರಿಷತ್​ನಲ್ಲಿ ಆಗ್ರಹಿಸಿದ್ದರು.

ಬೆಂಗಳೂರಿನಲ್ಲಿ ಎಷ್ಟು ಕೆರೆಗಳು ಮಾಯವಾಗಿವೆ ಎಂದರೆ.. ಬೆಂಗಳೂರು ನಗರದಲ್ಲಿ 123 ಕೆರೆಗಳು ಮಂಗಮಾಯ ಆಗಿವೆ ಎಂದು ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ. 25 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ 837 ಕೆರೆಗಳಿದ್ದವು. ಈ ಪೈಕಿ 734 ಕೆರೆಗಳು ಮಾತ್ರ ಜೀವಂತವಾಗಿವೆ. ಅವುಗಳಲ್ಲಿ ಶೇಕಡಾ 90ರಷ್ಟು ಕೆರೆಗಳು ಒತ್ತುವರಿಯಾಗಿವೆ. ಬಿಡಿಎಯಿಂದಲೇ ಕೆರೆಗಳ ಒತ್ತುವರಿಯಾಗಿದೆ. ಕೆರೆಗಳ ಒತ್ತುವರಿ ತೆರವಿಗೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದೇವೆ. ಈಗ ಇರುವ ಕೆರೆಗಳನ್ನಾದರೂ ಉಳಿಸಬೇಕಿದೆ. ಪ್ರತಿ ಶನಿವಾರ ಕೆರೆಗಳ ಒತ್ತುವರಿ ತೆರವು ಮಾಡಿ ಎಂದು ಸೂಚನೆ ಕೊಟ್ಟಿದ್ದೇವೆ.

ನಾವೂ ನೀವು ಒಂದು ನಿರ್ಧಾರಕ್ಕೆ ಬಂದು ಕೆರೆಗಳನ್ನು ಉಳಿಸಬೇಕಿದೆ. ಅವೆಲ್ಲವೂ ರಾಜರು ಮಹಾರಾಜರು ಕಟ್ಟಿದ ಕೆರೆಗಳಾಗಿವೆ. ನಾವಂತೂ ಕೆರೆ ನಿರ್ಮಾಣ ಮಾಡಲಾಗಿಲ್ಲ. ನೀವು ನಾವೆಲ್ಲ ಒಂದು ತೀರ್ಮಾನ ತೆಗೆದುಕೊಂಡರೆ ಒತ್ತುವರಿ ತೆರವು ಮಾಡಬಹುದು ಎಂದು ಅವರು ವಿನಂತಿ ಮಾಡಿದರು.

ಇದನ್ನೂ ಓದಿ: 

ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಬಿಟ್ಟಿಲ್ಲ ವಿಧಾನಸಭೆಯಲ್ಲಿ ಬೇಲೂರು ಶಾಸಕ ಪ್ರಸ್ತಾಪ, ಇದಕ್ಕೆ ಸಾರಿಗೆ ಸಚಿವರು ನೀಡಿದ ಉತ್ತರ ಏನು?

ಆನ್​ಲೈನ್ ಜೂಜಿಗೆ ಕಡಿವಾಣ ಹಾಕುವ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

(Karnataka Assembly Session 2021 Minister R Ashok says 123 lakes disappeared in Bengaluru Minister Sunil Kumar says Tulu language have constitutionally recognized)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ