ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ

ಸದಸ್ಯರನ್ನು ಶಾಂತಗೊಳಿಸಲು ಯತ್ನಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಇದನ್ನೆಲ್ಲಾ ನೋಡಿದರೆ ನಿಮಗೆ ಹಸಿವಾದಂತೆ ಕಾಣುತ್ತಿದೆ. ಮಧ್ಯಾಹ್ನದ ಭೋಜನದ ಬಳಿಕ ಚರ್ಚೆ ಮಾಡೋಣ’ ಎಂದು ವಿಧಾನಸಭೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ; ಕಲಾಪದಲ್ಲಿ ಕಲಹ ಕೋಲಾಹಲ
ಸಿದ್ದರಾಮಯ್ಯ
Follow us
TV9 Web
| Updated By: guruganesh bhat

Updated on: Sep 15, 2021 | 2:59 PM

ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ಬೆಲೆ ಏರಿಕೆ ವಿಚಾರದ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಗದ್ದಲ, ಕೋಲಾಹಲವೇ ನಡೆಯಿತು. ಆಯಿಲ್ ಬಾಂಡ್ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿತ್ತಿದ್ದಂತೆ ಆಡಳಿತ ಪಕ್ಷ ಬಿಜೆಪಿಯ ಸದಸ್ಯರು ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಮ್ಮನ್ನು ಕೇಳುತ್ತಾರೆ ಅದಕ್ಕಾಗಿ ನಾವು ಇಲ್ಲಿ ಕೇಳುತ್ತೇವೆ. ಆದರೆ ಸದನದಲ್ಲಿ ಬೆಲೆ ಏರಿಕೆಯ ಅಂಶವನ್ನು ಪ್ರಸ್ತಾಪಿಸಬಾರದೇ? ಎಂದು ಸಿದ್ದರಾಮಯ್ಯ ಈವೇಳೆ ಪ್ರಶ್ನಿಸಿದರು.

ಕನಿಷ್ಠ 20 ದಿನವಾದರೂ ಅಧಿವೇಶನ ನಡೆಸಬೇಕಾಗಿದೆ. ಇಲ್ಲದಿದ್ದರೆ ವಿಷಯ ಪ್ರಸ್ತಾಪ ಮಾಡುವುದಕ್ಕೆ ಸಮಯವೇ ಸಿಗುವುದಿಲ್ಲ. ನಿಮ್ಮ ನಿರ್ಲಕ್ಷ್ಯದಿಂದ ವಿಧಾನಸಭೆ ಮಹತ್ವ ಹೋಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಧರಣಿ ನಡೆಸಿದ ನಮ್ಮನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಆದರೆ ವಾಜಪೇಯಿಯವರು ಪಾರ್ಲಿಮೆಂಟ್‌ಗೆ ಎತ್ತಿನಗಾಡಿಯಲ್ಲಿ ಬಂದಿದ್ದರು. ಆಗ ಪೆಟ್ರೋಲ್ ಬೆಲೆ 7 ಪೈಸೆ ಮಾತ್ರ ಏರಿಕೆಯಾಗಿತ್ತು. 7 ಪೈಸೆ ಹೆಚ್ಚಾಗಿದ್ದಕ್ಕೆ ಎತ್ತಿನಗಾಡಿಯಲ್ಲಿ ಬಂದಿದ್ದರು. ಆಗ ‘ಕ್ರಿಮಿನಲ್ ಲೂಟ್’ ಎಂದು ವಾಜಪೇಯಿ ಹೇಳಿದ್ದರು. ಈಗ ನಾನು ಯಾವ ಪದ ಬಳಸಬೇಕು ಎಂದು ಸಿದ್ದರಾಮಯ್ಯ ವ್ಯಂಗ್ಯವಾಗಿ ಬಿಜೆಪಿಯನ್ನು ವ್ಯಂಗ್ಯ ಮಾಡಿದರು.

ಆಯಿಲ್ ಬಾಂಡ್ ಖರೀದಿಸಿದ್ದು ಆ ಸಮಯಕ್ಕೆ ಸರಿಯಿತ್ತು. ಆದರೆ ಈಗ ಕಚ್ಚಾತೈಲ ಬೆಲೆ ಕಡಿಮೆಯಿದ್ದರೂ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಅಬಕಾರಿ ಸುಂಕವನ್ನು ಹೆಚ್ಚಳ ಮಾಡುತ್ತಲೇ ಹೋಗುತ್ತಿದ್ದಾರೆ. ಹೀಗಾಗಿಯೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಡೀಸೆಲ್ ಬೆಲೆ ಏರಿಕೆಯಾದರೆ ಅಗತ್ಯವಸ್ತುಗಳ ಬೆಲೆ ಏರಿಕೆಯಾಗುತ್ತದೆ, ಹಣದುಬ್ಬರ ಆಗುತ್ತದೆ. ಲಕ್ಷಾಂತರ ಜನ ದ್ವಿಚಕ್ರ ವಾಹನದಲ್ಲೇ ಕೆಲಸಕ್ಕೆ ಹೋಗ್ತಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯಾದರೆ ಅವರ ಪರಿಸ್ಥಿತಿ ಏನಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದೇ ವೇಳೆ ಡಾ. ಮನಮೋಹನ್ ಸಿಂಗ್ ಸರ್ಕಾರದ ಬಗ್ಗೆ ಕಟ್ಟಿಕೊಂಡು ಈಗ ಏನಾಗಬೇಕು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಶ್ನಿಸಿದರು. ಜತೆಗೆ ಆಡಳಿತ ಪಕ್ಷದ ಸದಸ್ಯರು 70 ವರ್ಷ ಕಾಂಗ್ರೆಸ್‌ನವರು ದೇಶವನ್ನು ಲೂಟಿ ಹೊಡೆದಿದ್ದಾರೆ ಎಂದು ವಿಧಾನಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರ ಪ್ರಶ್ನೆಗಳಿಗೆ ಪದೇ ಪದೇ ಉತ್ತರಿಸಲು ಯತ್ನಿಸಿದ ಸಚಿವ ಡಾ. ಸುಧಾಕರ್ ಅವರ ಮೇಲೂ ಕಾಂಗ್ರೆಸ್ ಸದಸ್ಯರ ಕೋಪ ಕಾರಿದರು.

ಬೆಲೆ ಏರಿಕೆ ವಿಷಯ ಚರ್ಚೆ ವೇಳೆ ಗದ್ದಲ, ಕೋಲಾಹಲ ಹೆಚ್ಚಿದಂತೆ ಕಲಾಪದ ಸದಸ್ಯರನ್ನು ಶಾಂತಗೊಳಿಸಲು ಯತ್ನಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಇದನ್ನೆಲ್ಲಾ ನೋಡಿದರೆ ನಿಮಗೆ ಹಸಿವಾದಂತೆ ಕಾಣುತ್ತಿದೆ. ಮಧ್ಯಾಹ್ನದ ಭೋಜನದ ಬಳಿಕ ಚರ್ಚೆ ಮಾಡೋಣ’ ಎಂದು ವಿಧಾನಸಭೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.

ಇದನ್ನೂ ಓದಿ: 

ವಿಧಾನಸಭೆಯಲ್ಲಿ ಜಿಪಂ, ತಾಪಂ ಚುನಾವಣೆ ಮುಂದೂಡಿಕೆ, ಮಳೆನೀರು ಕೊಯ್ಲು ಕಡ್ಡಾಯ ಪ್ರಸ್ತಾಪವಿರುವ ವಿಧೇಯಕಗಳ ಮಂಡನೆ

ವಿಧಾನಸಭಾ ಕಲಾಪದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಸ್ತಾಪ; ಬಿಸಿಬಿಸಿ ಚರ್ಚೆ, ವಿರೋಧ ಪಕ್ಷಕ್ಕೆ ಶ್ಲಾಘನೆ

(Karnataka Assembly Session 2021 Opposition leader Siddaramaiah takes Price Hike rise and oil bond issues on discussion)

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್