ವಿಧಾನಸಭೆ: ಸೂಚನಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಮಸೂದೆ ಮಂಡನೆ

| Updated By: Rakesh Nayak Manchi

Updated on: Feb 13, 2024 | 8:01 PM

ವ್ಯಾಪಾರ, ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಮಸೂದೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ 2024 ಅನ್ನು ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಲಾಯಿತು. ನಾಮಫಲಕದ ಮೇಲಿನ ಅರ್ಧ ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು.

ವಿಧಾನಸಭೆ: ಸೂಚನಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಮಸೂದೆ ಮಂಡನೆ
ವಿಧಾನಸಭೆ: ಸೂಚನಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಮಸೂದೆ ಮಂಡನೆ
Follow us on

ವಿಧಾನಸಭೆ, ಫೆ.13: ವ್ಯಾಪಾರ, ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ (Kannada) ಬಳಕೆ ಕಡ್ಡಾಯಗೊಳಿಸುವ ಮಸೂದೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2024 ಅನ್ನು ಇಂದು ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ (Karnataka Assembly Session) ಮಂಡಿಸಲಾಯಿತು. ನಾಮಫಲಕದ ಮೇಲಿನ ಅರ್ಧ ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು.

ವಾಣಿಜ್ಯ, ಕೈಗಾರಿಕಾ ಮತ್ತು ವ್ಯಾಪಾರ ಸಂಸ್ಥೆಗಳು, ಟ್ರಸ್ಟ್‌ಗಳು, ಸಲಹಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು, ಇತರವುಗಳ ಹೆಸರಿನ ಫಲಕಗಳು ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳ ಅನುಮೋದನೆಯೊಂದಿಗೆ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ತಿದ್ದುಪಡಿಯನ್ನು ಮಾಡಲಾಗುತ್ತದೆ.

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ನಿರ್ದೇಶಕರನ್ನು ಸದಸ್ಯರನ್ನಾಗಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನು ರಾಜ್ಯ ಮಟ್ಟದ ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗುತ್ತದೆ. ಜನವರಿ 5 ರಂದು ಕರ್ನಾಟಕ ಸಚಿವ ಸಂಪುಟವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ತನ್ನ ಅನುಮೋದನೆಯನ್ನು ನೀಡಿತ್ತು.

ಇದನ್ನೂ ಓದಿ: Uniform Civil Code: ಜಾತಿ, ಧರ್ಮ, ಪ್ರಾಂತ್ಯ ಬೇಧವಿಲ್ಲ, ಎಲ್ಲರಿಗೂ ಒಂದೇ ಕಾನೂನು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಕನ್ನಡ ಬೋರ್ಡ್​​ಗಳನ್ನು ಪ್ರದರ್ಶಿಸಲು ಕಾನೂನಿನ ಅಗತ್ಯವಿದೆ ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿದ್ದವು. ಇತ್ತೀಚೆಗೆ, ಕನ್ನಡಕ್ಕೆ ಪ್ರಾಧಾನ್ಯತೆ ನೀಡುತ್ತಿಲ್ಲ ಎಂದು ಬೆಂಗಳೂರಿನ ಕೆಲವು ಕಂಪನಿ ಮತ್ತು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಕನ್ನಡ ಪರ ಸಂಘಟನೆಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ಸಂಪುಟ ಅನುಮೋದನೆ ನೀಡಿತ್ತು.

ಆದಾಗ್ಯೂ, ರಾಜ್ಯ ಶಾಸಕಾಂಗದ ಉಭಯ ಸದನಗಳ ಅನುಮೋದನೆಗಾಗಿ ಮಸೂದೆಯಾಗಿ ಮಂಡಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ಹಿಂದಿರುಗಿಸಿದ್ದರು. ಸೋಮವಾರದಿಂದ ಆರಂಭವಾದ ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಫೆಬ್ರವರಿ 23 ರಂದು ಮುಕ್ತಾಯಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ