AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರ ಫೋನ್ ಕದ್ದಾಲಿಕೆ: ಬಿಜೆಪಿ ಸದಸ್ಯರಿಂದ ಗಂಭೀರ ಆರೋಪ, ಸದನದಲ್ಲಿ ಚರ್ಚೆ ಜೋರು

ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್ ಬರುತ್ತೆ ಎಂಬ ಕಾನೂನು ಸಚಿವ ಹೆಚ್​.ಕೆ ಪಾಟೀಲ್​​​ ಹೇಳಿಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಂದು ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆಡಳಿತರೂಢ ಹಾಗೂ ವಿಪಕ್ಷ ಸದಸ್ಯರ ನಡುವೆ ಪರ ವಿರೋಧದ ಚರ್ಚೆಗೆ ಗ್ರಾಸವಾಗಿದ್ದು, ಈ ವೇಳೆ ಹೆಚ್​​ಕೆ ಪಾಟೀಲ್ ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಸ್ವತಃ ಹೆಚ್​​ಕೆ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.

ರಾಜ್ಯಪಾಲರ ಫೋನ್ ಕದ್ದಾಲಿಕೆ: ಬಿಜೆಪಿ ಸದಸ್ಯರಿಂದ ಗಂಭೀರ ಆರೋಪ, ಸದನದಲ್ಲಿ ಚರ್ಚೆ ಜೋರು
Afternoon Session 8Image Credit source: tv9 kannada
ಹರೀಶ್ ಜಿ.ಆರ್​.
| Edited By: |

Updated on: Jan 28, 2026 | 5:55 PM

Share

ಬೆಂಗಳೂರು, ಜನವರಿ 28: ರಾಜ್ಯಪಾಲರಿಗೆ ಕೇಶವ ಕೃಪಾದಿಂದ ಫೋನ್ ಬರುತ್ತೆ ಎಂಬ ಕಾನೂನು ಸಚಿವ ಹೆಚ್​.ಕೆ ಪಾಟೀಲ್​​​ ಹೇಳಿಕೆ ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿಂದು (Assembly Session) ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಇದಕ್ಕೆ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆರ್​ಎಸ್​ಎಸ್ ಕಚೇರಿಯ ಫೋನ್ ಟ್ಯಾಪಿಂಗ್ (phone tapping) ಮಾಡ್ತಿದ್ದೀರಿ. ರಾಜ್ಯಪಾಲರ ಕಚೇರಿಯ ಫೋನ್ ಟ್ಯಾಪಿಂಗ್ ಪ್ರೂವ್ ಮಾಡಿದ್ದಾರೆ. ಹಾಗಾದರೆ ಇದು ಫೋನ್ ಟ್ಯಾಪಿಂಗ್ ಸರ್ಕಾರನಾ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ವಾಗ್ದಾಳಿ ನಡೆಸಿದರು. ಅಲ್ಲದೇ ಹೆಚ್​​ಕೆ ಪಾಟೀಲ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

ಫೋನ್ ಟ್ಯಾಪಿಂಗ್ ಮಾಡಿದ್ದ ಸರ್ಕಾರಗಳು ಬಿದ್ದು ಹೋಗಿವೆ: ಆರ್ ಅಶೋಕ್

ರಾಜ್ಯಪಾಲರಿಗೆ ಕೇಂದ್ರ ಗೃಹಸಚಿವ ಕರೆ ಮಾಡಿರುವ ಆರೋಪದ ಕುರಿತು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಆರ್ ಅಶೋಕ್, ನಮ್ಮ ಫೋನ್​ಗಳನ್ನು ಕೂಡ ಟ್ಯಾಪಿಂಗ್ ಮಾಡುತ್ತಿದ್ದಾರೆ. ಹಿಂದೆ ಫೋನ್ ಟ್ಯಾಪಿಂಗ್ ಮಾಡಿದ್ದ ಸರ್ಕಾರಗಳು ಬಿದ್ದು ಹೋಗಿವೆ. ಕಾನೂನು ಸಚಿವರಾಗಿದ್ದೀರಿ, ರಾಜ್ಯಪಾಲ ಓಡಿ ಹೋದರು ಎಂದರೆ ನೀವು ಕಾನೂನು ಸಚಿವ ಆಗಿರೋದೆ ಸದನಕ್ಕೆ ಅಗೌರವ. ಸದನದಲ್ಲಿ ಸುಳ್ಳು ಹೇಳಿ, ಈಗ ಸಮರ್ಥನೆ ಮಾಡಲು ಮತ್ತಷ್ಟು ಸುಳ್ಳು ಹೇಳುತ್ತಿದ್ದೀರಿ. ಕಡತದಿಂದ ಹೆಚ್. ಪಾಟೀಲ್ ಹೇಳಿಕೆಯನ್ನು ತೆಗೆದುಹಾಕಲಿ, ಇಲ್ಲ ಅಂದರೆ ಕರೆ ಮಾಡಿರುವುದಕ್ಕೆ ದಾಖಲೆ ಕೊಡಿ. ಹೆಚ್.ಕೆ ಪಾಟೀಲ್ ಕ್ಷಮೆ ಕೇಳಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದ್ದಾರೆ.

ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಿಷ್ಟು 

ಈ ಕುರಿತು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದು, ನಾನು ಆಪಾದನೆ ಮಾಡುತ್ತಿದ್ದೇನೆ. ನಾನು ಮಾಡಿರುವ ಆಪಾದನೆಗೆ ಇಂದಿನ ಸನ್ನಿವೇಶದಲ್ಲಿ ಸಂಜಸವಾಗಿದೆ. ಇಲ್ಲದಿದ್ದರೆ ರಾಜ್ಯಪಾಲರು ಸಂವಿಧಾನವನ್ನು ಉಲ್ಲಂಘಿಸಲು ಸಾಧ್ಯವಾಗಿದೆ. ನನ್ನ ಹೇಳಿಕೆಯನ್ನು ಹಿಂಪಡೆಯಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ನಿಮ್ಮ ಗೃಹ ಸಚಿವರನ್ನೇ ಕೇಳಿ, ನಮ್ಮನ್ನೇಕೆ ಕೇಳುತ್ತೀರಿ. ರಾಜ್ಯಪಾಲರ ನಡೆ ಬಗ್ಗೆ ದಕ್ಷಿಣ ಭಾರತದಲ್ಲಿ ಚರ್ಚೆಯಾಗುತ್ತಿದೆ. ಅವರ ನಡೆಯಿಂದ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿದೆ. ಆ ಬಗ್ಗೆ ತನಿಖೆ ಮಾಡಿ ನಾವು ಸಾಬೀತು ಮಾಡುತ್ತೇವೆ ಎಂದರು.

ನನ್ನ ಹೇಳಿಕೆ ತಪ್ಪು, ಹೇಳಿಕೆ ಹಿಂಪಡೆಯಿರಿ ಅಂತಾ ಹೇಳ್ತಿದ್ದಾರೆ. ಲೋಕಭವನ ಅಥವಾ ಗೃಹ ಸಚಿವಾಲಯ ಏಕೆ ಸ್ಪಷ್ಟನೆ ಕೊಟ್ಟಿಲ್ಲ. ನಾವು ಎರಡು ಕಡೆಯಿಂದ ಸ್ಪಷ್ಟನೆ ಬರುವುದನ್ನು ಕಾಯುತ್ತಿದ್ದೇನೆ. ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವಾಲಯದಿಂದ ಸ್ಪಷ್ಟನೆ ಕೊಡಲಿ. ರಾಷ್ಟ್ರಗೀತೆಗೂ ನಿಲ್ಲದೆ ಹೋಗಿರುವ ಬಗ್ಗೆಯೂ ಸ್ಪಷ್ಟನೆ ಕೇಳುತ್ತಿದ್ದೇವೆ. ಈ ಬಗ್ಗೆ ಲೋಕಭವನ ಮತ್ತು ಗೃಹ ಸಚಿವಾಲಯಕ್ಕೂ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಯಾವುದೇ ದೂರವಾಣಿ ಕದ್ದಾಲಿಸುವುದಿಲ್ಲ: ಸಿಎಂ

ಫೋನ್ ಟ್ಯಾಪಿಂಗ್ ವಿಚಾರವಾಗಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ನಮ್ಮ ಸರ್ಕಾರ ಯಾವುದೇ ದೂರವಾಣಿ ಕದ್ದಾಲಿಸುವುದಿಲ್ಲ. ನಾವು ವಿರೋಧ ಪಕ್ಷಗಳ ನಾಯಕರ ಫೋನ್​ ಟ್ಯಾಪ್ ಮಾಡಿಲ್ಲ. ಕೇಂದ್ರದಿಂದ ಕರೆ ಬಂದಿರಬಹುದು ಎಂದು ಹೇಳಿದ್ದಾರೆ ಅಷ್ಟೇ ಎಂದರು.

ಇದನ್ನೂ ಓದಿ: ಅಧಿವೇಶನ ಭಾಷಣ, ಗದ್ದಲ ಬಗ್ಗೆ ರಾಷ್ಟ್ರಪತಿಗೆ ರಾಜ್ಯಪಾಲ ವರದಿ: ಏನೆಲ್ಲಾ ಅಂಶಗಳಿವೆ?

ಗವರ್ನರ್ ಭಾಷಣದ ಮೇಲೆ ಮಾತಾಡಬೇಕು ಅಂದರೆ ಮಾತಾಡಿ, ಸುಮ್ಮನೆ ಕಾಲಹರಣ ಮಾಡಲು ಚರ್ಚೆ ಮಾಡಬೇಡಿ. ಬೇಕು ಎಂದರೆ ತನಿಖೆ ಮಾಡಿಸೋಣ. ನಾವೇ ರಾಜ್ಯಪಾಲರ ಹ್ಯಾಂಡ್​ಶೇಕ್ ಮಾಡಿ ಕಳಿಸಿಕೊಟ್ಟಿದ್ದೇವೆ. ರಾಜ್ಯಪಾಲ ಥಾವರ್​​​ಚಂದ್ ಗೆಹ್ಲೋಟ್​ರಿಗೆ ಅಗೌರವ ತೋರಿಲ್ಲ. ರಾಜ್ಯಪಾಲರು ರಾಷ್ಟ್ರಗೀತೆ ಹಾಡದೇ ಹೊರಟುಹೋಗಿದ್ದು ಸರಿನಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ