Karnataka Assembly Session: ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನವನ್ನು ಒಂದು ದಿನ ವಿಸ್ತರಣೆ ಮಾಡಲಾಗಿದೆ. ಸಭಾಪತಿ ಯು.ಟಿ. ಖಾದರ್ ನೇತೃತ್ವದಲ್ಲಿ ಇಂದು (ಫೆ.23) ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

Karnataka Assembly Session: ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ
ಅಧಿವೇಶನ
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on:Feb 23, 2024 | 11:11 AM

ಬೆಂಗಳೂರು, ಫೆಬ್ರವರಿ 23: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಅಧಿವೇಶನವನ್ನು (Karnataka Assembly Session) ಒಂದು ದಿನ ವಿಸ್ತರಣೆ ಮಾಡಲಾಗಿದೆ. ಸಭಾಪತಿ ಯು.ಟಿ. ಖಾದರ್ (UT Khadar) ನೇತೃತ್ವದಲ್ಲಿ ಇಂದು (ಫೆ.23) ವಿಧಾನಸಭೆ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಸೋಮವಾರ (ಫೆ.26) ಒಂದು ದಿನಕ್ಕೆ ವಿಧಾನಸಭೆ ಕಲಾಪ ನಡೆಸುವ ಮತ್ತು ಮಂಗಳವಾರ (ಫೆ.27) ರಾಜ್ಯಸಭಾ ಚುನಾವಣೆ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ. ಹೀಗಾಗಿ ಅಂದು ಕಲಾಪ ನಡೆಯುವುದಿಲ್ಲ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.26 ರಂದು ಬೆಳಗ್ಗೆ 9:30ಕ್ಕೆ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ‌ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೀಯ ವ್ಯವಹಾರಗಳ ಸಚಿವ ಹೆಚ್​.ಕೆ. ಪಾಟೀಲ್ ಸೇರಿದಂತೆ ಇತರೆ ಬಿಎಸಿ ಸದಸ್ಯರು ಭಾಗಿಯಾಗಿದ್ದರು.

ಫೆಬ್ರವರಿ 16ರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದರು. ಬಳಿಕ ಎರಡು ದಿನ ನಿರಂತರ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಫೆ. 17ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿ ಮಂಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಬಳಿಕ ಫೆ.18ರ ಭಾನುವಾರ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಂಡಿದ್ದರು. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ್ದರು.

ಕರ್ನಾಟಕ ಬಜೆಟ್ ಮಂಡನೆ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.19 ರಂದು ಅನಾರೋಗ್ಯಕ್ಕೆ ತುತ್ತಾಗಿದ್ದರು. ಅಂದು ವಿಶ್ರಾಂತಿಗಾಗಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದರು. ಅಂದು ವಿಶ್ರಾಂತಿ ಪಡೆದು, ಮರುದಿನ ಮತ್ತೆ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಆದರೆ ಇಂದು ಮತ್ತೆ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಇದನ್ನೂ ಓದಿ: ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ

3 ಗಂಟೆ 15 ನಿಮಿಷ ಸುದೀರ್ಘ ಬಜೆಟ್ ಭಾಷಣ ಮತ್ತು ಎರಡು ದಿನ ನಿರಂತರ ಜಿಲ್ಲಾ ಪ್ರವಾಸಗಳಲ್ಲಿ ಭಾಷಣ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯನವರಿಗೆ ಗಂಟಲು ನೋವುನ ಸಮಸ್ಯೆ ಎದುರಾಗಿದೆ. ಹೀಗಾಗಿ ವಿಶ್ರಾಂತಿಯ ಅವಶ್ಯಕತೆ ಇದೆ.

ವಿಪಕ್ಷ ನಾಯಕರು ಬಾವಿಗಳಿದು ಪ್ರತಿಭಟನೆ

ಶುಕ್ರವಾರ ಅಧಿವೇಶನ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕರು ಬಾವಿಗಿಳಿದು ಪ್ರತಿಭಟನೆ ಮಾಡಿದರು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ಇಂದು (ಫೆ.23) ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಹೀಗಾಗಿ ಸಭಾಪತಿಗಳು ಅಧಿವೇಶನವನ್ನು 10 ನಿಮಿಷ ಮುಂದೂಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Fri, 23 February 24

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್