ಶೀಘ್ರದಲ್ಲಿ ಹುಕ್ಕಾ ಪಾರ್ಲರ್ ಬಂದ್: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಕ್ಕಾ ಪಾರ್ಲರ್ ಬ್ಯಾನ್ ಮಾಡಲು ನಾವು ತೀರ್ಮಾನಿಸಿದ್ದೇವೆ. ಶೀಘ್ರದಲ್ಲೇ ಅದನ್ನು ಜಾರಿ ಮಾಡಲಿದ್ದೇವೆ. ಎಷ್ಟೇ ಪ್ರಭಾವಿಗಳು ಒತ್ತಡ ಹಾಕಿದರೂ ನಾವು ಮಣಿಯಲ್ಲ. ಹುಕ್ಕಾ ಪಾರ್ಲರ್ ಬ್ಯಾನ್ ಮಾಡುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.

ಶೀಘ್ರದಲ್ಲಿ ಹುಕ್ಕಾ ಪಾರ್ಲರ್ ಬಂದ್: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 18, 2021 | 10:46 PM

ಬೆಂಗಳೂರು: ಶೀಘ್ರದಲ್ಲೇ ಹುಕ್ಕಾ ಪಾರ್ಲರ್ ಗಳನ್ನು ಬಂದ್ ಮಾಡಲಾಗುವುದು ಮತ್ತು ಆಂಟಿಡ್ರಗ್ ಪಾಲಿಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್​ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಮಹಾಂತೇಶ್ ಕವಟಗಿಮಠ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಮಾದಕ ವಸ್ತು ಸೇವನೆ ಸಂಪೂರ್ಣವಾಗಿ ನಿಷೇಧ ಆಗಬೇಕಾಗಿದೆ. ಸಮಾಜದಿಂದ ಇದನ್ನು ತೊಡೆದು ಹಾಕಬೇಕಿದೆ. ಸಿಂಥೆಟಿಕ್‌ ಡ್ರಗ್ ಅನ್ನು ವಿದ್ಯಾರ್ಥಿಗಳಿಗೆ ಕೊಡುವ ಕೆಲಸವಾಗುತ್ತಿದೆ, ಚಾಕೊಲೇಟ್, ಬಿಸ್ಕೀಟ್ ರೂಪದಲ್ಲೂ ಡ್ರಗ್ಸ್ ತರಲಾಗುತ್ತಿದೆ, ಇದನ್ನು ನಿಲ್ಲಿಸಲು ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯು ನಮ್ಮ ಇಲಾಖೆ ಜೊತೆ ಕೈ ಜೋಡಿಸಬೇಕಿದೆ, ಮಾಧ್ಯಮಗಳ ಸಹಕಾರವು ಅಗತ್ಯ ಎಂದರು.

ಶಾಲೆ ಆವರಣದಲ್ಲಿ ಇಂತಹ ಚಟುವಟಿಕೆ ನಡೆಯದಂತೆ ನೋಡಿಕೊಳ್ಳುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ಚಟುವಟಿಕೆ ನಡೆದರೆ ಸಂಬಂಧಪಟ್ಟ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಸ್ಲಂನಲ್ಲೂ ಮಾದಕ ವಸ್ತು ವ್ಯಾಪಾರ ನಡೆಯುತ್ತಿದೆ, ಉನ್ನತ ಮಟ್ಟದಲ್ಲಿಯೂ ಮಾದಕ ವಸ್ತು ವ್ಯಾಪಾರವಾಗಲಿದೆ. ಇದರ ತಡೆಗೆ ಮುಂದಾಗಿದ್ದೇವೆ ಎಂದರು.

ನೆರೆ ರಾಜ್ಯಗಳಿಂದ ಮಾದಕ ವಸ್ತು ಸರಬರಾಜಾಗುತ್ತಿದೆ. ಹಾಗಾಗಿ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ಇರಿಸಿದ್ದೇವೆ. ಬರುವ ದಿನದಲ್ಲಿ ಆಂಟಿ‌ ಡ್ರಗ್ ಪಾಲಿಸಿ ತರಲಾಗುತ್ತದೆ,‌ ಎನ್​ಡಿಪಿಎಸ್ ನಿಯಮಗಳಲ್ಲಿ ಬದಲಾವಣೆ ತರಲು ಚಿಂತನೆ ನಡೆಸಿದ್ದು ಕೇಂದ್ರದ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದರು. ಹುಕ್ಕಾ ಪಾರ್ಲರ್​ಗೆ ಅನುಮತಿಯನ್ನು ಬಿಬಿಎಂಪಿ ಕೊಡಲಿದೆ. ಆದರೆ ಹುಕ್ಕಾ ಪಾರ್ಲರ್ ಬ್ಯಾನ್ ಮಾಡಲು ನಾವು ತೀರ್ಮಾನಿಸಿದ್ದೇವೆ. ಶೀಘ್ರದಲ್ಲೇ ಅದನ್ನು ಜಾರಿ ಮಾಡಲಿದ್ದೇವೆ. ಎಷ್ಟೇ ಪ್ರಭಾವಿಗಳು ಒತ್ತಡ ಹಾಕಿದರೂ ನಾವು ಮಣಿಯಲ್ಲ. ಹುಕ್ಕಾ ಪಾರ್ಲರ್ ಬ್ಯಾನ್ ಮಾಡುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್‌ಗಳ ಬಂಧನ.. 75 ಲಕ್ಷ ಮೌಲ್ಯದ ಡ್ರಗ್ ಸೀಜ್

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM