AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ: ಬಿಜೆಪಿ ಜೆಡಿಎಸ್ ಧರಣಿ ಬಗ್ಗೆ ಯುಟಿ ಖಾದರ್ ಖಡಕ್ ಸಂದೇಶ

ವಾಲ್ಮೀಕಿ ಹಗರಣದ ಚರ್ಚೆಗೆ ಅವಕಾಶ ನೀಡಿದ್ದು, ಇನ್ನು ಅನೇಕ ಮಸೂದೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಮುಡಾ ಬಗ್ಗೆ ಚರ್ಚೆಗೆ ಅವಕಾಶ ಇಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದು, ವಿಧಾನಸಭೆಯಲ್ಲಿ ಕೋಲಾಹಲ ಮುಂದುವರಿಯುವ ಸುಳಿವು ನೀಡಿದೆ.

ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ: ಬಿಜೆಪಿ ಜೆಡಿಎಸ್ ಧರಣಿ ಬಗ್ಗೆ ಯುಟಿ ಖಾದರ್ ಖಡಕ್ ಸಂದೇಶ
ಸ್ಪೀಕರ್ ಯುಟಿ ಖಾದರ್
ಪ್ರಸನ್ನ ಗಾಂವ್ಕರ್​
| Edited By: |

Updated on: Jul 25, 2024 | 10:08 AM

Share

ಬೆಂಗಳೂರು, ಜುಲೈ 25: ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸಭೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಬಗ್ಗೆ ಸ್ಪೀಕರ್ ಯುಟಿ ಖಾದರ್ ಗುರುವಾರ ಮೌನಮುರಿದಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸದನದ ನಿಯಮಾವಳಿ ಪ್ರಕಾರವೇ ಕಲಾಪ ನಡೆಸುತ್ತೇನೆ. ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ ಎಂದು ಹೇಳಿದರು.

ಆಡಳಿತ ಹಾಗೂ ವಿಪಕ್ಷದವರ ಎಲ್ಲಾ ಚರ್ಚೆಗೆ ಅವಕಾಶ ನೀಡಿದ್ದೇವೆ. ತನಿಖೆ ನಡೆಯುತ್ತಿರುವಾಗಲೇ ವಾಲ್ಮೀಕಿ ನಿಗಮ ಹಗರಣದ ಚರ್ಚೆ ನಡೆದಿದೆ. ಆ ಚರ್ಚೆಯಲ್ಲೇ ಸುಮಾರು ನಾಲ್ಕೈದು ದಿನ ಮುಗಿದು ಹೋಯಿತು. ಈಗ ಮುಡಾ ಪ್ರಕರಣದ ವಿಚಾರವಾಗಿ ಚರ್ಚೆಗೆ ಅವಕಾಶ ಕೇಳಿದ್ದಾರೆ. ಆದರೆ, ಇನ್ನೂ ಮಸೂದೆಗಳ ಮಂಡನೆ ಬಾಕಿ ಇವೆ. ಹೀಗೆಯೇ ಮುಂದುವರಿದರೆ ಕಷ್ಟವಾಗುತ್ತದೆ. ಸ್ಪೀಕರ್ ಆಗಿ ಕೆಟ್ಟ ಸಂಪ್ರದಾಯ ಮುಂದುವರಿಸಲ್ಲ. ನಿಯಮಗಳ ವಿರುದ್ಧ ನಾವು ನಡೆದುಕೊಳ್ಳಲ್ಲ ಎಂದು ಅವರು ಹೇಳಿದರು. ​ ಆರೋಪ ಪ್ರತ್ಯಾರೋಪ ಸಹಜ. ಆದರೆ, ಅಜೆಂಡಾ ಪ್ರಕಾರ ಸದನ ನಡೆಯಲಿದೆ ಎಂದು ಅವರು ಹೇಳಿದರು. ಮುಡಾ ಕುರಿತ ಚರ್ಚೆಗೆ ಪಟ್ಟು ಹಿಡಿದಿರುವ ಬಿಜೆಪಿ, ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ಮಾಡಿ ಗಮನ ಸೆಳೆದಿದ್ದಾರೆ.

ಚರ್ಚೆಗೆ ಅವಕಾಶ ನೀಡುವವರೆಗೂ ಧರಣಿ: ಅಶ್ವತ್ಥ್ ನಾರಾಯಣ

ಮುಡಾ ಹಗರಣ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಸರ್ಕಾರ ಚರ್ಚೆಗೆ ಅವಕಾಶ ನೀಡುವವರೆಗೂ ಧರಣಿ ಮುಂದುವರಿಯಲಿದೆ. ಸದನ ಮುಕ್ತಾಯವಾಗುವವರೆಗೂ ಅಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದು ವಿಧಾನಸೌಧದಲ್ಲಿ ಶಾಸಕ ಡಾ. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಹಗರಣದ ಬಗ್ಗೆ ಸವಿಸ್ತಾರವಾಗಿ ಜನರಿಗೆ ತಿಳಿಸಬೇಕು. ಹಾಗಾಗಿ ಚರ್ಚೆಗೆ ಅವಕಾಶ ನೀಡಬೇಕು. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಕೇಳಿ ಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ, ಭಜನೆ!

ಸರ್ಕಾರ ಮುಡಾ ಹಗರಣ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು. ಚರ್ಚಿಸಲು ಅವಕಾಶ ನೀಡದೆ ಸಿಎಂ ಹೆದರಿಕೊಂಡು ಓಡಿಹೋಗುತ್ತಿದ್ದಾರೆ. ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡದಿದ್ದರೆ ಧರಣಿ ಮುಂದುವರಿಸುತ್ತೇಬೆ. ಹಗರಣದಲ್ಲಿ ಯಾವ ಪಕ್ಷದವರು ಭಾಗಿಯಾಗಿದ್ದರೂ ಕ್ರಮಕೈಗೊಳ್ಳಲಿ ಎಂದು ವಿಧಾನಸೌಧದಲ್ಲಿ ಶಾಸಕ ಮುನಿರತ್ನ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು