AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 21 ರಿಂದ 3 ದಿನ ವಿಧಾನಮಂಡಲದ ವಿಶೇಷ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಕುರಿತಷ್ಟೇ ವಿಸ್ತೃತ ಚರ್ಚೆ ಎಂದ ಸರ್ಕಾರ

ರಾಜ್ಯದಲ್ಲಿ ಭೀಕರ ಬರಗಾಲ, ಜಾನುವಾರುಗಳ ಮೇವಿನ ಕೊರತೆ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ. ಪ್ರಶ್ನೋತ್ತರ ಕಲಾಪವಿಲ್ಲದೆ ಅಧಿವೇಶನ ನಡೆಯಲಿದೆ ಎಂದು ಸರ್ಕಾರ ಹೇಳಿದ್ದು, ಕಸ್ತೂರಿ ರಂಗನ್ ವರದಿಗೆ ವಿರೋಧವಾಗಿ ಕೇಂದ್ರಕ್ಕೆ ಒಮ್ಮತದ ನಿರ್ಣಯ ಕಳುಹಿಸಲು ಯೋಜಿಸಿದೆ.

ಸೆಪ್ಟೆಂಬರ್ 21 ರಿಂದ 3 ದಿನ ವಿಧಾನಮಂಡಲದ ವಿಶೇಷ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಕುರಿತಷ್ಟೇ ವಿಸ್ತೃತ ಚರ್ಚೆ ಎಂದ ಸರ್ಕಾರ
ಕರ್ನಾಟಕ ವಿಧಾನಸಭೆ ಅಧಿವೇಶನ (ಸಂಗ್ರಹ ಚಿತ್ರ)Image Credit source: tv9
ಹರೀಶ್ ಜಿ.ಆರ್​.
| Edited By: |

Updated on: Sep 15, 2026 | 6:45 AM

Share

ಬೆಂಗಳೂರು, ಸೆಪ್ಟೆಂಬರ್ 15: ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21 ರಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ತೀರ್ಮಾನಿಸಿದೆ. ಯಾವುದೇ ಪ್ರಶ್ನೋತ್ತರ ಕಲಾಪವಿಲ್ಲದೆ ಕೇವಲ ಪ್ರಮುಖ ರೈತ ಮತ್ತು ರಾಜ್ಯದ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಈ ಅಧಿವೇಶನ ಮೀಸಲಿರಲಿದೆ. ಮಳೆಗಾಲದ ಅಧಿವೇಶನ ಯಾವುದೇ ಚರ್ಚೆಯಿಲ್ಲದೆ, ಪ್ರತಿಪಕ್ಷಗಳ ಪ್ರತಿಭಟನೆಯಲ್ಲೇ ತೊಳೆದುಹೋಗಿತ್ತು. ಹೀಗಾಗಿ ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ, ಜಾನುವಾರುಗಳ ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಚರ್ಚಿಸಲು ಸರ್ಕಾರ ಸೆಪ್ಟೆಂಬರ್ 21, 22 ಮತ್ತು 23 ರಂದು ವಿಶೇಷ ಅಧಿವೇಶನ ಕರೆದಿದೆ. ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿರುವ ತಾಲೂಕುಗಳ ಸ್ಥಿತಿಗತಿ ಹಾಗೂ ಕೇಂದ್ರದಿಂದ ಬರಬೇಕಾದ ಅನುದಾನದ ಬಗ್ಗೆ ಸದನದಲ್ಲಿ ವಿಸ್ತೃತವಾಗಿ ಸಂವಾದ ನಡೆಯಲಿದೆ.

ವಿಶೇಷ ಅಧಿವೇಶನದ ಪ್ರಮುಖ ಅಜೆಂಡಾಗಳು

  • 101 ತಾಲೂಕುಗಳಲ್ಲಿ ತೀವ್ರ ಬರ: ಕುಡಿಯುವ ನೀರು ಹಾಗೂ ಮೇವಿನ ಬಿಕ್ಕಟ್ಟಿನ ಬಗ್ಗೆ ಚರ್ಚೆ.
  • ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ವಲಯದ ಜನರ ಹಿತರಕ್ಷಣೆಗಾಗಿ ಜಂಟಿ ವಿರೋಧ ನಿರ್ಣಯ.
  • ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಇದನ್ನು ಈ ಹಿಂದೆಯೇ ತಿರಸ್ಕರಿಸಿರುವ ರಾಜ್ಯ ಸರ್ಕಾರ.
  • ತೋಟಗಾರಿಕೆ ಫಾರ್ಮ್‌ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕದ ಬಗ್ಗೆ ಸ್ಪಷ್ಟನೆ.
  • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆಗೆ ಒತ್ತಾಯ.

ಕಸ್ತೂರಿ ರಂಗನ್ ವರದಿ: ಕೇಂದ್ರಕ್ಕೆ ಒಮ್ಮತದ ವಿರೋಧ ನಿರ್ಣಯ ಕಳುಹಿಸಲು ಯೋಜನೆ

ಕಸ್ತೂರಿ ರಂಗನ್ ವರದಿಯಡಿ ಪಶ್ಚಿಮ ಘಟ್ಟದ ಶೇ 37 ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಇದನ್ನು ಈ ಹಿಂದೆಯೇ ತಿರಸ್ಕರಿಸಿರುವ ರಾಜ್ಯ ಸರ್ಕಾರ, ಈ ಅಧಿವೇಶನದಲ್ಲಿ ಪಶ್ಚಿಮ ಘಟ್ಟ ವ್ಯಾಪ್ತಿಯ ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು, ಕೃಷಿ ಹಾಗೂ ಮೂಲಸೌಕರ್ಯಕ್ಕೆ ಧಕ್ಕೆಯಾಗದಂತೆ ಕೇಂದ್ರಕ್ಕೆ ಜಂಟಿ ಸದನದ ಮೂಲಕ ಒಮ್ಮತದ ವಿರೋಧ ನಿರ್ಣಯ ಕಳುಹಿಸಲು ಯೋಜಿಸಿದೆ.

ವಿಶೇಷ ಅಧಿವೇಶನದ ಬಗ್ಗೆ ಸಿಎಂ, ಡಿಸಿಎಂ ಹೇಳಿದ್ದೇನು?

ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲದಿಂದ ಬರಗಾಲದ ಚರ್ಚೆ ನಡೆದಿರಲಿಲ್ಲ, ಹೀಗಾಗಿ ಈ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರೈತರ ಸದ್ಯದ ಬದುಕಿನ ಸವಾಲುಗಳ ಬಗ್ಗೆ ಚರ್ಚಿಸಲೇ ಈ ಅಧಿವೇಶನ ಮೀಸಲು ಮೀಸಲಾಗಿದೆ ಎಂದು ಡಿಸಿಎಂ ಪರಮೇಶ್ವರ ಹೇಳಿದ್ದಾರೆ.

ಪ್ರತಿಪಕ್ಷಗಳು ಹೇಳುವುದೇನು?

ವಿದ್ಯುತ್ ಅಭಾವ, ಮೋಡ ಬಿತ್ತನೆ ವೈಫಲ್ಯದ ಬಗ್ಗೆ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅಧಿವೇಶನ ಯಾವ ರೀತಿ ಇರಲಿದೆ ಎಂಬ ಮುನ್ಸೂಚನೆ ನೀಡಿದ್ದಾರೆ. ಇನ್ನೊಂದೆಡೆ, ರಾಜ್ಯದಲ್ಲಿನ ವಿದ್ಯುತ್ ಅಭಾವ, 28 ಕೋಟಿ ರೂ. ವೆಚ್ಚದ ಮೋಡ ಬಿತ್ತನೆ ಯೋಜನೆಯ ವೈಫಲ್ಯ ಹಾಗೂ ಬಿಡದಿ ಟೌನ್ ಶಿಫ್, ನೈಸ್ ಟೋಲ್ ವಿಚಾರಗಳನ್ನು ಎತ್ತಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ.

LIVE TV

ವಾಲ್ಮೀಕಿ ನಿಗಮದ ಅಕ್ರಮದ ಗದ್ದಲದಿಂದಾಗಿ ಹಿಂದಿನ ಅಧಿವೇಶನ ಅವಧಿಗಿಂತ ಮುಂಚಿತವಾಗಿಯೇ ಮುಕ್ತಾಯಗೊಂಡಿತ್ತು. ಇದೀಗ ಸಿಕ್ಕಿರುವ ಈ ಮೂರು ದಿನಗಳ ವಿಶೇಷ ಅಧಿವೇಶನದಲ್ಲಾದರೂ ರೈತರ ನೈಜ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುತ್ತದೆಯೇ ಎಂದು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?