ಡಿ. 19 ರಿಂದ ಚಳಿಗಾಲದ ಅಧಿವೇಶನ, ಸಚಿವ ಸಂಪುಟದಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನಗಳು ಇಲ್ಲಿವೆ

ಚಳಿಗಾಲದ ವಿಧಾನಮಂಡಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಡಿ.19ರಿಂದ 10 ದಿನ ಬೆಳಗಾವಿಯಲ್ಲಿ ನಡೆಯಲಿದೆ.

ಡಿ. 19 ರಿಂದ ಚಳಿಗಾಲದ ಅಧಿವೇಶನ, ಸಚಿವ ಸಂಪುಟದಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನಗಳು ಇಲ್ಲಿವೆ
Belagavi Suvarna soudha
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 17, 2022 | 7:37 PM

ಬೆಂಗಳೂರು: ಈ ಬಾರಿಯ ಚಳಿಗಾಲದ ಅಧಿವೇಶವನ್ನು ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದ ನಡೆಯಲಿದೆ. ಇಂದು(ನ.17) ನಡೆದ ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನವಾಗಿದ್ದು, ಡಿಸೆಂಬರ್ 19 ರಿಂದ 29 ರವರಿಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.

ಇನ್ನು ಇಮದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಸುಮಾರು 44 ಕೋಟಿ ರೂ. ವೆಚ್ಚದಲ್ಲಿ ಇಎಸ್‌ಐ ಆಸ್ಪತ್ರೆಗಳಿಗೆ ಉಪಕರಣ ಖರೀದಿಗೆ ಒಪ್ಪಿಗೆ ಸಿಕ್ಕಿದೆ.

  • 11 ಕೋಟಿ ರೂ ವೆಚ್ಚದಲ್ಲಿ ಬಳ್ಳಾರಿ ತಾಲೂಕಿನ 6 ಜನವಸತಿ ಪ್ರದೇಶಕ್ಕೆ ಕುಡಿಯುವ ನೀರು ಪೂರೈಕೆಗೆ ತೀರ್ಮಾನ.
  • ಅಂಜನಾಪುರದಲ್ಲಿ ಸಾರಿಗೆ ಕಟ್ಟಡ ನಿರ್ಮಾಣಕ್ಕೆ 25 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ.
  •  100 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸಮ್ಮತಿ.
  •   ರಾಜ್ಯದಲ್ಲಿ ಹೊಸದಾಗಿ ಉತ್ತಾರೆಗುಡ್ಡ ವನ್ಯಜೀವಿಧಾಮ, ಬಂಕಾಪುರ ವನ್ಯಜೀವಿಧಾಮ ಮತ್ತು ಅರಸೀಕೆರೆ ಕರಡಿ ಲಗತ್ತಿ ಧಾಮಗಳನ್ನು ಹಾಗೂ ಹಿರೆಸೂಲೇಕೆರೆ ಕರಡಿ ಸಂರಕ್ಷಣಾ ಮೀಸಲು ಪ್ರದೇಶ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಮತ್ತು ಬೋನಾಳ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶಗಳನ್ನು ಘೋಷಿಸುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.
  • ತುಮಕೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣ. ಹಾಗೂ ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ.
  • ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್​​ ಸೆಂಟರ್​ ಆರಂಭ.
  • ಎನ್​ಹೆಚ್​ಎಂ ಫಂಡ್​ನಲ್ಲಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ನಿರ್ಧಾರ.
  • 7 ಆಸ್ಪತ್ರೆಗಳಿಗೆ 158 ಕೋಟಿ ಅನುದಾನಕ್ಕೆ ಸಂಪುಟ ಸಭೆ ಒಪ್ಪಿಗೆ.
  • ತಾಯಿ & ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಸಂಪುಟ ನಿರ್ಧಾರ
  • ತರೀಕೆರೆಯಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ
  • ಲಿಂಗಸುಗೂರಿನಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ
  • ಹರಿಹರದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ
  • ಗೋಕಾಕ್​ನಲ್ಲಿ 200 ಹಾಸಿಗೆ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ.
  • ಡಿ ಮತ್ತು ಸಿ ಗ್ರೂಪ್ ಸರ್ಕಾರಿ ನೌಕರರು 7 ವರ್ಷ ಆದ್ಮೇಲೆ ಪತಿ ಪತ್ನಿಯ ಪ್ರಕರಣಗಳಲ್ಲಿ ಮಾತ್ರ ಅಂತರ್ ಜಿಲ್ಲಾ ವರ್ಗಾವಣೆ ಮಾಡಿಕೊಳ್ಳಲು ಅನುಮತಿ.

Published On - 6:44 pm, Thu, 17 November 22