ಪಂಚಮಸಾಲಿ ಸೇರಿ 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಸದ್ಯದಲ್ಲೇ ಸರ್ಕಾರಕ್ಕೆ ಶಿಫಾರಸು

ಈ ಹಿನ್ನೆಲೆಯಲ್ಲಿ ಮನವಿ ಸಲ್ಲಿಸಿದ್ದ ಅನೇಕ ಜಾತಿಗಳ ಪೈಕಿ 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು ಮಾಡಲಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಸರ್ಕಾರಕ್ಕೆ ಪತ್ರವನ್ನು ಕಳುಹಿಸಲಿದೆ.

ಪಂಚಮಸಾಲಿ ಸೇರಿ 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಸದ್ಯದಲ್ಲೇ ಸರ್ಕಾರಕ್ಕೆ ಶಿಫಾರಸು
ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಸುದ್ದಿಗೋಷ್ಠಿ
Follow us
| Updated By: ಸುಷ್ಮಾ ಚಕ್ರೆ

Updated on:Sep 28, 2021 | 6:55 PM

ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಅತ್ಯಂತ ಹಿಂದುಳಿದ ಅನೇಕ ಜಾತಿಗಳು, ಹಿಂದುಳಿದ ಜಾತಿ ವರ್ಗಗಳ ಸ್ಥಾನಮಾನ ಕೋರಿ ಮನವಿ ಸಲ್ಲಿಸಿದ್ದು, ಈ ಪೈಕಿ ಬಹಿರಂಗವಾಗಿ ವಿಚಾರಣೆ ನಡೆಸಿ ಮತ್ತು ಆಕ್ಷೇಪಣೆ, ಸಲಹೆ, ಅಭಿಪ್ರಾಯಗಳನ್ನು ಸ್ವೀಕರಿಸಿ ಅಂತಿಮವಾಗಿ 10 ಜಾತಿಗಳನ್ನು ಹಿಂದುಳಿದ ಜಾತಿ ವರ್ಗಗಳ ಪಟ್ಟಿಯಲ್ಲಿ ಸ್ಥಾನಮಾನ‌ ನೀಡಲು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ. ಪಂಚಮಸಾಲಿ ಲಿಂಗಾಯತ, ಕೂಡು ಒಕ್ಕಲಿಗ, ಆದಿ ಬಣಜಿಗ ಸೇರಿ 10 ಜಾತಿಗಳನ್ನು ಹಿಂದುಳಿದ ಜಾತಿಗಳ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಇಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಡೆದ ಹಿಂದುಳಿದ ವರ್ಗಗಳ ಆಯೋಗದ ಜಿಲ್ಲಾ ಮಟ್ಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದುಳಿದ ವರ್ಗಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗಡೆ, ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಕೋರಿ ಅನೇಕ ಹಿಂದುಳಿದ ಜಾತಿಗಳು ಆಯೋಗಕ್ಕೆ ಮನವಿ ಸಲ್ಲಿಸಿವೆ. ಈ ರೀತಿಯ ಮನವಿಗಳನ್ನು ಸಾರ್ವಜನಿಕವಾಗಿ ವಿಚಾರಣೆಗೆ ಒಳಪಡಿಸಿ ಹಾಗೂ ಸಾರ್ವಜನಿಕರಿಂದ ಆಕ್ಷೇಪಣೆ, ಸಲಹೆ, ಅಭಿಪ್ರಾಯಗಳನ್ನು ಸ್ವೀಕರಿಸಿ ಅದರ ಆಧಾರದ ಮೇಲೆ ಅಂತಿಮವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರ ಆಯೋಗಕ್ಕೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮನವಿ ಸಲ್ಲಿಸಿದ್ದ ಅನೇಕ ಜಾತಿಗಳ ಪೈಕಿ 10 ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆಗೊಳಿಸುವ ಬಗ್ಗೆ ಆಯೋಗ ಶಿಫಾರಸು ಮಾಡಲಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಸರ್ಕಾರಕ್ಕೆ ಪತ್ರವನ್ನು ಆಯೋಗ ಕಳುಹಿಸಿ ಕೊಡಲಿದೆ ಎಂದರು.

ಇನ್ನೂ 15 ಜಾತಿಗಳನ್ನು ಸೇರ್ಪಡೆಗೊಳಿಸುವ ಕ್ರಮವು ವಿಚಾರಣಾ ಹಂತದಲ್ಲಿದ್ದು, ಅಕ್ಟೋಬರ್ 11 ಮತ್ತು 12ರಂದು ಆಯೋಗ ಸಾರ್ವಜನಿಕವಾಗಿ ಸಭೆ ನಡೆಸಿ ಆಕ್ಷೇಪಣೆ, ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆಯಲಿದೆ. ಒಟ್ಟಾರೆಯಾಗಿ ರಾಜ್ಯದ ಹಿಂದುಳಿದ ಜಾತಿ ವರ್ಗಗಳ ಅಭಿವೃದ್ಧಿ ಮತ್ತು ಹಿತಾಸಕ್ತಿಗೆ ಪೂರಕವಾಗಿ ಆಯೋಗ ತನ್ನ ಕೆಲಸವನ್ನು ಆಯೋಗ ಪ್ರಾಮಾಣಿಕವಾಗಿ ಮತ್ತು ಪಾರದರ್ಶಕವಾಗಿ ಮಾಡಲಿದೆ ಎಂದು ತಿಳಿಸಿದರು.

ಜಾತಿ ಪಟ್ಟಿಯಲ್ಲಿ ಇಲ್ಲದ ಹಿಂದುಳಿದ ವರ್ಗದವರು ಇದ್ದರೆ ಜಾತಿ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಜಾತಿ ಪಟ್ಟಿಯಲ್ಲಿ ಇಲ್ಲದ ಹಿಂದುಳಿದ ವರ್ಗದವರು ಅಥವಾ ಜನಾಂಗದವರು ತಾವು ಕರ್ತವ್ಯ ನಿರ್ವಹಿಸುವ ವ್ಯಾಪ್ತಿಯಲ್ಲಿ ತಮ್ಮ ಗಮನಕ್ಕೆ ಕಂಡುಬಂದಿದ್ದರೆ ಕೂಡಲೇ ಆಯೋಗಕ್ಕೆ ಜಿಲ್ಲಾಧಿಕಾರಿಗಳ ಮುಖಾಂತರ ವರದಿ ಸಲ್ಲಿಸಲು ಕ್ರಮ ವಹಿಸುವಂತೆ ಜಯಪ್ರಕಾಶ್ ಹೆಗಡೆ ತಹಶೀಲ್ದಾರ್​ಗೆ ಸೂಚನೆ ನೀಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಮತ್ತೆ ಅಹಿಂದ ಕಡೆಗೆ; ಜಾತಿಗಣತಿ ಮುಂದಿಟ್ಟು ಕೊಂಡು ಹಿಂದುಳಿದ ಜಾತಿಗಳ ಸೆಳೆಯಲು ಮಾಸ್ಟರ್ ಪ್ಲಾನ್

ಹಿಂದುಳಿದ ವರ್ಗದ ಜಾತಿ ಸಮಾವೇಶ ತಪ್ಪಲ್ಲ; ಮತ್ತೆ ಜಾತಿ ರಾಜಕೀಯಕ್ಕಿಳಿದ ಸಿದ್ದರಾಮಯ್ಯ

(Karnataka Backward Class Commission will recommend Government to add 10 more Casts to OBC Category)

Published On - 6:32 pm, Tue, 28 September 21

ತಾಜಾ ಸುದ್ದಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!