AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಕರ್ನಾಟಕ ಬಂದ್​ ಕೈ ಬಿಡುವಂತೆ ವಾಟಾಳ್​ ನಾಗರಾಜ್​ಗೆ ಫೋನ್ ಮಾಡಿದ ಸಿಎಂ ಬೊಮ್ಮಾಯಿ

Karnataka Bandh December 31: ಈ ಬಂದ್​ನಿಂದ ಜನರಿಗೆ ತೊಂದರೆಯಾಗುವುದರಿಂದ ಕರ್ನಾಟಕ ಬಂದ್​ ಕೈಬಿಡಲು ವಾಟಾಳ್ ನಾಗರಾಜ್​ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ದೂರವಾಣಿ ಕರೆ ಮಾಡಿ ಮನವಿ ಮಾಡಿದ್ದಾರೆ.

Karnataka Bandh: ಕರ್ನಾಟಕ ಬಂದ್​ ಕೈ ಬಿಡುವಂತೆ ವಾಟಾಳ್​ ನಾಗರಾಜ್​ಗೆ ಫೋನ್ ಮಾಡಿದ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ- ವಾಟಾಳ್ ನಾಗರಾಜ್
TV9 Web
| Edited By: |

Updated on: Dec 30, 2021 | 5:19 PM

Share

ಬೆಂಗಳೂರು: ಎಂಇಎಸ್​ ಸಂಘಟನೆಯನ್ನು ನಿಷೇಧಿಸಬೇಕು ಎಂದು ಶುಕ್ರವಾರ (ಡಿ. 31) ವಾಟಾಳ್ ನಾಗರಾಜ್ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಈ ಬಂದ್​ನಿಂದ ಜನರಿಗೆ ತೊಂದರೆಯಾಗುವುದರಿಂದ ಕರ್ನಾಟಕ ಬಂದ್​ ಕೈಬಿಡಲು ವಾಟಾಳ್ ನಾಗರಾಜ್​ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಇಂದು ದೂರವಾಣಿ ಕರೆ ಮಾಡಿ ವಾಟಾಳ್ ನಾಗರಾಜ್​ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೆ, ಮಾತುಕತೆಗೆ ಕಚೇರಿಗೆ ಬರುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಎಂಇಎಸ್​ ಸಂಘಟನೆಯ ನಿಷೇಧಕ್ಕೆ ಆಗ್ರಹಿಸಿ ನಾಳೆ ಕನ್ನಡಪರ ಸಂಘಟನೆಗಳು ಬಂದ್​ಗೆ ಕರೆನೀಡಿವೆ. ಇಂದು ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಬಂದ್ ವಾಪಾಸ್ ಪಡೆಯುವುದಿಲ್ಲ. ಹಾಗೇನಾದರೂ ಬಂದ್ ವಾಪಾಸ್ ಪಡೆದರೆ ಅಥವಾ ಮುಂದೂಡಿದರೆ ರಾಜ್ಯದ ಜನರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದಿದ್ದರು.

MES ನಿಷೇಧಕ್ಕೆ ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, K.R. ಕುಮಾರ್​ ಚರ್ಚೆ ನಡೆಸಿದ್ದರು. ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಜೀಪ್​ನಲ್ಲಿ ಕುಳಿತು ಮಾತುಕತೆ ನಡೆಸಿದ್ದರು. ವಾಟಾಳ್ ನಾಗರಾಜ್ ಮನವೊಲಿಕೆಗೆ ಮುಖಂಡರು ಪ್ರಯತ್ನ ಮಾಡಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್​ ಶೆಟ್ಟಿ, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್​ ಮನವೊಲಿಕೆ ಯತ್ನ ಮಾಡಿದ್ದರು. ವಾಟಾಳ್ ನಾಗರಾಜ್ ಅವರ ಕಾಲು ಮುಟ್ಟಿ ಪ್ರವೀಣ್ ಕುಮಾರ್​ ಶೆಟ್ಟಿ ಮನವಿ ಮಾಡಿದ್ದರು. ನಾನು ನಿಮ್ಮ ಕಾಲಿಗೆ ಬೀಳುತ್ತೇನೆ. ಆದರೆ ಬಂದ್​ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು.

MES ನಿಷೇಧಕ್ಕೆ ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್​ ಧರಣಿ ನಡೆಯಲಿದೆ. ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ವಾಟಾಳ್ ಪ್ರತಿಭಟನೆ ನಡೆಸಲಿದ್ದಾರೆ. ಯಾರು ಬೆಂಬಲ ಕೊಡಲಿ ಬಿಡಲಿ ನಾಳೆ ಬಂದ್ ಮಾಡುತ್ತೇವೆ ಎಂದು ಧರಣಿ ವೇಳೆ ಹೋರಾಟಗಾರ ವಾಟಾಳ್ ನಾಗರಾಜ್​ ಹೇಳಿಕೆ ನೀಡಿದ್ದರು. ಬಂದ್​ಗೆ ಬೆಂಬಲ ನೀಡುವಂತೆ ತೆರೆದ ಜೀಪ್​ನಲ್ಲಿ ಮೆರವಣಿಗೆ ನಡೆಸಲಾಗಿತ್ತು. ನಾಳೆ ಅಂಗಡಿ ಮುಚ್ಚುವಂತೆ ಮಾಲೀಕರಿಗೆ ವಾಟಾಳ್​ ನಾಗರಾಜ್ ಮನವಿ ಮಾಡಿದ್ದರು.

ಇದನ್ನೂ ಓದಿ: ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿ 31ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್