ಬೆಂಗಳೂರು: ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ಶುಕ್ರವಾರ (ಡಿ. 31) ವಾಟಾಳ್ ನಾಗರಾಜ್ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಈ ಬಂದ್ನಿಂದ ಜನರಿಗೆ ತೊಂದರೆಯಾಗುವುದರಿಂದ ಕರ್ನಾಟಕ ಬಂದ್ ಕೈಬಿಡಲು ವಾಟಾಳ್ ನಾಗರಾಜ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಇಂದು ದೂರವಾಣಿ ಕರೆ ಮಾಡಿ ವಾಟಾಳ್ ನಾಗರಾಜ್ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೆ, ಮಾತುಕತೆಗೆ ಕಚೇರಿಗೆ ಬರುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಎಂಇಎಸ್ ಸಂಘಟನೆಯ ನಿಷೇಧಕ್ಕೆ ಆಗ್ರಹಿಸಿ ನಾಳೆ ಕನ್ನಡಪರ ಸಂಘಟನೆಗಳು ಬಂದ್ಗೆ ಕರೆನೀಡಿವೆ. ಇಂದು ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಬಂದ್ ವಾಪಾಸ್ ಪಡೆಯುವುದಿಲ್ಲ. ಹಾಗೇನಾದರೂ ಬಂದ್ ವಾಪಾಸ್ ಪಡೆದರೆ ಅಥವಾ ಮುಂದೂಡಿದರೆ ರಾಜ್ಯದ ಜನರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದಿದ್ದರು.
MES ನಿಷೇಧಕ್ಕೆ ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, K.R. ಕುಮಾರ್ ಚರ್ಚೆ ನಡೆಸಿದ್ದರು. ಬೆಂಗಳೂರಿನ ಲಾಲ್ಬಾಗ್ನಲ್ಲಿ ಜೀಪ್ನಲ್ಲಿ ಕುಳಿತು ಮಾತುಕತೆ ನಡೆಸಿದ್ದರು. ವಾಟಾಳ್ ನಾಗರಾಜ್ ಮನವೊಲಿಕೆಗೆ ಮುಖಂಡರು ಪ್ರಯತ್ನ ಮಾಡಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಮನವೊಲಿಕೆ ಯತ್ನ ಮಾಡಿದ್ದರು. ವಾಟಾಳ್ ನಾಗರಾಜ್ ಅವರ ಕಾಲು ಮುಟ್ಟಿ ಪ್ರವೀಣ್ ಕುಮಾರ್ ಶೆಟ್ಟಿ ಮನವಿ ಮಾಡಿದ್ದರು. ನಾನು ನಿಮ್ಮ ಕಾಲಿಗೆ ಬೀಳುತ್ತೇನೆ. ಆದರೆ ಬಂದ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು.
MES ನಿಷೇಧಕ್ಕೆ ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ಧರಣಿ ನಡೆಯಲಿದೆ. ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ವಾಟಾಳ್ ಪ್ರತಿಭಟನೆ ನಡೆಸಲಿದ್ದಾರೆ. ಯಾರು ಬೆಂಬಲ ಕೊಡಲಿ ಬಿಡಲಿ ನಾಳೆ ಬಂದ್ ಮಾಡುತ್ತೇವೆ ಎಂದು ಧರಣಿ ವೇಳೆ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದರು. ಬಂದ್ಗೆ ಬೆಂಬಲ ನೀಡುವಂತೆ ತೆರೆದ ಜೀಪ್ನಲ್ಲಿ ಮೆರವಣಿಗೆ ನಡೆಸಲಾಗಿತ್ತು. ನಾಳೆ ಅಂಗಡಿ ಮುಚ್ಚುವಂತೆ ಮಾಲೀಕರಿಗೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದರು.
ಇದನ್ನೂ ಓದಿ: ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ
ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿ 31ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್