ಬೆಂಗಳೂರು, ಮಾರ್ಚ್ 21: ಬೆಳಗಾವಿ ಗಡಿಯಲ್ಲಿ (Belagavi Border) ಮರಾಠಿ ಪುಂಡರ ಹಾವಳಿ ವಿರೋಧಿಸಿ ಹಾಗೂ ರಾಜ್ಯದ ಹಿತಾಸಕ್ತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು (Pro Kannada Organisations) ಮಾರ್ಚ್ 22 ರಂದು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿವೆ. ಕೆಲವು ಜಿಲ್ಲೆಗಳಲ್ಲಿ ಬಂದ್ ಬಿಸಿ ಹೆಚ್ಚಿರಲಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾಗಿಲ್ಲ. ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ. ಶಾಲಾ ಕಾಲೇಜು ನಡೆಸುವ ಹಾಗೂ ಪರೀಕ್ಷೆಗಳನ್ನು ನಡೆಸುವುದಕ್ಕೆ ಸಂಬಂಧಿಸಿ ಸರ್ಕಾರದಿಂದ ಇನ್ನಷ್ಟೇ ಅಧಿಕೃತ ನಿರ್ಧಾರ ಪ್ರಕಟಗೊಳ್ಳಬೇಕಿದೆ. ಬಂದ್ ಬಗ್ಗೆ ನೀವು ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ.
ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಚಿಕ್ಕಮಗಳೂರಲ್ಲಿ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಚಿತ್ರದುರ್ಗದಲ್ಲೂ ಕನ್ನಡ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.
ಕರ್ನಾಟಕ ಬಂದ್ ವೇಳೆ ಆಸ್ಪತ್ರೆ, ವೈದ್ಯಕೀಯ ಸೇವೆ, ಮೆಡಿಕಲ್, ಹಾಲು, ಅಗತ್ಯ ವಸ್ತುಗಳು, ನಮ್ಮ ಮೆಟ್ರೋ ಸೇವೆ ಇರಲಿದೆ. ಓಲಾ ಹಾಗೂ ಉಬರ್, ಕೆಲ ಖಾಸಗಿ ವಾಹನಗಳು ಹಾಗೂ ಏರ್ಪೋರ್ಟ್ ಟ್ಯಾಕ್ಸಿ ಸಂಚಾರ ಇರುವುದಿಲ್ಲ.
ಇದನ್ನೂ ಓದಿ: ಕರ್ನಾಟಕ ಬಂದ್: ಮಾ 22ರಂದು ಶಾಲಾ-ಕಾಲೇಜು ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಅಧಿಕೃತ ವೇಳಾಪಟ್ಟಿ ಪ್ರಕಾರ, ಮಾರ್ಚ್ 22ರ ಶನಿವಾರ ಎಸ್ಎಸ್ಎಲ್ಸಿ ಪರೀಕ್ಷೆ ಇರವುದಿಲ್ಲ. ಹೀಗಾಗಿ ಹತ್ತನೇ ತರಗತಿ ಪರೀಕ್ಷೆ ಮೇಲೆ ಬಂದ್ ಯಾವುದೇ ಪರಿಣಾಮ ಬೀರುವುದಿಲ್ಲ. ಆದಾಗ್ಯೂ, 1 ರಿಂದ 9 ನೇ ತರಗತಿ ವರೆಗಿನ ಕೆಲವು ತರಗತಿಗಳ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಮುಂದೂಡಿಕೆ ಮಾಡಬೇಕೇ ಅಥವಾ ನಡೆಸುವುದೇ ಎಂಬ ಬಗ್ಗೆ ಸರ್ಕಾರ ಇಂದು ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.
ಇದನ್ನೂ ಓದಿ: ಕರ್ನಾಟಕ ಬಂದ್: ನಾಳೆ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ? ಸಚಿವರು ಕೊಟ್ಟ ಮಾಹಿತಿ ಇಲ್ಲಿದೆ
ಕರ್ನಾಟಕ ಸಾರಿಗೆ ನೌಕರರ ಒಕ್ಕೂಟ, ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರ ಸಂಘದಿಂದ ಕೂಡ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
Published On - 1:02 pm, Fri, 21 March 25