ಹಿಜಾಬ್​ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳಿಂದ ಕರ್ನಾಟಕ ಬಂದ್: ಎಲ್ಲಿ ಹೇಗಿತ್ತು, ಇಲ್ಲಿದೆ ವಿವರ

ನಗರದಲ್ಲಿ ಒಂದು ವಾರ 144 ಸೆಕ್ಷನ್ ಹೇರಿರುವ ಪೊಲೀಸ್ ಕಮೀಷನರ್ ಕಮಲ್ ಪಂತ್, 144 ಸೆಕ್ಷನ್ ಇರುವುದರಿಂದ ಮೆರವಣಿಗೆ, ಪ್ರತಿಭಟನೆ, ಜಾಥಾಗಳಿಗೆ ನಿಷೇಧಿಸಲಾಗಿದೆ. ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಬೀಟ್ ನಲ್ಲಿ ಇರಲು ಕಮೀಷನರ್ ಸೂಚನೆ.

ಹಿಜಾಬ್​ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳಿಂದ ಕರ್ನಾಟಕ ಬಂದ್: ಎಲ್ಲಿ ಹೇಗಿತ್ತು, ಇಲ್ಲಿದೆ ವಿವರ
ಬಂದ್​ ಹಿನ್ನೆಲೆ ತೆರೆಯದ ಅಂಗಡಿಗಳು.
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Mar 17, 2022 | 11:41 AM

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ (Hijab verdict) ನಿರ್ಬಂಧ ವಿಧಿಸಿ ತೀರ್ಪು ಹಿನ್ನೆಲೆ ಹೈಕೋರ್ಟ್ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಇಂದು ಪ್ರತಿಭಟನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯಾದ್ಯಂತ ವ್ಯಾಪಾರ ವಹಿವಾಟು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ. ಸ್ವಯಂಪ್ರೇರಿತವಾಗಿ ಅಂಗಡಿ ಮುಚ್ಚಿ ಮುಸ್ಲಿಮರಿಂದ ಪ್ರತಿಭಟನೆ ಮಾಡುತ್ತಿದ್ದು, ಕೆಲ ಮುಸ್ಲಿಂ ಸಮುದಾಯದವರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಖಾಕಿ ಕಟ್ಟೆಚ್ಚರ ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಾದ ಜೆ ಜೆ ನಗರ, ಬ್ಯಾಟರಾಯನಪುರ, ಶಿವಾಜಿನಗರ, ಕೆ ಜಿ ಹಳ್ಳಿ, ನಾಗವಾರ, ಟ್ಯಾನಿ ರಸ್ತೆ, ಜೆಸಿ ನಗರ ಸೇರಿ ಪ್ರಮುಖ ಏರಿಯಾಗಳಲ್ಲಿ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ನಗರದಲ್ಲಿ ಒಂದು ವಾರ 144 ಸೆಕ್ಷನ್ ಹೇರಿರುವ ಪೊಲೀಸ್ ಕಮೀಷನರ್ ಕಮಲ್ ಪಂತ್, 144 ಸೆಕ್ಷನ್ ಇರುವುದರಿಂದ ಮೆರವಣಿಗೆ, ಪ್ರತಿಭಟನೆ, ಜಾಥಾಗಳಿಗೆ ನಿಷೇಧಿಸಲಾಗಿದೆ. ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಬೀಟ್ ನಲ್ಲಿ ಇರಲು ಕಮೀಷನರ್ ಸೂಚನೆ ಪ್ರಮುಖ ಕಡೆಗಳಲ್ಲಿ ರೂಟ್ ಮಾರ್ಚ್ ಮಾಡಲು ಸೂಚನೆ ನೀಡಲಾಗಿದೆ. ನಗರದಲ್ಲಿ 25 ಕೆಎಸ್ ಆರ್ ಪಿ, 35 ಸಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಅಯಾ ಠಾಣಾ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರು: ಶಿವಾಜಿನಗರದಲ್ಲಿ ಕೆಲ ಅಂಗಡಿ ಮುಗ್ಗಟ್ಟುಗಳು ತೆರೆದಿಲ್ಲ. ತರಕಾರಿ ಹೂ ಹಣ್ಣು , ಮಟನ್ ಅಂಗಡಿ ಬಂದ್ ಆಗಿವೆ. ಬೆಳಗಿನ ಜಾವ ಜನರಿಂದ ಕಿಕ್ಕಿರಿದು ತುಂಬಿರುತ್ತಿದ್ದ ಮಾರ್ಕೆಟ್ ಇಂದು ಬಂದ್ ಆಗಿವೆ. ಕೆಲ ಟೀ ಅಂಗಡಿ ಹೊರತು ಪಡಿಸಿ ಬಹತೇಕ ಅಂಗಡಿ ಬಂದ್. ಶಾಂತಿಯುತವಾಗಿ ಬಂದ್ ಆಚರಣೆ ಮಾಡುವಂತೆ ಮುಸ್ಲಿಂ ಸಂಘಟನೆ ಕರೆ ನೀಡಲಾಗಿದೆ. ಕೋಲಾರದಲ್ಲಿ ಮುಸ್ಲಿಂ‌ ಸಂಘಟನೆಗಳಿಂದ ಬಂದ್ ಆಚರಣೆ ಮಾಡಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳನ್ನು‌ ಮುಚ್ಚಿ ಬಂದ್​ಗೆ ಬೆಂಬಲ ಸೂಚಸಲಾಗಿದೆ. ನಗರದ ಕ್ಲಾಕ್ ಟವರ್, ರಹಮತ್ ನಗರ್, ಶಹಿನ್ ಶಾ ನಗರ ಸೇರಿದಂತೆ ಮುಸ್ಲಿಂ ಬಡಾವಣೆಗಳಲ್ಲಿ ಬಂದ್ ಆಚರಣೆ ಮಾಡಲಾಗುತ್ತಿದೆ. ಹಾಲು ಔಷದ ಹೊರತು ಪಡಿಸಿ ಯಾವುದೇ ರೀತಿ ವಹಿವಾಟು ಇಲ್ಲ. ಬಂದ್ ಹಿನ್ನೆಲೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ನಿಷೇದಾಜ್ಞೆ ಜಾರಿಯಲ್ಲಿರುವ ಹಿನ್ನೆಲೆ ಯಾವುದೇ ಮೆರವಣಿಗೆ, ಪ್ರತಿಭಟನೆಗೆ ಅವಕಾಶ ನೀಡಿಲ್ಲ.

ತುಮಕೂರು: ತುಮಕೂರಿನಲ್ಲಿ ಅಂಗಡಿ ಮುಂಗಟ್ಟುಗಳು  ಮುಸ್ಲಿಂ ವ್ಯಾಪಾರಸ್ಥರು ಬಂದ್ ಮಾಡಿದ್ದಾರೆ. ಮುಸ್ಲಿಂ ಸಮುದಾಯದ ಅಂಗಡಿಗಳು ಸಂಪೂರ್ಣ ಬಂದ್ ಮಾಡಲಾಗಿದೆ. ಉಳಿದಂತೆ ಯಥಾಸ್ಥಿತಿಯಲ್ಲಿರುವ ವ್ಯಾಪಾರ ವಹಿವಾಟು ನಡೆಯುತ್ತಿದೆ. ಕಾಲ್ ಟ್ಯಾಕ್ಸ್ ಸರ್ಕಲ್, ಬಿ.ಜಿ.ಪಾಳ್ಯ‌ ಸರ್ಕಲ್, ಗುಬ್ಬಿ ಗೇಟ್, ಕುಣಿಗಲ್ ರಿಂಗ್ ರಸ್ತೆಗಳಲ್ಲಿನ, ಪ್ರಮುಖಯ ಗ್ಯಾರೇಜ್, ಆಟೋ ಮೊಬೈಲ್ಸ್ ಅಂಗಡಿಗಳು ಬಂದ್ ಮಾಡಲಾಗಿದ್ದು, ನಮಗೆ ಕಾನೂನಿಂದ‌ ಯಾವುದೇ ನೆರವು ಸಿಕ್ಕಿಲ್ಲ ಎಂದು ಮುಸಲ್ಮಾನ್ ಮುಖಂಡರು ಹೇಳಿದ್ದಾರೆ.  ಕೆ ಜಿ ಹಳ್ಳಿ ಡಿಜೆಹಳ್ಳಿ , ಪಾದಾರಾಯನಪುರ ಸೇರಿ ಹಲವೆಡೆ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್‌ ಮಾಡಲಾಗಿದೆ. ನಿತ್ಯ ಅತ್ಯಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಮಾಡಲಾಗುತ್ತಿದೆ. ಉಳಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಇದುವರೆಗೆ ನಗರದಲ್ಲಿ ಶಾಂತಿಯುತವಾಗಿ ಬಂದ್​ ನಡೆಯುತ್ತಿದೆ. ಕೇವಲ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಟೌನ್ ಹಾಲ್ ವೃತ್ತದಲ್ಲಿ ಮೂವರಿಂದ ಮೌನ ಪ್ರತಿಭಟನೆ ಮಾಡಲಾಗುತ್ತಿದೆ. ಓರ್ವ ವ್ಯಕ್ತಿ ಸೇರಿದಂತೆ ಯುವತಿ, ಯುವಕನಿಂದ ಮೌನ ಪ್ರತಿಭಟನೆ. ಇಂಡಿಯಾ ಇಸ್ ಸೆಕ್ಯೂಲರ್ ಕಂಟ್ರಿ. ಹಿಜಾಬ್ ಈಸ್ ಅವರ್ ರೈಟ್ಸ್. ವಿ ವಾಂಟ್ ಜಸ್ಟಿಸ್. ಪ್ಲೀಸ್ ಡೋಂಟ್ ಟಾರ್ಗೆಟ್. ಒನ್ ರಿಲಿಜಿಯನ್ ಇಸ್ಲಾಂ. ಸ್ಟಾಪ್ ದಿಸ್ ಡರ್ಟಿ ಪಾಲಿಟಿಕ್ಸ್. ಭಾರತ್ ಮಾತಾಕಿ ಜೈ. ವಿ ವಾಂಟ್ ಪೀಸ್ ಅಂತಾ ಸ್ಲೋಗನ್ ಹಿಡಿದು ಮೌನ ಪ್ರತಿಭಟನೆ ಮಾಡಲಾಗುತ್ತಿದೆ. ಯಾವುದೆ ಪ್ರತಿಭಟನೆ, ರ್ಯಾಲಿಗೆ ಗೆ ಅವಕಾಶ ಇಲ್ಲಾ. ನಗರದಾದ್ಯಂತ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮುಸ್ಲಿಂ ವ್ಯಾಪಾರಿಗಳಿಂದ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಹಿಜಾಬ್ ಬೆಂಬಲಿಸಿ ಬಂದ್ ಕರೆಗೆ ಚಿತ್ರದುರ್ಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ ಬಂದ್ ಮಾಡಿ ಪೋಸ್ಟರ್ ಹಾಕಿರುವ ಕೆಲ ಮುಸ್ಲಿಂ ವ್ಯಾಪಾರಿಗಳು. ಕೆಲವೆಡೆ ಎಂದಿನಂತೆ ಅಂಗಡಿ ತೆರೆದಿರುವ ಮುಸ್ಲಿಂ ವ್ಯಾಪಾರ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿ ಹಿನ್ನೆಲೆ, ಪ್ರತಿಭಟನೆಗೆ ಅವಕಾಶವಿಲ್ಲ.

ಮಂಡ್ಯ: ಮಂಡ್ಯದ ಗುತ್ತಲು ರಸ್ತೆ ಸೇರಿದಂತೆ,ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. ಮುಸ್ಲಿಂ ಸಮಯದವರಿಂದ ಬಂದ್​ಗೆ ಬೆಂಬಲ ನೀಡಲಾಗಿದೆ.  ಮುಸ್ಲಿಂ ಸಮುದಾಯದ ಅಂಗಡಿಗಳನ್ನ ಮುಚ್ಚಿ ಪ್ರತಿಭಟನೆ ಮಾಡಲಾಗುತ್ತಿದ್ದು, ಉಳಿದಂತೆ ಇತರೆ ಅಂಗಡಿ ಮುಂಗಟ್ಟುಗಳು ಎಂದಿನಂತೆ ವ್ಯಾಪಾರ ವಹಿವಾಟು ನಡೆದಿದೆ. ಸ್ವಯಂ ಪ್ರೇರಿತವಾಗಿ ಕುಡಚಿ ಪಟ್ಟಣದ ಅಂಗಡಿ ಮುಗ್ಗಟು ಬಂದ್ ಮಾಡಿ ಬಂದ್​ಗೆ ಬೆಂಬಲ ನೀಡಿದ್ದಾರೆ.

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣ ಬಂದ್. ಮಧ್ಯಾಹ್ನವರೆಗೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ವ್ಯಾಪಾರಿಗಳು ಬಂದ್ ಮಾಡಿದ್ದಾರೆ. ಕುಡಚಿ ಪಟ್ಟಣ ಹೊರತುಪಡಿಸಿ ಚಿಕ್ಕೋಡಿ‌ ಉಪವಿಭಾಗದಲ್ಲಿ ಎಂದಿನಂತೆ ಜನ ಜೀವನ ವ್ಯಾಪಾರ ವಹಿವಾಟು ನಡೆದಿದೆ.

ಇದನ್ನೂ ಓದಿ:

ರಾಜ್ಯದ ಹಲವು ಯೋಜನೆ, ಸಂಸ್ಥೆಗಳ ರಾಯಭಾರಿಯಾಗಿದ್ದರು ಪುನೀತ್​ ರಾಜಕುಮಾರ್​: ಇಲ್ಲಿದೆ ಮಾಹಿತಿ

Published On - 11:40 am, Thu, 17 March 22

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್