Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ತಮಿಳುನಾಡಿಗೆ ಹರಿಬಿಡುತ್ತಿರುವ ಕಾವೇರಿ ನೀರಿಗಾಗಿ ಬೆಂಗಳೂರು ಬಂದ್​ಗೆ ಅಭೂತಪೂರ್ವ ಬೆಂಬಲ ಸಿಕ್ಕಿರುವ ಬೆನ್ನಲ್ಲೇ ಇದೀಗ ಇಂದು (ಸೆಪ್ಟೆಂಬರ್ 29) ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳು ಸಿಗುವುದು ಅನುಮಾನವಾಗಿದೆ. ಹೀಗಾಗಿ, ನಾಳೆ ಏನಿರುತ್ತೆ ಏನಿರಲ್ಲ? ಕರ್ನಾಟಕದ ಬಂದ್​ ಎಷ್ಟು ಗಂಟೆಯಿಂದ ಎಷ್ಟು ತನಕ ಇರಲಿದೆ ಎನ್ನುವ ಸಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Karnataka Bandh: ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ
ಕರ್ನಾಟಕ ಬಂದ್​
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Sep 29, 2023 | 10:19 AM

ಬೆಂಗಳೂರು, (ಸೆಪ್ಟೆಂಬರ್ 28): ತಮಿಳುನಾಡಿಗೆ (Tamil Nadu) ಹರಿಬಿಡುತ್ತಿರುವ ಕಾವೇರಿ ನೀರಿನ(Cauvery Water Dispute) ಬಗ್ಗೆ ಕನ್ನಡಿಗರಲ್ಲಿ (Kannadigas) ಆಕ್ರೋಶದ ಜ್ವಾಲೆ ಹೊತ್ತಿ ಉರಿಯುತ್ತಿದೆ. ಇದೇ ಮಂಗಳವಾರ ನೀಡಿದ್ದ ಬೆಂಗಳೂರು ಬಂದ್​ಗೆ ಅಭೂತಪೂರ್ವ ಬೆಂಬಲ ಸಿಕ್ಕಿರುವ ಬೆನ್ನಲ್ಲೇ ಇದೀಗ ಇಂದು (ಸೆಪ್ಟೆಂಬರ್ 29) ಅಖಂಡ ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಲಾಗಿದೆ. ನಾಳೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳು ಸಿಗುವುದು ಅನುಮಾನವಾಗಿದೆ. ಹಾಗಾದ್ರೆ, ಕರ್ನಾಟಕ ಬಂದ್​ ಎಷ್ಟು ಗಂಟೆಯಿಂದ ಎಷ್ಟು ಗಂಟೆ ತನಕ ಇರಲಿದೆ? ಈ ವೇಳೆ ಏನಿರುತ್ತೆ ಏನಿರಲ್ಲ ಎನ್ನುವ ಸಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಕರ್ನಾಟಕ ಬಂದ್​ಗೆ ನೂರಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ

ಕರ್ನಾಟಕ ಬಂದ್​ಗೆ ನೂರಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ಕರವೇ ಶಿವರಾಮೇಗೌಡ ಬಣ, ಕರವೇ ಪ್ರವೀಣ್ ಶೆಟ್ಟಿ ಬಣ, ಓಲಾ, ಉಬರ್​ ಸಂಘ, ಆದರ್ಶ್ ಆಟೋ ಚಾಲಕರ ಸಂಘ ಬೆಂಬಲಿಸಿದೆ. ಖಾಸಗಿ ಶಾಲಾ ವಾಹನ ಚಾಲಕರು ನೈತಿಕ ಬೆಂಬಲ ನೀಡಿದ್ದಾರೆ. ಗೂಡ್ಸ್ ವಾಹನ, ಖಾಸಗಿ ವಾಹನ ಮಾಲೀಕರು, ಲಾರಿ ಮಾಲೀಕರು ಹಾಗೂ ಚಾಲಕರು ಸೇರಿ ಹಲವರು ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯ ರೈತರಿಂದ ನಾಳೆ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ, ರೈಲು ತಡೆ ಚಳವಳಿ

ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್

ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಸಂಪೂರ್ಣ ಬಂದ್ ಇರಲಿದೆ. ಶುಕ್ರವಾರ ಬೆಳಗ್ಗೆ ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಱಲಿ ಹಮ್ಮಿಕೊಂಡಿರೋ ಕನ್ನಡ ಪರ ಹೋರಾಟಗಾರರು, ಟೋಲ್‌ಗಳಿಗೆ ಮುತ್ತಿಗೆ ಹಾಕಿ ರೈಲು, ಹೆದ್ದಾರಿ ತಡೆಯೋದಕ್ಕೂ ಪ್ಲ್ಯಾನ್ ಮಾಡಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣಗಳಿಗೆ ಮುತ್ತಿಗೆ ಹಾಕೋದಾಗಿ ವಾಟಾಳ್ ನಾಗರಾಜ್ ಹೇಳಿದ್ದಾರೆ. ಅಲ್ಲದೇ, ಬೀದರ್‌ನಿಂದ ಚಾಮರಾಜನಗರವರೆಗೆ, ಕೋಲಾರದಿಂದ ಮಂಗಳೂರಿನವರೆಗೆ ಜಿಲ್ಲೆ ಜಿಲ್ಲೆಯಲ್ಲೂ ಕರ್ನಾಟಕ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಕರವೇ ನಾರಾಯಣಗೌಡ ಮಹಿಳಾ ಘಟಕ ಬೃಹತ್ ಪ್ರತಿಭಟನೆ

ಬೆಳಿಗ್ಗೆ 11 ಗಂಟೆ ಸುಮಾರಿಗೆ ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕದ ಪರವಾಗಿ ಸಂಘಟಿತ ಹೋರಾಟ ನಡೆಸದ ರಾಜ್ಯದ ಸಂಸದರ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಮಹಿಳೆಯರು ಗಾಂಧಿನಗರದ ಕರವೇ ಕಚೇರಿಯಿಂದ ಫ್ರೀಡಂ ಪಾರ್ಕ್‌ವರೆಗೆ ಬೃಹತ್ ರ್ಯಾಲಿ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.

ನಾಳೆ ಏನಿರಲ್ಲ?

ಕರ್ನಾಟಕ ಬಂದ್ ದಿನ ಹೋಟೆಲ್​ಗಳು ಇರಲ್ಲ, ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ನೀಡಿರುವುದರಿಂದ ಚಿತ್ರಮಂದಿರಗಳು ಕ್ಲೋಸ್ ಆಗಿರಲಿವೆ. ಇನ್ನುಳಿದಂತೆ ಮಾಲ್​ಗಳು, ಆಟೋ, ಕ್ಯಾಬ್, ಓಲಾ, ಉಬರ್ ಖಾಸಗಿ ಬಸ್​ಗಳು ರಸ್ತೆಗೆ ಇಳಿಯಲ್ಲ. ಬೇಕರಿಗಳು ಕ್ಲೋಸ್ ಆಗಿರಲಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಂದ್​ ಬಿಸಿ ತಟ್ಟಲಿದೆ. ಶಾಲಾ-ಕಾಲೇಜುಗಳು ಓಪನ್ ಆಗೋದು ಡೌಟ್ ಎನ್ನಲಾಗಿದೆ.

ಏನೆಲ್ಲಾ ಇರುತ್ತೆ?

ಇನ್ನುಇಂದು ಏನೆಲ್ಲಾ ಇರುತ್ತೆ ಎನ್ನುವುದನ್ನು ನೋಡೋದಾದ್ರೆ ಕರ್ನಾಟಕ ಬಂದ್ ವೇಳೆ ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಶಾಪ್​ಗಳು, ಆಂಬುಲೆನ್ಸ್, ಹಾಲಿನ ಅಂಗಡಿ ಎಂದಿನಂತೆ ತೆರೆದಿರುತ್ತವೆ.

ಉಳಿದಂತೆ ಬಿಎಂಟಿಸಿ, ಕೆಎಸ್ಆರ್​ಟಿಸಿ ಸೇರಿದಂತೆ ನಾಲ್ಕು ನಿಗಮಗಳ ಬಸ್​ಗಳು, ಶಾಲೆ-ಕಾಲೇಜುಗಳು, ಮತ್ತು ಮೆಟ್ರೋ ಸೇವೆ ಹಾಗೂ ಸರ್ಕಾರಿ ಕಚೇರಿಗಳ ಬಗ್ಗೆ ಈವರೆಗೂ ನಿರ್ಧಾರವಾಗಿಲ್ಲ. ಸಂಜೆ ವೇಳೆ ಎಲ್ಲಾ ತಿಳಿಯಲಿದೆ.

ಮೊನ್ನೆ ಬಂದ್ ವೇಳೆ ಬೆಂಗಳೂರು ಸಂಪೂರ್ಣ ಸ್ತಬ್ಧವಾದಂತೆ ನಾಳೆ ಕೂಡ ಕರ್ನಾಟಕ ಸಂಪೂರ್ಣವಾಗಿ ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ ಈ ಬಂದ್ ಎಷ್ಟರ ಮಟ್ಟರ ಮಟ್ಟಿಗೆ ಕಾವೇರಿ ವಿಚಾರದಲ್ಲಿ ಪರಿಣಾಮ ಬೀರಲಿದೆ ಅನ್ನೋದೆ ಪ್ರಶ್ನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Thu, 28 September 23

ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ