ಕರ್ನಾಟಕ ಬಂದ್: ರಾಜ್ಯದಲ್ಲಿ ಪ್ರತಿಭಟನೆಯ ಕಿಚ್ಚು ಎಲ್ಲೆಲ್ಲಿ ಹೇಗಿದೆ?
ಬೆಂಗಳೂರು: ರಾಜ್ಯಾದ್ಯಂತ ಅನ್ನದಾತರ ಹೋರಾಟದ ಕಿಚ್ಚು ಹೆಚ್ಚಾಗಿದೆ. ಜಿಲ್ಲೆ ಜಿಲ್ಲೆಗಳಲ್ಲೂ ಬೆಳಗ್ಗೆಯಿಂದಲೇ ಪ್ರತಿಭಟನೆ ಶುರುವಾಗಿದೆ. ದಾವಣಗೆರೆ, ಹಾಸನ, ಬಾಗಲಕೋಟೆ, ಗದಗ, ಮಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ರೈತರ ಹೋರಾಟಕ್ಕೆ ಉತ್ತಮ ಬೆಂಬಲ ಸಿಕ್ಕಿದ್ದು, ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ತಡೆ ಹಿಡಿದಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ: ಎಪಿಎಂಸಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಖಂಡಿಸಿ ದಾವಣಗೆರೆಯಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಜಿ.ಪಂ. ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ವಾಹನಗಳ […]

ಬೆಂಗಳೂರು: ರಾಜ್ಯಾದ್ಯಂತ ಅನ್ನದಾತರ ಹೋರಾಟದ ಕಿಚ್ಚು ಹೆಚ್ಚಾಗಿದೆ. ಜಿಲ್ಲೆ ಜಿಲ್ಲೆಗಳಲ್ಲೂ ಬೆಳಗ್ಗೆಯಿಂದಲೇ ಪ್ರತಿಭಟನೆ ಶುರುವಾಗಿದೆ. ದಾವಣಗೆರೆ, ಹಾಸನ, ಬಾಗಲಕೋಟೆ, ಗದಗ, ಮಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ರೈತರ ಹೋರಾಟಕ್ಕೆ ಉತ್ತಮ ಬೆಂಬಲ ಸಿಕ್ಕಿದ್ದು, ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ತಡೆ ಹಿಡಿದಿದ್ದಾರೆ.
ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ:
ಎಪಿಎಂಸಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಖಂಡಿಸಿ ದಾವಣಗೆರೆಯಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಜಿ.ಪಂ. ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ವಾಹನಗಳ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಚಿನ್ನದ ನಾಡಲ್ಲಿ ಕತ್ತೆಗೆ ಮೋದಿ, ಕುದುರೆಗೆ ಅಂಬಾನಿ ಮುಖವಾಡ :
ಚಿನ್ನದ ನಾಡು ಕೋಲಾರದಲ್ಲಿ ರೈತರ ಹೋರಾಟ ಆರಂಭವಾಗಿದ್ದು, ರೈತ ಸಂಘಟನೆಗಳಿಗೆ ಪ್ರಗತಿಪರ ಸಂಘಟನೆಗಳು ಸಾಥ್ ನೀಡಿವೆ. ಕೋಲಾರ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಟೈರ್ಗೆ ಬೆಂಕಿ ಹಾಕುವ ವಿಚಾರದಲ್ಲಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದೆ. ಈ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಕಂಡು ಬಂದಿದೆ. ಕಡೆಗೆ ಫ್ಲೆಕ್ಸ್ಗಳಿಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹೊಸ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಕತ್ತೆಗೆ ಮೋದಿ, ಕುದುರೆಗೆ ಅಂಬಾನಿ ಮುಖವಾಡ ಹಾಕಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ಪಂಜಿನ ಮೆರವಣಿಗೆ:
ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ರೈತರಿಂದ ಪ್ರತಿಭಟನೆ ನಡೆಯುತ್ತಿದೆ. ಪಂಜಿನ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರೆಬೆತ್ತಲೆ ಪ್ರತಿಭಟನೆ: ರೈತ ಮುಖಂಡ ಲಕ್ಷ್ಮೀಕಾಂತ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗ ನಗರದ ಗಾಂಧಿವೃತ್ತದಲ್ಲಿ ಅರೆಬೆತ್ತಲೆಯಾಗಿ ತಲೆಕೆಳಗಾಗಿ ನಿಂತು ರೈತರು ಆಕ್ರೋಶ ಹೊರ ಹಾಕಿದ್ದಾರೆ.ಪೊಲೀಸರು ಮತ್ತು ರೈತ ಮುಖಂಡರ ನಡುವೆ ವಾಗ್ವಾದ ನಡೆದಿದೆ.
Published On - 7:52 am, Mon, 28 September 20




