AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಕರ್ನಾಟಕ ಬಂದ್​ಗೆ ಕಾರಣವೇನು? ಏನೇನಿದೆ, ಏನೇನಿಲ್ಲ? ವಿವರ ಇಲ್ಲಿದೆ

ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು 12 ಗಂಟೆಗಳ ಕಾಲ ಕರ್ನಾಟಕ ಬಂದ್‌ ಆಚರಿಸುತ್ತಿವೆ. ರಾಜ್ಯ ಸರ್ಕಾರ ಬಂದ್‌ಗೆ ಬೆಂಬಲ ನೀಡುತ್ತಿಲ್ಲವಾದರೂ ಬಸ್, ಓಲಾ, ಉಬರ್ ಸೇವೆಗಳ ಮೇಲೆ ಭಾಗಶಃ ಪರಿಣಾಮ ಬೀರಲಿದೆ. ಬಂದ್ ಕುರಿತ ವಿವರ ಇಲ್ಲಿದೆ.

Karnataka Bandh: ಕರ್ನಾಟಕ ಬಂದ್​ಗೆ ಕಾರಣವೇನು? ಏನೇನಿದೆ, ಏನೇನಿಲ್ಲ? ವಿವರ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಕನ್ನಡ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು
ಗಣಪತಿ ಶರ್ಮಾ
|

Updated on: Mar 22, 2025 | 7:35 AM

Share

ಬೆಂಗಳೂರು, ಮಾರ್ಚ್ 22: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ, ಕನ್ನಡ ಪರ ಸಂಘಟನೆಗಳು ಇಂದು (ಮಾರ್ಚ್ 22, ಶನಿವಾರ) ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ 12 ಗಂಟೆಗಳ ಕಾಲ ಕರ್ನಾಟಕ ಬಂದ್‌ಗೆ  (Karnataka Bandh) ಕರೆ ನೀಡಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನಿರ್ವಾಹಕನ ಮೇಲೆ ಮರಾಠಿ ಮಾತನಾಡದ ಕಾರಣ ಇತ್ತೀಚಗೆಎ ಹಲ್ಲೆ ನಡೆಸಲಾಗಿದ್ದು, ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಈ ವಿಚಾರ ಹಾಗೂ ಕನ್ನಡಿಗರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಂದ್​ ಆಚರಿಸಲಾಗುತ್ತಿದೆ.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬಂದ್‌ಗೆ ಬೆಂಬಲ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಘೋಷಿಸಿದ್ದರು. ಇದು ಸರಿಯಾದ ಕ್ರಮವಲ್ಲ ಎಂದು ನಾವು ಅವರಿಗೆ (ಬಂದ್​ಗೆ ಕರೆ ನೀಡಿದ ಸಂಘಟನೆಗಳಿಗೆ) ಹೇಳಲುಬಯಸುತ್ತೇವೆ. ಏಕೆಂದರೆ ಬಂದ್​​ನಿಂದ ಈಗಾಗಲೇ ಪರೀಕ್ಷೆಗಳು ಪ್ರಾರಂಭವಾಗಿರುವಿದರಿಂದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಮತ್ತು ರಾಜ್ಯದ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಯಾಣಿಕರು, ವ್ಯಾಪಾರ ವಹಿವಾಟು ಮತ್ತು ವಿದ್ಯಾರ್ಥಿಗಳ ಸಾಮಾನ್ಯ ದಿನಚರಿಯ ಮೇಲೆ ಬಂದ್​ನಿಂದ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ಕರ್ನಾಟಕ ಬಂದ್: ನಾಳೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುತ್ತಾ?
Image
Karnataka Bandh: ಕರ್ನಾಟಕ ಬಂದ್, ನೀವು ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ
Image
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
Image
ಕರ್ನಾಟಕ ಬಂದ್ ದಿನ ಏನೇನಿರುತ್ತೆ, ಏನೇನಿರಲ್ಲ? ಇಲ್ಲಿದೆ ವಿವರ

ಕರ್ನಾಟಕ ಬಂದ್‌ಗೆ ಕಾರಣವೇನು?

ಕಳೆದ ತಿಂಗಳು, ಬೆಳಗಾವಿಯಿಂದ ಬಾಳೇಕುಂದ್ರಿಗೆ ಚಲಿಸುತ್ತಿದ್ದ ಬಸ್ಸಿನ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ಮರಾಠಿ ಪರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆಸಿದ್ದರು. ಈ ಘಟನೆಯ ನಂತರ, ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಅಂತರರಾಜ್ಯ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಕಂಡಕ್ಟರ್ ಮೇಲಿನ ದಾಳಿಯು ಎರಡು ರಾಜ್ಯಗಳ ನಡುವಿನ ಭಾಷಾ ವಿವಾದಗಳ ಬಗ್ಗೆ ಮತ್ತೆ ಚರ್ಚೆಯನ್ನು ಹುಟ್ಟುಹಾಕಿತ್ತು. ಈ ಪ್ರದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಕೋಮು ಸಾಮರಸ್ಯವನ್ನು ಕದಡುವ ಮರಾಠಿ ಪರ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟವು ಈ ಬಂದ್​​ಗೆ ಕರೆ ನೀಡಿದೆ.

ಇದನ್ನೂ ಓದಿ: ಕರ್ನಾಟಕ ಬಂದ್, ನೀವು ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

ಕರ್ನಾಟಕ ಬಂದ್: ಏನೇನಿದೆ, ಏನೇನಿಲ್ಲ?

ಬಸ್ ಸೇವೆಗಳು: ಕೆಎಸ್‌ಆರ್‌ಟಿಸಿ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡಿದ್ದು, ಇದು ರಾಜ್ಯಾದ್ಯಂತ ಬಸ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು.

ಓಲಾ, ಉಬರ್: ಓಲಾ, ಉಬರ್‌ನಂತಹ ಕ್ಯಾಬ್ ಅಗ್ರಿಗೇಟರ್​​ಗಳು, ಕೆಲವು ರಿಕ್ಷಾ ಒಕ್ಕೂಟಗಳು ಸಹ ಬಂದ್‌ಗೆ ಬೆಂಬಲ ನೀಡಿವೆ. ಆದಾಗ್ಯೂ, ಮೆಟ್ರೋ, ರೈಲ್ವೆ ಮತ್ತು ವಿಮಾನ ನಿಲ್ದಾಣ ಸೇವೆಗಳು ಇರಲಿವೆ.

ಬ್ಯಾಂಕ್‌ಗಳು: ಇಂದು ಶನಿವಾರವಾದ್ದರಿಂದ ಬ್ಯಾಂಕ್‌ಗಳು ಮುಚ್ಚಿರುತ್ತವೆ. ಕೆಲವು ಶಾಲೆಗಳು ಮತ್ತು ಕಾಲೇಜುಗಳಿಗೆ ಇಂದು ರಜೆ ಇರಬಹುದು, ಆದರೆ ಈ ವಿಚಾರವಾಗಿ ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿಲ್ಲ.

ಸರ್ಕಾರಿ ಕಚೇರಿಗಳು: ಸರ್ಕಾರಿ ಕಚೇರಿಗಳು ಸಹ ತೆರೆದಿರುತ್ತವೆ. ಆರೋಗ್ಯ ಸೇವೆ ಅಥವಾ ಇತರ ಅಗತ್ಯ ಸೇವೆಗಳನ್ನು ಒದಗಿಸುವ ಎಲ್ಲವೂ ಕಾರ್ಯನಿರ್ವಹಿಸುತ್ತವೆ.

ಅಗತ್ಯ ವಸ್ತುಗಳ ಪೂರೈಕೆ: ಹಾಲು, ಅಗತ್ಯ ವಸ್ತುಗಳ ಪೂರೈಕೆ ಎಂದಿನಂತೆಯೇ ಇರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?