ಕರ್ನಾಟಕ ಬಂದ್: ಇಂದು ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದು, ಇಂದು (ಸೆ.29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ರಜೆ ನೀಡುವ ವಿಚಾರವಾಗಿ ಗೊಂದಲ ಮೂಡಿದೆ.

ಕರ್ನಾಟಕ ಬಂದ್: ಇಂದು ಈ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕ ಬಂದ್ ಹಿನ್ನೆಲೆ ಕೆಲವೆಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on:Sep 29, 2023 | 10:08 AM

ಹಾಸನ, ಸೆ.28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಹರಿಬಿಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು, ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದು, ಇಂದು  (ಸೆ.29) ಕರ್ನಾಟಕ ಬಂದ್​ಗೆ (Karnataka Bandh) ಕರೆ ನೀಡಲಾಗಿದೆ. ಹೀಗಾಗಿ ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ರಜೆ ನೀಡುವ ವಿಚಾರವಾಗಿ ಗೊಂದಲ ಮೂಡಿದೆ.

ಕರ್ನಾಟಕ ಬಂದ್ ಹಿನ್ನೆಲೆ ಇಂದು ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ರಜೆ ಘೋಷಣೆ ಮಾಡಿವೆ. ಮಕ್ಕಳಿಗೆ ಅನಾನುಕೂಲ ಉಂಟಾಗುವ ಸಾಧ್ಯತೆ ಹಿನ್ನೆಲೆ ರಜೆ ನೀಡಲಾಗಿದೆ. ಇದೀಗ ಬೇಲೂರು ತಾಲೂಕಿನ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಬಿಇಓ ನಾರಾಯಣ್ ಆದೇಶಿಸಿದ್ದಾರೆ. ಬೇಲೂರನಲ್ಲಿ ಬಹುತೇಕ ಬಂದ್ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕ ಬಂದ್: ಬೆಂಗಳೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹಾಸನ ತಾಲೂಕಿನ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಕ್ಷೇತ್ರ ಶಿಕ್ಷಣಾದಿಕಾರಿ ಜಿ.ಎನ್.ಮಂಜುಳ, ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದರು. ಚನ್ನರಾಯಪಟ್ಟಣ ತಾಲ್ಲೂಕಿನ ಪ್ರಾಥಮಿಕ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಬಿಇಓ ದೀಪಾ ಎಚ್.ಎನ್ ಆದೇಶ ಹೊರಡಿಸಿದರೆ, ಅರಕಲಗೂಡು ತಾಲೂಕಿನ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ನೀಡಿ ಬಿಇಓ ದೇವರಾಜ್ ಆದೇಶ ಹೊರಡಿಸಿದ್ದಾರೆ. ಆಲೂರು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿ ಬಿಇಓ ಕೃಷ್ಣೇಗೌಡ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕನ್ನಡಪರ ಹಾಗು ರೈತಪರ ಸಂಘಟನೆಗಳು ಸಂಪೂರ್ಣ ಬಂದ್​ಗೆ ಕರೆ ನೀಡಿವೆ. ಈ ಬಂದ್​ಗೆ ಹಲವಾರು ಸಂಗಟನೆಗಳು ಬೆಂಬಲ ಸೂಚಿಸಿವೆ. ಸದ್ಯ ಎರಡು ತಾಲೂಕುಗಳಲ್ಲಿ ಪ್ರಾಧಮಿಕ ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದ್ದು, ಉಳಿದಂತೆ ಗೊಂದಲದ ಗೂಡಾಗಿದೆ.

ಕರ್ನಾಟಕ ಬಂದ್ ಹಿನ್ನೆಲೆ  ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ರಜೆ ಘೋಷಣೆ ಮಾಡಿವೆ. ಮಕ್ಕಳಿಗೆ ಅನಾನುಕೂಲ ಉಂಟಾಗುವ ಸಾಧ್ಯತೆ ಹಿನ್ನೆಲೆ ರಜೆ ನೀಡಲಾಗಿದೆ. ಆದರೆ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆಗಳ ರಜೆ ಬಗ್ಗೆ ಇನ್ನು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಮಂಡ್ಯದಲ್ಲಿ ಪ್ರತಿಭಟನೆಯ ಕಿಚ್ಚು, ಶಾಲಾ ಕಾಲೇಜುಗಳಿಗೆ ರಜೆ

ಮಂಡ್ಯ: ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಹೆಚ್ಚಿದೆ. ಹೀಗಾಗಿ ಇಂದು ಜಿಲ್ಲಾದ್ಯಂತದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕುಮಾರ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ರಜೆ

ನೆಲಮಂಗಲ: ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಶಾಲಾ ಕಾಲೇಜು ಮಕ್ಕಳ ಹಿತದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಮೈಸೂರು: ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Karnataka Bandh:ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ?

ಇದಕ್ಕೂ ಮುನ್ನ ರಜೆ ಘೋಷಣೆ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪರಿಸ್ಥಿತಿ ಅವಲೋಕಿಸಿ ಶಾಲಾ ಕಾಲೇಜಿಗೆ ರಜೆ ನೀಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದಿದ್ದರು.

ದಕ್ಷಿಣ ಕನ್ನಡ ಜಿಲ್ಲೆ ಶಾಲಾ ಕಾಲೇಜುಗಳಿಗಿಲ್ಲ ರಜೆ

ದಕ್ಷಿಣ ಕನ್ನಡ ಜಿಲ್ಲೆಗೆ ಕರ್ನಾಟಕ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ. ಹೀಗಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡದಿರುವ ತೀರ್ಮಾನಕ್ಕೆ ಜಿಲ್ಲಾಡಳಿತ ಬಂದಿದೆ. ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

ಕೋಲಾರದ ಶಾಲೆಗಳಿಗಿಲ್ಲ ರಜೆ

ನಾಳೆ ಅಖಂಡ ಕರ್ನಾಟಕ ಬಂದ್ ಇದ್ದರೂ ಕೋಲಾರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಎಂದಿನಂತೆ ಬಸ್ ಸಂಚಾರ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ಹೇಳಿದ್ದಾರೆ. ಬಲವಂತದ ಬಂದ್ ಮಾಡುವಂತ್ತಿಲ್ಲ, ಪರೀಕ್ಷೆ ಹಾಗೂ ಮಕ್ಕಳ ದೃಷ್ಟಿಯಿಂದ ಬಲವಥದ ಬಂದ್ ಬೇಡ ಎಂದು ಮನವಿ ಮಾಡಿದರು.

ಚಾಮರಾಜನಗರದಲ್ಲೂ ರಜೆ

ನಾಳೆ ಚಾಮರಾಜನಗರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಚಾಮರಾಜನಗರ ಡಿಸಿ ಶಿಲ್ಪಾನಾಗ್‌ ಆದೇಶ ಹೊರಡಿಸಿದ್ದಾರೆ.  ಮುಂಜಾಗ್ರತಾ ಕ್ರಮವಾಗಿ ಚಾಮರಾಜನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಿಕ್ಕಬಳ್ಳಾಪುರಕ್ಕಿಲ್ಲ ರಜೆ

ಚಿಕ್ಕಬಳ್ಳಾಫುರ: ಇಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಆದರೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಟಿವಿ9ಗೆ ಚಿಕ್ಕಬಳ್ಳಾಫುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್ ಹೇಳಿದ್ದಾರೆ. ಸಾರಿಗೆ ಸಂಚಾರ ಸೇರಿದಂತೆ ವ್ಯಾಪಾರ ವಹಿವಾಟು ಎಂದಿನಂತೆ ಇರಲಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 pm, Thu, 28 September 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್