ಕಾವೇರಿ ನೀರು ಸಂಕಷ್ಟ ಸೂತ್ರ ರೆಡಿ ಮಾಡ್ತೇವೆ, ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ: ಡಿಕೆ ಶಿವಕುಮಾರ್
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು, ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ (Karnataka Bandh) ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಜನರ ರಕ್ಷಣೆಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದೇವೆ. ಎಂದಿನಂತೆ ಅಂಗಡಿಗಳು ಓಪನ್ ಇವೆ, ವಾಹನಗಳು ಓಡಾಡುತ್ತಿವೆ ಎಂದರು.
ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ರಾಜ್ಯದ ಪರವಾಗಿ ಅಧಿಕಾರಿಗಳು ಭಾಗಿಯಾಗುತ್ತಾರೆ. ಬಳಿಕ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಕಾವೇರಿ ವಿಚಾರದಲ್ಲಿ ವಾದ ಮಂಡಿಸಿದವರೆಲ್ಲರೂ ಭಾಗಿಯಾಗುತ್ತಾರೆ ಎಂದರು.
ಇದನ್ನೂ ಓದಿ: Karnataka Bandh: ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ, ಬಿಎಂಟಿಸಿ ಬಸ್ ನಿಲ್ದಾಣದಿಂದ ಕದಲದ ವಾಹನಗಳು, ಜನರ ಪರದಾಟ
ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಮಾತನಾಡುತ್ತಿದ್ದೇವೆ. ಸಂಕಷ್ಟ ಸೂತ್ರದ ಬಗ್ಗೆ ನಾವು ರೆಡಿ ಮಾಡಿಕೊಳ್ಳುತ್ತೇವೆ. ಬಳಿಕ ಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು.
ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾನು ಮಾತನಾಡಲ್ಲ. ನನಗೆ ಅವರಗಿಂತ ಜವಾಬ್ದಾರಿ ಹೆಚ್ಚಿದೆ. ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು. ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡುತ್ತಿದ್ದೇವೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ