AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪನ್ನೀರ್ ಪ್ರಿಯರಿಗೆ ಶಾಕ್: ರಾಜ್ಯಾದ್ಯಂತ ಕೃತಕ ‘ಅನಲಾಗ್ ಪನ್ನೀರ್’ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ

ಕರ್ನಾಟಕದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆಹಾರ ಸುರಕ್ಷತೆ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಕೃತಕ 'ಅನಲಾಗ್ ಪನ್ನೀರ್' ಬಳಕೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿದೆ. ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ರಾಸಾಯನಿಕ ಬಳಸಿ ತಯಾರಿಸುವ ಈ ಪನ್ನೀರ್ ಆರೋಗ್ಯಕ್ಕೆ ಹಾನಿಕರ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಇನ್ನು ಮುಂದೆ ಶುದ್ಧ ಪನ್ನೀರ್ ಮಾತ್ರ ಬಳಸಬೇಕು. ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಪನ್ನೀರ್ ಪ್ರಿಯರಿಗೆ ಶಾಕ್: ರಾಜ್ಯಾದ್ಯಂತ ಕೃತಕ ‘ಅನಲಾಗ್ ಪನ್ನೀರ್’ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on: Aug 22, 2026 | 9:58 AM

Share

ಬೆಂಗಳೂರು,ಆ.22: ಪನ್ನೀರ್ ಪ್ರಿಯರಿಗೆ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ. ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ಸಂಸ್ಥೆಗಳಲ್ಲಿ ಕೃತಕವಾಗಿ ತಯಾರಿಸುವ ‘ಅನಲಾಗ್ ಪನ್ನೀರ್’ (Analog Paneer) ಬಳಕೆಯನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಿದೆ.

ಏನಿದು ಕೃತಕ ಅಥವಾ ‘ಅನಲಾಗ್ ಪನ್ನೀರ್’?

ಸಾಮಾನ್ಯವಾಗಿ ಅಸಲಿ ಪನ್ನೀರ್ ಅನ್ನು ಸಂಪೂರ್ಣವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ತಯಾರಿಸಲಾಗುತ್ತದೆ. ಆದರೆ, ವೆಚ್ಚ ಕಡಿಮೆ ಮಾಡಲು ಮತ್ತು ಹೆಚ್ಚಿನ ಲಾಭ ಗಳಿಸಲು ಹಲವು ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ಪಿಷ್ಟ ಹಾಗೂ ಕೆಮಿಕಲ್‌ಗಳನ್ನು ಬಳಸಿ ತಯಾರಿಸಿದ ‘ಅನಲಾಗ್ ಪನ್ನೀರ್’ ಅನ್ನು ಗ್ರಾಹಕರಿಗೆ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಕೃತಕ ಪನ್ನೀರ್‌ನಲ್ಲಿ ಬಳಸುವ ರಾಸಾಯನಿಕಗಳು ಮತ್ತು ಗುಣಮಟ್ಟವಿಲ್ಲದ ಕೊಬ್ಬಿನಾಂಶ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ತರಹದ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತಿವೆ. ಆಹಾರ ಸುರಕ್ಷತಾ ಕಾಯ್ದೆಯಡಿ ಹಾಲಿನ ಉತ್ಪನ್ನವಲ್ಲದ ಕೃತಕ ವಸ್ತುವನ್ನು ‘ಪನ್ನೀರ್’ ಹೆಸರಿನಲ್ಲಿ ಗ್ರಾಹಕರಿಗೆ ನೀಡುವುದು ಕಾನೂನುಬಾಹಿರ.

ಇದನ್ನೂ ಓದಿ: ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಫ್‌ ಆಗಬಾರದು: ಹೈಕೋರ್ಟ್ ಖಡಕ್ ಆದೇಶ!

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

ಹಾಲಿನ ಉತ್ಪನ್ನವೇ ಕಡ್ಡಾಯ: ಪನ್ನೀರ್ ತಯಾರಿಕೆಗೆ ಕಡ್ಡಾಯವಾಗಿ ಶುದ್ಧ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನಷ್ಟೇ ಬಳಸಬೇಕು.

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಬ್ರೇಕ್: ಯಾವುದೇ ಕಾರಣಕ್ಕೂ ಕೃತಕ ಅನಲಾಗ್ ಪನ್ನೀರ್ ಬಳಸಿ ಗ್ರಾಹಕರಿಗೆ ವಿತರಿಸುವಂತಿಲ್ಲ.

ದಾಳಿ ಹಾಗೂ ಶಿಕ್ಷೆ: ಇಲಾಖೆಯ ಅಧಿಕಾರಿಗಳು ರಾಜ್ಯದ ವಿವಿಧ ಹೋಟೆಲ್, ರೆಸ್ಟೋರೆಂಟ್ ಹಾಗೂ ಡೈರಿಗಳ ಮೇಲೆ ವಿಶೇಷ ದಾಳಿ ನಡೆಸಲಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಆಹಾರ ಸುರಕ್ಷತಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!