Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಕಟ್ಟುನಿಟ್ಟಿನ ಜಾರಿಗೆ ಮಹತ್ವದ ಆದೇಶ

ಕರ್ನಾಟಕ ಸರ್ಕಾರವು ಪರಿಸರ ಸಂರಕ್ಷಣೆಗಾಗಿ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳು ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ನಿಷೇಧಿಸಿರುವ ಹಿಂದಿನ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಸುತ್ತೋಲೆ ಹೊರಡಿಸಿದೆ. ಪ್ಲಾಸ್ಟಿಕ್‌ ಬದಲು ಪರಿಸರಸ್ನೇಹಿ ಪರ್ಯಾಯಗಳನ್ನು ಬಳಸುವಂತೆ ಸರ್ಕಾರ ಸೂಚನೆ ನೀಡಿದೆ.

ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ ಕಟ್ಟುನಿಟ್ಟಿನ ಜಾರಿಗೆ ಮಹತ್ವದ ಆದೇಶ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 05, 2025 | 1:54 PM

ಬೆಂಗಳೂರು, ಫೆಬ್ರವರಿ 5: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.

ಸರ್ಕಾರಿ ಆದೇಶದಲ್ಲೇನಿದೆ?

ಪ್ಲಾಸ್ಟಿಕ್‌ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್​ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ಉಳ್ಳ ಗ್ಲಾಸ್‌, ಸ್ಟೀಲ್‌, ಪೇಪರ್‌ ಮತ್ತಿತರ ಪ್ಲಾಸ್ಟಿಕ್‌ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕಳೆದ ವರ್ಷವೇ ಸುತ್ತೋಲೆ ಹೊರಡಿಸಿದ್ದ ಸರ್ಕಾರ: ಆದರೆ…

ಏಕ ಬಳಕೆಯ ಬಳಕೆಯ ಪ್ಲಾಸ್ಟಿಕ್‌ ಬಾಟಲ್ ನೀರಿನ ಬಳಕೆ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ 2024ರ ನವೆಂಬರ್​ನಲ್ಲಿಯೂ ಸುತ್ತೋಲೆ ಹೊರಡಿಸಲಾಗಿತ್ತು. ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ಬದಲಿಗೆ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ಏರ್ಪಡಿಸುವಂತೆ ಸೂಚಿಸಿ ಆದೇಶ ಹಾಗೂ ಸುತ್ತೋಲೆಗಳನ್ನು ಹೊರಡಿಸಲಾಗಿತ್ತು. ಆದಗ್ಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್‌ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿಗಳು ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಪ್ಲಾಸ್ಟಿಕ್ ಪ್ಯಾಕೆಟ್​​​ನಲ್ಲಿರುವ ಆಹಾರ ಸೇವಿಸುತ್ತಿದ್ದೀರಾ? ಈ ಕ್ಯಾನ್ಸರ್ ಬರುವುದು ಖಚಿತ

ಎಲ್ಲ ಇಲಾಖೆಗಳ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ, ಇಲಾಖೆ, ಮಂಡಳಿ, ನಿಗಮಗಳಿಗೆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕು ಎಂದೂ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Wed, 5 February 25

ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ