ಎಣ್ಣೆ ಪ್ರಿಯರಿಗೆ ಗುಡ್​ನ್ಯೂಸ್: ನ. 20ರ ಮದ್ಯ ಮಾರಾಟ ಬಂದ್ ವಾಪಸ್

ನವೆಂಬರ್ 20ರಂದು ಮದ್ಯ ಸಿಗಲ್ಲ ಎಂದು ಚಿಂತೆ ಮಾಡುತ್ತಿದ್ದ ಎಣ್ಣೆ ಪ್ರಿಯರಿಗೆ ಗುಡ್​ನ್ಯೂಸ್. ಕರ್ನಾಟಕ ಬಾರ್ ಅಸೋಸಿಯೇಷನ್ ಸಿಎಂ ಸಿದ್ದರಾಮಯ್ಯನವರ ಜೊತೆಗಿನ ಸಭೆ ಸಫಲವಾಗಿದೆ. ಹೀಗಾಗಿ ನಾಳೆ ಕರ್ನಾಟಕದಾದ್ಯಂತ ಮದ್ಯ ಮಾರಾಟಕ್ಕೆ ನೀಡಿದ್ದ ಬಂದ್​ ವಾಪಸ್ ಪಡೆದುಕೊಳ್ಳಲಾಗಿದೆ.

ಎಣ್ಣೆ ಪ್ರಿಯರಿಗೆ ಗುಡ್​ನ್ಯೂಸ್: ನ. 20ರ ಮದ್ಯ ಮಾರಾಟ ಬಂದ್ ವಾಪಸ್
Follow us
ರಮೇಶ್ ಬಿ. ಜವಳಗೇರಾ
|

Updated on:Nov 19, 2024 | 6:03 PM

ಬೆಂಗಳೂರು, (ನವೆಂಬರ್ 19):  ಕರ್ನಾಟಕ ಸರ್ಕಾರದ ಮುಂದೆ ಅಬಕಾರಿ ಇಲಾಖೆಯ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್‌ಗಳನ್ನು ಬಂದ್ ಮಾಡುವ ಘೋಷಣೆ ಮಾಡಲಾಗಿತ್ತು. ಆದರೆ ಈಗ ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್‌ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ. ಇಂದು (ನವೆಂಬರ್ 19) ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕದ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಇನ್ನು ಅವರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಬಾರ್ ಅಸೋಸಿಯೇಷನ್, ನವೆಂಬರ್‌ 20ರ ಬುಧವಾರದ ಮದ್ಯ ಮಾರಾಟ ಬಂದ್​ ಕರೆ ವಾಪಸ್ ಪಡೆದುಕೊಂಡಿದೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ನವೆಂಬರ್ 20ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​​​ರಾಜ್ಯಾದ್ಯಂತ ಎಲ್ಲಾ ವೈನ್ ಸ್ಟೋರ್‌ಗಳ ಬಂದ್‌ಗೆ ಕರೆ ನೀಡಿತ್ತು. ಆದ್ರೆ,  ಕರ್ನಾಟಕ ಬಾರ್ ಅಸೋಸಿಯೇಷನ್ ಇಂದು(ನವೆಂಬರ್ 19) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಿದ್ದ, ಅದು ಸಫಲವಾಗಿದೆ. ಹೀಗಾಗಿ ಬಾರ್ ಅಸೋಸಿಯೇಷನ್ ನೀಡಿದ್ದ ನಾಳಿನ ಬಂದ್​ ವಾಪಸ್ ಪಡೆದುಕೊಂಡಿದೆ. ಸಿಎಂ ಭೇಟಿ ಬಳಿಕ ಸ್ವತಃ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತ ಮಾಲೀಕರು, ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್​ಗೆ ನಿರ್ಧಾರ

ಸಿದ್ದರಾಮಯ್ಯನವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ‌ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಸರ್ಕಾರ ಗಮನಹರಿಸಬೇಕೆಂದು ನಾಳೆ ರಾಜ್ಯವ್ಯಾಪಿ ಬಂದ್ ಕೊಟ್ಟಿದ್ದವು. ಆದ್ರೆ ಈಗ ನಮ್ಮ ಸಮಸ್ಯೆ ನಮ್ಮ ಕುಂದು ಕೊರತೆಗಳನ್ನು ಸಿಎಂ ಸಿದ್ದರಾಮಯ್ಯನವರು ಕೇಳಿದ್ದಾರೆ. ಹಾಗೆಯೇ ಎಸಿಎಸ್, ಕಮಿಷನರ್ ಗೆ ನಮ್ಮ ಬೇಡಿಕೆ ಕುರಿತು ವರದಿ ಕೋಡಲು ಹೇಳಿದ್ದು, ನಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟ ಬಂದ್ ವಾಪಸ್ ಪಡೆದಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:57 pm, Tue, 19 November 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ