ಬೆಂಗಳೂರು, (ನವೆಂಬರ್ 19): ಕರ್ನಾಟಕ ಸರ್ಕಾರದ ಮುಂದೆ ಅಬಕಾರಿ ಇಲಾಖೆಯ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್‌ಗಳನ್ನು ಬಂದ್ ಮಾಡುವ ಘೋಷಣೆ ಮಾಡಲಾಗಿತ್ತು. ಆದರೆ ಈಗ ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ. ಇಂದು (ನವೆಂಬರ್ 19) ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಕರ್ನಾಟಕದ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಇನ್ನು ಅವರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಬಾರ್ ಅಸೋಸಿಯೇಷನ್, ನವೆಂಬರ್ 20ರ ಬುಧವಾರದ ಮದ್ಯ ಮಾರಾಟ ಬಂದ್ ಕರೆ ವಾಪಸ್ ಪಡೆದುಕೊಂಡಿದೆ.
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಕಡಿಮೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟುಕೊಂಡು ನವೆಂಬರ್ 20ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ರಾಜ್ಯಾದ್ಯಂತ ಎಲ್ಲಾ ವೈನ್ ಸ್ಟೋರ್‌ಗಳ ಬಂದ್‌ಗೆ ಕರೆ ನೀಡಿತ್ತು. ಆದ್ರೆ, ಕರ್ನಾಟಕ ಬಾರ್ ಅಸೋಸಿಯೇಷನ್ ಇಂದು(ನವೆಂಬರ್ 19) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಿದ್ದ, ಅದು ಸಫಲವಾಗಿದೆ. ಹೀಗಾಗಿ ಬಾರ್ ಅಸೋಸಿಯೇಷನ್ ನೀಡಿದ್ದ ನಾಳಿನ ಬಂದ್ ವಾಪಸ್ ಪಡೆದುಕೊಂಡಿದೆ. ಸಿಎಂ ಭೇಟಿ ಬಳಿಕ ಸ್ವತಃ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ್ ರಾಜ್ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತ ಮಾಲೀಕರು, ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್‌ಗೆ ನಿರ್ಧಾರ
ಸಿದ್ದರಾಮಯ್ಯನವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಸರ್ಕಾರ ಗಮನಹರಿಸಬೇಕೆಂದು ನಾಳೆ ರಾಜ್ಯವ್ಯಾಪಿ ಬಂದ್ ಕೊಟ್ಟಿದ್ದವು. ಆದ್ರೆ ಈಗ ನಮ್ಮ ಸಮಸ್ಯೆ ನಮ್ಮ ಕುಂದು ಕೊರತೆಗಳನ್ನು ಸಿಎಂ ಸಿದ್ದರಾಮಯ್ಯನವರು ಕೇಳಿದ್ದಾರೆ. ಹಾಗೆಯೇ ಎಸಿಎಸ್, ಕಮಿಷನರ್ ಗೆ ನಮ್ಮ ಬೇಡಿಕೆ ಕುರಿತು ವರದಿ ಕೋಡಲು ಹೇಳಿದ್ದು, ನಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟ ಬಂದ್ ವಾಪಸ್ ಪಡೆದಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:57 pm, Tue, 19 November 24