AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡನ್ನೂ ಹಿಂದಿಕ್ಕಿ, ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ‌ ಏರಿದ ಕರ್ನಾಟಕ

ಬೆಂಗಳೂರು: ಕೊರೊನಾ ಎಂಟ್ರಿ ಕೊಟ್ಟಾಗ ನೆಮ್ಮದಿಯಾಗಿದ್ದ ರಾಜ್ಯಗಳಲ್ಲಿ ಈಗ ಸೋಂಕಿನ ಅಬ್ಬರ ಶುರುವಾಗಿದೆ. ಇದು ಕೇಂದ್ರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಪರಿಸ್ಥಿತಿ ಹಿಡಿತಕ್ಕೆ ಸಿಗುತ್ತಿಲ್ಲ. ಕರ್ನಾಟಕವೂ ಕೂಡ ಈ ಪಟ್ಟಿಗೆ ಸೇರಿದೆ. ಇದ್ದನ್ನೆಲ್ಲಾ ಅಳೆದು-ತೂಗಿ ಲೆಕ್ಕಾಚಾರ ಹಾಕಿರುವ ಐಐಟಿ ಸಂಶೋಧಕರು ಹೇಳಿದ್ದು ಏನು ಗೊತ್ತಾ? ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಅಲ್ಲೆಲ್ಲೋ ಮರೆಯಾಗಿದ್ದ ಕರ್ನಾಟಕ ಈಗ 4ನೇ ಸ್ಥಾನಕ್ಕೆ ಬಂದಿದೆ. ಈ ಬೆಳವಣಿಗೆಯ ನಡುವೆಯೇ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿರೋದು […]

ತಮಿಳುನಾಡನ್ನೂ ಹಿಂದಿಕ್ಕಿ, ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ‌ ಏರಿದ ಕರ್ನಾಟಕ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jul 26, 2020 | 3:49 PM

Share

ಬೆಂಗಳೂರು: ಕೊರೊನಾ ಎಂಟ್ರಿ ಕೊಟ್ಟಾಗ ನೆಮ್ಮದಿಯಾಗಿದ್ದ ರಾಜ್ಯಗಳಲ್ಲಿ ಈಗ ಸೋಂಕಿನ ಅಬ್ಬರ ಶುರುವಾಗಿದೆ. ಇದು ಕೇಂದ್ರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಪರಿಸ್ಥಿತಿ ಹಿಡಿತಕ್ಕೆ ಸಿಗುತ್ತಿಲ್ಲ. ಕರ್ನಾಟಕವೂ ಕೂಡ ಈ ಪಟ್ಟಿಗೆ ಸೇರಿದೆ. ಇದ್ದನ್ನೆಲ್ಲಾ ಅಳೆದು-ತೂಗಿ ಲೆಕ್ಕಾಚಾರ ಹಾಕಿರುವ ಐಐಟಿ ಸಂಶೋಧಕರು ಹೇಳಿದ್ದು ಏನು ಗೊತ್ತಾ?

ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಅಲ್ಲೆಲ್ಲೋ ಮರೆಯಾಗಿದ್ದ ಕರ್ನಾಟಕ ಈಗ 4ನೇ ಸ್ಥಾನಕ್ಕೆ ಬಂದಿದೆ. ಈ ಬೆಳವಣಿಗೆಯ ನಡುವೆಯೇ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಂಡಿರೋದು ಭಾರಿ ಆತಂಕ ಹುಟ್ಟುಹಾಕಿದೆ.

ತಮಿಳುನಾಡನ್ನೂ ಹಿಂದಿಕ್ಕಿ ಹೊಸ ದಾಖಲೆ ನಿರ್ಮಾಣ! ದೇಶದಲ್ಲಿ ಆರ್ಭಟ ನಡೆಸುತ್ತಿರುವ ಕೊರೊನಾ ಕರ್ನಾಟಕದಲ್ಲಿ ತನ್ನ ಸೆಕೆಂಡ್ ಇನ್ನಿಂಗ್ಸ್ ಶುರುಮಾಡಿದೆ. ಫಸ್ಟ್ ಇನ್ನಿಂಗ್ಸ್​ನಲ್ಲಿ ಕೇಂದ್ರದಿಂದ ಬೆನ್ನು ತಟ್ಟಿಸಿಕೊಂಡಿದ್ದ ಕರ್ನಾಟಕ ಈಗ ಅತೀ ಹೆಚ್ಚು ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ‌ ಏರಿದೆ. ಕರ್ನಾಟಕದಲ್ಲಿ ನಿನ್ನೆ ವೇಳೆಗೆ 55,388 ಸಕ್ರಿಯ ಪ್ರಕರಣಗಳಿದ್ದು, ತಮಿಳುನಾಡಿನಲ್ಲಿ 52,273 ಸಕ್ರಿಯ ಕೇಸ್​ಗಳಿವೆ. ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರಕ್ಕೆ ಮೊದಲ ಸ್ಥಾನ ಪಕ್ಕಾ ಆಗಿದ್ದು, ಇಲ್ಲಿ 1.44 ಲಕ್ಷ ಸಕ್ರಿಯ ಕೇಸ್​ಗಳಿವೆ.

ಮಳೆಗಾಲ, ಚಳಿಗಾಲ ಎರಡೂ ಡೇಂಜರ್! ಲಾಕ್​ಡೌನ್ ಜಂಜಾಟ ಅಂದುಕೊಂಡವರಿಗೆ ವರದಿಯೊಂದು ಶಾಕ್ ನೀಡಿದೆ. ಐಐಟಿ ಭುವನೇಶ್ವರ ಹಾಗೂ ಏಮ್ಸ್ ಸಂಶೋಧಕರು ಜಂಟಿಯಾಗಿ ನಡೆಸಿದ ಅಧ್ಯಯನದಿಂದ ಆತಂಕದ ವಿಚಾರ ಗೊತ್ತಾಗಿದೆ. ಈ ಅಧ್ಯಯನದಲ್ಲಿ ಮಳೆಗಾಲ ಮತ್ತು ಚಳಿಗಾಲದಲ್ಲಿ ಸೋಂಕು ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಸಲಾಗಿದೆ. ಚಳಿಗಾಲ ಹಾಗೂ ಮಳೆಗಾಲದಲ್ಲಿ ತಾಪಮಾನ ಕುಸಿತದಿಂದ ಕೊರೊನಾ‌ ವೈರಸ್​ಗೆ ಪೂರಕ ವಾತವರಣ ಸೃಷ್ಟಿಯಾಗಿದೆ. ಇದು ವೈರಸ್ ಹರಡುವಿಕೆ ವೇಗ ಹೆಚ್ಚಾಗಲು ಸಹಕಾರಿಯಾಗಲಿದೆ ಎಂದು ಅಧ್ಯಯನ ಹೇಳಿದೆ.

ಈ ಹಿಂದೆ ಯುರೋಪ್​ನ ವಿಚಾರದಲ್ಲಿ ಚೀನಾ ತಜ್ಞರು ಇದೇ ರೀತಿ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದರು. ಆಗ ಇದಕ್ಕೆ ಪೂರಕವಾಗಿ ಯುರೋಪಿಯನ್ ದೇಶಗಳಲ್ಲಿ ಸೋಂಕು ಹೆಚ್ಚಾಗಿತ್ತು. ಭಾರತದ ತಜ್ಞರೂ ಇಂತಹದ್ದೊಂದು ಮಾಹಿತಿ‌ ಹೊರಹಾಕಿದ್ದು, ಮತ್ತಷ್ಟು ಭೀತಿ ಹೆಚ್ಚಿಸಿದೆ. ದೇಶದ ಹಲವೆಡೆ ಅತಿವೃಷ್ಠಿ ಉಂಟಾಗಿರುವುದು ಕೂಡ ದೊಡ್ಡ ಅವಾಂತರ ಸೃಷ್ಟಿ ಮಾಡಲಿದೆ.

ಒಟ್ನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಸಂದರ್ಭದಲ್ಲೇ ವಾತಾವರಣ ಕೂಡ ಕೊರೊನಾ’ಗೆ ಪೂರಕವಾಗಿಯೇ ಇದೆ. ಇದನ್ನೆಲ್ಲಾ ತಾಳೆಹಾಕಿ ಹೇಳೋದಾದ್ರೆ ಸದ್ಯದ ಮಟ್ಟಿಗೆ ಯಾವುದೂ ಮೊದಲಿನಂತೆ ಆಗಲ್ಲ.

Published On - 7:44 am, Sun, 26 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ