ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ

ಸಿಎಂ ಸಿದ್ದರಾಮಾಯ್ಯನವರ ಕನಸಿನ ಕೂಸಾದ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ ಹಿಡಿದಿದೆ. ಅಕ್ಕಿ‌ ಬದಲಿಗೆ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಹಣ ವರ್ಗಾವಣೆಯಾಗಿಲ್ಲ. ಇದೀಗ ಅನ್ನಭಾಗ್ಯ ಫಾಲಾನುಭವಿಗಳು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ: 3 ತಿಂಗಳಿನಿಂದ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆಯಾಗದ ಹಣ
ಅನ್ನಭಾಗ್ಯ ಯೋಜನೆಗೆ ಮತ್ತೆ ಗ್ರಹಣ
Follow us
Poornima Agali Nagaraj
| Updated By: Ganapathi Sharma

Updated on: Sep 16, 2024 | 7:16 AM

ಬೆಂಗಳೂರು, ಸೆಪ್ಟೆಂಬರ್ 16: ಐದು ಮಹತ್ವದ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಅವುಗಳನ್ನು ಜಾರಿ ಮಾಡಿದೆ. ಆದರೆ, ಅಧಿಕಾರಕ್ಕೆ ಬಂದು ವರ್ಷ ಆಗುತ್ತಿದ್ದಂತೆಯೇ ಒಂದೊಂದು ಯೋಜನೆಗಳಿಗೆ ಅದ್ಯಾಕೋ ಗ್ರಹಣ ಬಡಿದಂತಾಗುತ್ತಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಯಡಿ ನೀಡುತ್ತಿದ್ದ 2,000 ರೂ. ಎರಡು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ವರ್ಗವಾಗಿಲ್ಲ. ಇದೀಗ ಅನ್ನಭಾಗ್ಯದ ಹಣ ಕೂಡ 2 ತಿಂಗಳಿನಿಂದ ಬಂದಿಲ್ಲ ಅಂತ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಕಿಯ ಕೊರತೆ ಕಾರಣ ನೀಡಿ ಬಿಪಿಎಲ್‌ ಕಾರ್ಡ್‌ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರಕಾರ ಫಲಾನುಭವಿಗಳ ಮುಖ್ಯಸ್ಥರ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮಾವಣೆಯಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿಂದ ಹಣ ಪಾವತಿಯಾಗಿಲ್ಲ. ಹೀಗಾಗಿ ಫಲಾನುಭವಿಗಳು ಪ್ರತಿದಿನ ಬೆಂಗಳೂರು‌ ಒನ್ ಹಾಗೂ ಬ್ಯಾಂಕ್​ಗಳನ್ನ ಸುತ್ತುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸರ್ಕಾರದ ವಿರುದ್ಧ ಫಲಾನುಭವಿಗಳ ಆಕ್ರೋಶ

ನಾವೇನೂ ಸಿದ್ದರಾಮಾಯ್ಯನವರನ್ನ ದುಡ್ಡೇ ಕೊಡಿ, ಅಕ್ಕಿಕೊಡಿ, ಫ್ರಿ ಬಸ್ ಕೊಡಿ ಅಂತ ಹೇಳಿಲ್ಲ. ಆದರೆ ಅಧಿಕಾರಕ್ಕೆ ಬರುವ ಆಸೆಗಾಗಿ ಯೋಜನೆ ಜಾರಿ ಮಾಡಿ, ಸ್ವಲ್ಪ ದಿನ ಕೊಟ್ಟು ಜನರಿಗೆ ಮೋಸ ಮಾಡಿದ್ದಾರೆ.‌ ಸರ್ಕಾರ ಕೊಡುವ ದುಡ್ಡನ್ನು ನಂಬಿ ನಾವು ಜೀವನ ಮಾಡುತ್ತಿಲ್ಲ. ಆದರೆ ಕೊಡುತ್ತೇವೆ ಎಂದು ಮೋಸ ಮಾಡಿದರು ಎಂದು ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಡ್ಡು ಬರುತ್ತದೆ ಎಂದು ಇ-ಕೆವೈಸಿ ಮಾಡಿ, ಪಾನ್ ಲಿಂಕ್ ಮಾಡ್ಸಿ, ಆಧಾರ್ ಲಿಂಕ್ ಮಾಡ್ಸಿ ಎಂದು ಬೆಂಗಳೂರು ಒನ್ ಕೇಂದ್ರಗಳಲ್ಲಿ ವಾರಗಟ್ಟಲೆ ನಿಂತು ಅರ್ಜಿ ಸಲ್ಲಿಕೆ ಮಾಡಿದೆವು. ಈಗ ನೋಡಿದರೆ ಹಣವೂ‌ ಇಲ್ಲ, ಅಕ್ಕಿಯೂ ಇಲ್ಲ. ನಮಗೆ ದುಡ್ಡು ಕೊಡದೇ ಇದ್ದರೂ ಪರ್ವಾಗಿಲ್ಲ. ಆದರೆ ಅಕ್ಕಿಯನ್ನಾದರೂ ಕೊಡಿ ಎಂದು ಫಲಾನುಭವಿ ಕಮಲ ಎಂಬವರು ಆಗ್ರಹಿಸಿದ್ದಾರೆ.

ಸಚಿವರು ಹೇಳುವುದೇನು?

ಈ ಕುರಿತಾಗಿ ನಾಗರೀಕ ಆಹಾರ ಸರಬರಾಜು ಇಲಾಖೆಯ ಸಚಿವರನ್ನ ಪ್ರಶ್ನಿಸಿದರೆ, ಸದ್ಯದಲ್ಲೆ ಹಣ ವರ್ಗಾವಣೆ ಮಾಡುತ್ತೇವೆ ಎಂದು ಹೇಳಿ ನುಣುಚಿಕೊಂಡಿದ್ದಾರೆ.

ಬಾರದ ಜುಲೈ, ಆಗಸ್ಟ್ ಗೃಹಲಕ್ಷ್ಮಿ ಹಣ

ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2,000 ರೂ. ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಎರಡು ತಿಂಗಳದ್ದು ಬಾಕಿ ಇದೆ. ಜೂನ್ ತಿಂಗಳ ಮೊತ್ತವನ್ನು ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಿತ್ತು.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ? ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಿಷ್ಟು

ಸರ್ಕಾರದಿಂದ ಹಣ ಬಿಡುಗಡೆ ವಿಳಂಬವಾಗುತ್ತಿರುವ ಕಾರಣ ಫಲಾನುಭವಿಗಳ ಖಾತೆಗೆ ವರ್ಗಾವಣೆ ತಡವಾಗುತ್ತಿದೆ. ಜುಲೈ, ಆಗಸ್ಟ್ ಗೃಹಲಕ್ಷ್ಮಿ ಹಣ ಶೀಘ್ರ ಫಲಾನುಭವಿಗಳ ಖಾತೆಗಳಿಗೆ ವರ್ಗವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿಎ ಲಕ್ಷ್ಮೀ ಹೆಬ್ಬಾಳ್ಕರ್ ಕೆಲವು ದಿನಗಳ ಹಿಂದೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ