ಚುನಾವಣಾ ಆಯೋಗ ಅನುಮತಿ ನಿರಾಕರಣೆ: ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ ರೈಲುಗಳ 2 ಟ್ರಿಪ್​​​ ರದ್ದು

|

Updated on: Apr 17, 2023 | 6:54 AM

ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲುಗಳ ಎರಡು ಪ್ರವಾಸಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚಿಸಿದೆ.

ಚುನಾವಣಾ ಆಯೋಗ ಅನುಮತಿ ನಿರಾಕರಣೆ: ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ ರೈಲುಗಳ 2 ಟ್ರಿಪ್​​​ ರದ್ದು
ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲು
Follow us on

ಬೆಂಗಳೂರು: ಭಾರತ್ ಗೌರವ್ ಕಾಶಿ ದರ್ಶನ ವಿಶೇಷ (Bharat Gaurav Kashi Darshan) ರೈಲುಗಳ (Train) ಎರಡು ಪ್ರವಾಸಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ (Karnataka Government) ಚುನಾವಣಾ ಆಯೋಗ (Election Commission) ಸೂಚಿಸಿದೆ. ಆಯೋಗದ ನಿರ್ದೇಶನದಂತೆ ಏಪ್ರಿಲ್ 14 ಮತ್ತು 28 ರಂದು ನಿಗದಿಯಾಗಿದ್ದ ಎರಡು ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಇಲಾಖೆಯು ಮಾರ್ಚ್ 25 ರಿಂದ ಭಾರತೀಯ ರೈಲ್ವೇಸ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ನ ಪೋರ್ಟಲ್ ಮೂಲಕ ಬುಕಿಂಗ್ ಸ್ವೀಕರಿಸಲು ಪ್ರಾರಂಭಿಸಿತ್ತು.

ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರವು ರಾಜ್ಯದ ವಿವಿಧ ಭಾಗಗಳಿಂದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ಗೆ ರೈಲು ಓಡಿಸಲು ಅನುಮತಿ ಕೋರಿ ಚುನಾವಣಾ ಆಯೋಗವನ್ನು ಸಂಪರ್ಕಿಸಿತ್ತು. ನಿಗದಿತ ಪ್ರವಾಸಗಳ ಬುಕ್ಕಿಂಗ್ ಅನ್ನು ತಕ್ಷಣವೇ ರದ್ದುಗೊಳಿಸುವಂತೆ ಚುನಾವಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ:  ಕಾಶಿ ಯಾತ್ರೆ ತೆರಳುವ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ; ರಾಜ್ಯ ಸರ್ಕಾರದಿಂದ ಸಿಗುವ ಸವಲತ್ತುಗಳ ವಿವರ ಇಲ್ಲಿದೆ

ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಭಾರತ್ ಗೌರವ್ ಟೂರಿಸ್ಟ್ ರೈಲಿಗೆ ಚಾಲನೆ ನೀಡಿದರು. ಸೇವೆಯನ್ನು ಒದಗಿಸಲು ರಾಜ್ಯ ಸರ್ಕಾರವು IRCTC ಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರಾಜ್ಯ ಸರ್ಕಾರದ ನಿರ್ಧಾರದಂತೆ, ಟಿಕೆಟ್ ಮುಂಗಡ ಟಿಕೆಟ್​ ಕಾಯ್ದಿರಿಸುವ ಪ್ರತಿ ವ್ಯಕ್ತಿಗೆ 5,000 ವಿಶೇಷ ರಿಯಾಯಿತಿ ನೀಡಲಾಗಿದೆ. ಒಬ್ಬರಿಗೆ ಟಿಕೆಟ್ ದರ 20,000 ರೂ. ಇದೆ.

ಪ್ರಧಾನಿ ಮೋದಿಯವರು 2022ರ ನವೆಂಬರ್‌ನಲ್ಲಿ ಸೇವೆಯನ್ನು ಪ್ರಾರಂಭಿಸಿದ ನಂತರ, ಇದುವರೆಗೆ ಯೋಜನೆಯಡಿ ಮೂರು ರೈಲುಗಳನ್ನು ನಿರ್ವಹಿಸಲಾಗಿದೆ. ನವೆಂಬರ್‌ನಲ್ಲಿ ಎರಡು ಮತ್ತು ಫೆಬ್ರವರಿಯಲ್ಲಿ ಒಂದು ರೈಲು ಒಟ್ಟು 1,644 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಎಂಟು ದಿನಗಳ ಪ್ರವಾಸದ ಪ್ಯಾಕೇಜ್‌ನಲ್ಲಿ ವಿಚಾರಗೋಷ್ಠಿಗಳು, ಉಪನ್ಯಾಸಗಳು, ಗುಂಪು ಸಭೆಗಳು ಜೊತೆಗೆ ವಿಶ್ವನಾಥ ದೇವಾಲಯ ಮತ್ತು ವಾರಣಾಸಿ, ಪ್ರಯಾಗ್‌ರಾಜ್ ಮತ್ತು ಅಯೋಧ್ಯೆಯಲ್ಲಿನ ಪ್ರಮುಖ ಸಾಂಸ್ಕೃತಿಕ ಪರಂಪರೆಯ ಕೇಂದ್ರಗಳಿಗೆ ಭೇಟಿ ನೀಡಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ