AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋವಿ ನಿಗಮ ಹಗರಣ: ಆರೋಪಿಗಳ ಸ್ಥಿರಾಸ್ತಿ ಮುಟ್ಟುಗೋಲು ಹಾಕಿದ ಇಡಿ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪಿಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಬಿ.ಕೆ. ನಾಗರಾಜಪ್ಪ ಮತ್ತು ಆರ್. ಲೀಲಾವತಿ ಸೇರಿದಂತೆ ಹಲವು ಆರೋಪಿಗಳ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಜಪ್ತಿ ಮಾಡಲಾಗಿದೆ. ಸಿಐಡಿ ತನಿಖೆಯಲ್ಲಿ 90 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಬಹಿರಂಗವಾಗಿತ್ತು. ತನಿಖೆ ಮುಂದುವರಿದಿದೆ.

ಭೋವಿ ನಿಗಮ ಹಗರಣ: ಆರೋಪಿಗಳ ಸ್ಥಿರಾಸ್ತಿ ಮುಟ್ಟುಗೋಲು ಹಾಕಿದ ಇಡಿ
ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮ, ಇಡಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: May 26, 2025 | 4:17 PM

Share

ಬೆಂಗಳೂರು, ಮೇ 26: ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದ (Karnataka Bhovi Development Corporation) ಬಹುಕೋಟಿ ಹಗರಣದ ಆರೋಪಿಗಳಿಗೆ ಸೇರಿದ 26.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ. ಪ್ರಕರಣದ ಆರೋಪಿಗಳಾದ ಬಿ.ಕೆ.ನಾಗರಾಜಪ್ಪ. ಆರ್.ಲೀಲಾವತಿ ಮತ್ತು ಇತರೆ ಆರೋಪಿಗಳಿಗೆ ಸೇರಿದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದ್ದು, ತನಿಖೆ ಮುಂದುವರೆಸಿದೆ.

ಏನಿದು ಹಗರಣ?

ಭೋವಿ ಸಮುದಾಯದ ಅಭ್ಯುದಯಕ್ಕೆ ಸರ್ಕಾರವು ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕರ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿ ರೂಪಾಯಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ
Image
ಜೀವಾ ಆತ್ಮಹತ್ಯೆ: SIT ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಅಂಶ ಬಯಲು
Image
ವಕೀಲೆ ಜೀವಾ ಆತ್ಮಹತ್ಯೆ ಕೇಸ್​​: ಹೈಕೋರ್ಟ್​​ಗೆ ವರದಿ ಸಲ್ಲಿಸಿದ ಎಸ್ಐಟಿ
Image
ಭೋವಿ ನಿಗಮ ಬಹುಕೋಟಿ ಹಗರಣ​: ಅಕ್ರಮ ಹಣ ವರ್ಗಾವಣೆ ಪತ್ತೆ ಮಾಡಿದ ED
Image
ವಕೀಲೆ ಜೀವಾ ಆತ್ಮಹತ್ಯೆ ಕೇಸ್: ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್

ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿದಂತೆ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲಾಗಿದ್ದವು.

ಇನ್ನು, ಪ್ರಕರಣದ ತನಿಖೆಯನ್ನು ಸಿಐಡಿ ಮತ್ತು ಲೋಕಾಯುಕ್ತ ಕೂಡ ನಡೆಸಿವೆ. ಸಿಐಡಿ ತನಿಖೆ ವೇಳೆ 2018-2023ರವರೆಗೆ ಐದು ವರ್ಷಗಳಲ್ಲಿ ಸುಮಾರು 90 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ನಡೆದಿರುವುದು ಬಯಲಾಗಿತ್ತು.

ಇದನ್ನೂ ಓದಿ:ಭೋವಿ ನಿಗಮದ ಅವ್ಯವಹಾರದಲ್ಲಿ ಹೆಸರು ಪ್ರಸ್ತಾಪ: ಆರೋಪ ಹಿಂಪಡೆಯುವಂತೆ ಸಿಎಂಗೆ ಕೋಟ ಶ್ರೀನಿವಾಸ ಪತ್ರ

ಇಡಿ ಟ್ವೀಟ್​

ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ

ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ, ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ, ಮಾಜಿ ಅಧೀಕ್ಷಕ ಸುಬ್ಬಪ್ಪ ಅವರು ತಮ್ಮ ನೆರೆಹೊರೆಯವರು, ಬಾಡಿಗೆದಾರರು ಸಂಬಂಧಿಕರ ಹೆಸರಿನಲ್ಲಿ ನಕಲಿ ಕಂಪನಿ ತೆರೆದಿದ್ದು, ಅವರ ಖಾತೆಗಳಿಗೆ ಹಣ ಜಮೆಯಾಗಿತ್ತು. ಭೋವಿ ಅಕ್ರಮ ಹಣ ವರ್ಗಾವಣೆ ಶೋಧಿಸಿರುವ ಸಿಐಡಿ, ಐದು ಕಂಪನಿಗಳಿಗೆ 34.18 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದ್ದನು ಪತ್ತೆ ಹಚ್ಚಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?