AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು; ನೀತಿ ರೂಪಿಸಲು ಮಧ್ಯಪ್ರವೇಶಿಸಲು ಮನವಿ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ದೆಹಲಿಯಲ್ಲಿ ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯ ಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. ಕೂಡಲೇ ನೀತಿ ನಿರೂಪಣೆ ರಚಿಸಲು ಒತ್ತಾಯ ಮಾಡಿದ್ದು, ಬಡತನ ಕಾಯುವುದಿಲ್ಲ ಎಂದಿದ್ದಾರೆ. ತಾವು ಮಧ್ಯಪ್ರವೇಶಿಸುವುದಾಗಿ ಭರವಸೆ ನೀಡಿರುವ ರಾಹುಲ್ ಗಾಂಧಿ ಸಹಾಯ ಮಾಡುವ ಆಶ್ವಾಸನೆ ನೀಡಿದ್ದಾರೆ.

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕ ಬೈಕ್ ಟ್ಯಾಕ್ಸಿ ಚಾಲಕರು; ನೀತಿ ರೂಪಿಸಲು ಮಧ್ಯಪ್ರವೇಶಿಸಲು ಮನವಿ
Karnataka Bike Taxi Drivers Met Rahul Gandhi
ಸುಷ್ಮಾ ಚಕ್ರೆ
|

Updated on: Aug 23, 2025 | 3:56 PM

Share

ನವದೆಹಲಿ, ಆಗಸ್ಟ್​ 23: ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು (Rahul Gandhi) ಭೇಟಿ ಮಾಡಿದ ನಂತರ ಬೈಕ್ ಟ್ಯಾಕ್ಸಿ ಚಾಲಕರು ತಮ್ಮ ಸಮಸ್ಯೆಗೆ ಪರಿಹಾರ ಸಿಗುವ ಭರವಸೆಯಲ್ಲಿದ್ದಾರೆ. ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದ ಪ್ರತಿನಿಧಿಗಳು ಇಂದು ನವದೆಹಲಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸಂಬಂಧ ಸ್ಪಷ್ಟ ನೀತಿ ರೂಪಿಸಲು ಮಧ್ಯಪ್ರವೇಶಿಸಬೇಕು ಎಂದು ಬೇಡಿಕೆ ಸಲ್ಲಿಸಿದ್ದಾರೆ. 6 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿ ಚಾಲಕರು ಮತ್ತು ಅವರ ಕುಟುಂಬಗಳನ್ನು ಪ್ರತಿನಿಧಿಸುವ ಸಂಘದ ಪ್ರತಿನಿಧಿಗಳ ತಂಡ ಬೈಕ್ ಟ್ಯಾಕ್ಸಿ ಸೇವೆಯ ಸ್ಥಗಿತದಿಂದ ಉಂಟಾಗಿರುವ ಗಂಭೀರ ಜೀವನೋಪಾಯ ಸಂಕಷ್ಟಗಳನ್ನು ವಿವರಿಸಿದೆ.

ಬೈಕ್ ಟ್ಯಾಕ್ಸಿ ಚಾಲಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಹುಲ್ ಗಾಂಧಿ, ಅವರಿಗೆ ಬೆಂಬಲದ ಭರವಸೆ ನೀಡಿದ್ದಾರೆ. ಇದು ಜೀವನೋಪಾಯ ಮತ್ತು ಗೌರವಕ್ಕಾಗಿ ಹೋರಾಡುತ್ತಿರುವ ಸಾವಿರಾರು ಯುವ ಅಸಂಘಟಿತ (ಗಿಗ್) ಕಾರ್ಮಿಕರಿಗೆ ಹೊಸ ಭರವಸೆ ಮೂಡಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಂಕಷ್ಟ ಎದುರಿಸುತ್ತಿರುವ ಕರ್ನಾಟಕದ ಲಕ್ಷಾಂತರ ಅಸಂಘಟಿತ (ಗಿಗ್) ಕಾರ್ಮಿಕರ ಧ್ವನಿಯನ್ನು ಪ್ರತಿನಿಧಿಸುವ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘಕ್ಕೆ ದೊಡ್ಡ ಬೆಂಬಲ ಸಿಕ್ಕಿದಂತಾಗಿದೆ. ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ಸಂಘದ ಸದಸ್ಯರು, ಬೈಕ್ ಟ್ಯಾಕ್ಸಿ ನಿಷೇಧದಿಂದ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಎದುರಿಸುತ್ತಿರುವ ಜೀವನೋಪಾಯ ಸಂಕಷ್ಟವನ್ನು ವಿವರಿಸಿ, ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಟ್ಟಿನಲ್ಲಿ ಸ್ಪಷ್ಟ ನೀತಿ ರೂಪಿಸಲು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ವಿನಂತಿಸಿದ್ದಾರೆ.

ಇದನ್ನೂ ಓದಿ: ಬಿಹಾರ್​ನಲ್ಲಿ ಎಸ್ಐಆರ್ ವಿರುದ್ಧ ರಾಹುಲ್ ಗಾಂಧಿ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಭಾಗಿಯಾಗಲಿರುವ ಸಿದ್ದರಾಮಯ್ಯ

ಸಂಘದ ಪ್ರತಿನಿಧಿಗಳ ಮಾತುಗಳನ್ನು ಶ್ರದ್ಧೆಯಿಂದ ಕೇಳಿರುವ ರಾಹುಲ್ ಗಾಂಧಿ, ಜೀವನ ನಡೆಸಲು ಹೋರಾಡುತ್ತಿರುವ ಯುವ ಕಾರ್ಮಿಕರ ಪರ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಅವರ ಈ ಭರವಸೆಯಿಂದ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಚಾಲಕರು ಮತ್ತು ಅವರ ಕುಟುಂಬಗಳಿಗೆ ಹೊಸ ಭರವಸೆ ಮೂಡಿದಂತಾಗಿದೆ.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘವು, ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಮರ್ಪಕ ನೀತಿಯನ್ನು ರೂಪಿಸುವಂತೆ ಮನವಿ ಮಾಡಿಕೊಂಡಿದೆ. ನೀತಿ ರೂಪಿಸುವವರೆಗೆ, ಕಾರ್ಮಿಕರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳದೆ ತಕ್ಷಣ ಸೇವೆ ಪುನರಾರಂಭಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್