Sign In

By signing in or creating an account, you agree with Associated Broadcasting Company's Terms & Conditions and Privacy Policy.

23 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಪಟ್ಟಿ

ಕರ್ನಾಟಕ ಬಿಜೆಪಿಯಲ್ಲಿ ಬಣಬಡಿದಾಟ ಜೋರಾಗಿದ್ದು, ರಾಜಾಧ್ಯಕ್ಷ ಬಿವೈ ವಿಜಯೇಂದ್ರ ಬದಲಾವಣೆ ಮಾಡಬೇಕೆಂದು ಯತ್ನಾಳ್ ಬಣ ಪಟ್ಟು ಹಿಡಿದಿದೆ. ಹೀಗಾಗಿ ಚುನಾವಣೆ ನಡೆಸಲು ಹೈಕಮಾಂಡ್ ಮುಂದಾಗಿದೆ. ಇದರ ಮಧ್ಯ ಕರ್ನಾಟಕದ 23 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರ ನೇಮಕದಲ್ಲಿ ಬಹುತೇಕ ವಿಜಯೇಂದ್ರ ಆಪ್ತರನ್ನೇ ನೇಮಕ ಮಾಡಿರೋ ಆರೋಪ ಕೇಳಿಬಂದಿದೆ. ಹಾಗಾದ್ರೆ, ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು ಎನ್ನುವ ಪಟ್ಟಿ ಇಲ್ಲಿದೆ.

23 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಪಟ್ಟಿ
Karnataka Bjp
Follow us
ರಮೇಶ್ ಬಿ. ಜವಳಗೇರಾ
|

Updated on: Jan 29, 2025 | 10:36 PM

ಬೆಂಗಳೂರು, (ಜನವರಿ 29): ಕರ್ನಾಟಕದ 23 ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ (BJP) ಪಟ್ಟಿ ಬಿಡುಗಡೆ ಮಾಡಿದೆ. ಕೆಲ ಜಿಲ್ಲೆಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ, ಇನ್ನು ಕೆಲ ಜಿಲ್ಲೆಗಳಿಗೆ ಹಳೇಬರನ್ನೇ ಮುಂದುವರಿಸಲಾಗಿದೆ. ಇನ್ನು ಕೆಲ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿಲ್ಲ. ಈ ನೂತನ ಜಿಲ್ಲಾಧ್ಯಕ್ಷರುಗಳು ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸಬೇಕು ಎಂದು ಬಿಜೆಪಿ ಕಿವಿ ಮಾತು ಹೇಳಿದೆ. ಇನ್ನು ವಿಜಯೇಂದ್ರ ತಮ್ಮ ಆಪ್ತರಿಗೆ ಮಣೆ ಹಾಕಿದ್ದಾರೆ ಎನ್ನುವ ಆರೋಪ ಪಕ್ಷದಲ್ಲೇ ಕೇಳಿಬಂದಿದೆ.

ಯಾರು ಯಾವ ಜಿಲ್ಲೆಗೆ ಅಧ್ಯಕ್ಷರು?

ಮೈಸೂರು ನಗರ: ಎಲ್.ನಾಗೇಂದ್ರ, ಚಾಮರಾಜನಗರ-ಸಿ.ಎಸ್.ನಿರಂಜನ್‌ಕುಮಾರ್, ದಕ್ಷಿಣ ಕನ್ನಡ-ಸತೀಶ್ ಕುಂಪಲಿ, ಚಿಕ್ಕಮಗಳೂರು-ದೇವರಾಜ ಶೆಟ್ಟಿ, ಶಿವಮೊಗ್ಗ-ಎನ್.ಕೆ.ಜಗದೀಶ್, ಉತ್ತರ ಕನ್ನಡ-ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ– ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ-ನಿಂಗಪ್ಪ ಡಿ.ಸುತಗಟ್ಟಿ, ಬೆಳಗಾವಿ ನಗರ-ಗೀತಾ ಸುತಾರ್, ಬೆಳಗಾವಿ ಗ್ರಾಮಾಂತರ-ಸುಭಾಷ್ ದುಂಡಪ್ಪ ಪಾಟೀಲ್, ಚಿಕ್ಕೋಡಿ-ಸತೀಶ್ ಅಪ್ಪಾಜಿಗೋಲ್, ಬೀದರ್-ಸೋಮನಾಥ್ ಪಾಟೀಲ್, ಕಲಬುರಗಿ ನಗರ-ಚಂದ್ರಕಾಂತ ಬಿ.ಪಾಟೀಲ್, ಕಲಬುರಗಿ ಗ್ರಾಮಾಂತರ-ಅಶೋಕ ಶಾಂತಪ್ಪ ಬಗಲಿ, ಯಾದಗಿರಿ-ಬಸವರಾಜ ವಿಭೂತಿಹಳ್ಳಿ, ಕೊಪ್ಪಳ-ಧಡೇಸುಗೂರು ಬಸವರಾಜ್, ಬಳ್ಳಾರಿ-ಅನಿಲ್ ಕುಮಾರ್ ಮೋಕಾ, ವಿಜಯನಗರ-ಸಂಜೀವರೆಡ್ಡಿ ಎಸ್, ಚಿಕ್ಕಬಳ್ಳಾಪುರ-ಬಿ.ಸಂದೀಪ್, ಕೋಲಾರ-ಓಂ ಶಂಕ್ತಿ ಛಲಪತಿ, ಬೆಂಗಳೂರು ಗ್ರಾಮಾಂತರ-ಎಸ್.ಹರೀಶ್, ಬೆಂಗಳೂರು ಕೇಂದ್ರ-ಎ.ಆರ್.ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ-ಸಿ.ಕೆ.ರಾಮಮೂರ್ತಿ.

ಇದನ್ನೂ ಓದಿ: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ: ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಗುಡುಗಿದ ಸುಧಾಕರ್

ಯಾವ ಜಿಲ್ಲೆಗೆ ಹೊಸಬರು? ಯಾರು ಮರು ನೇಮಕ?

ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಹೊಸ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ. ಇನ್ನು ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಜಿಲ್ಲೆಗೆ ಮರು ನೇಮಕ ಮಾಡಲಾಗಿದೆ.

ಬಾಕಿ ಇರುವ ಜಿಲ್ಲೆಗಳು

ಇನ್ನು 23 ಜಿಲ್ಲೆಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, 16 ಜಿಲ್ಲೆಗಳ ಅಧ್ಯಕ್ಷರ ಆಯ್ಕೆ ಮಾಡಬೇಕಿದೆ. ಮೈಸೂರು ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು, ಉಡುಪಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅಧ್ಯಕ್ಷರನ್ನು ನೇಮಕ ಮಾಡಬೇಕಿದೆ. ಆಯ್ಕೆಯಲ್ಲಿ ಕೆಲ ಗೊಂದಲ ಏರ್ಪಟ್ಟಿದ್ದರಿಂದ ಸದ್ಯಕ್ಕೆ ಯಾವುದೇ ನೇಮಕ ಮಾಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ