ಹಿಂದುತ್ವದ ಉಳಿವು, ಅಪ್ಪ-ಮಕ್ಕಳಿಂದ ಬಿಜೆಪಿಯನ್ನು ಮುಕ್ತಗೊಳಿಸುವುದು: ಇದು ಈಶ್ವರಪ್ಪ ಪ್ರಣಾಳಿಕೆ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಶಿವಮೊಗ್ಗದ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಸಹ ತಮ್ಮ ಪ್ರಣಾಳಿಕೆಯನ್ನು ಸಹ ಬಿಡುಗಡೆ ಮಾಡಿದ್ದಾರೆ. ಈಶ್ವರಪ್ಪ ಪ್ರಣಾಳಿಕೆಯಲ್ಲಿ ಎರಡ್ಮೂರು ಅಂಶಗಳು ಇವೆ.
ಶಿವಮೊಗ್ಗ, (ಏಪ್ರಿಲ್ 14): ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದಿರುವ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ (KS Eshwarappa) ಶಿವಮೊಗ್ಗ ಲೋಕಸಭಾ (Shivamogga Loksabha) ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಕೆಎಸ್ ಈಶ್ವರಪ್ಪ ಟ್ವೀಟ್ ಮಾಡಿದ್ದು, ಮತ್ತೆ ಬಿಎಸ್ ಯಡಿಯೂರಪ್ಪ(BS Yediyurappa) ಮತ್ತು ಅವರ ಮಕ್ಕಳ ವಿರುದ್ಧ ಗುಡುಗಿದ್ದಾರೆ. ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಘೋಷಿಸಿದ್ದಾರೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟವಾಗಿ ಬರೆದುಕೊಂಡಿದ್ದಾರೆ.
ಅಲ್ಲದೇ ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಟ್ವೀಟ್ ಮಾಡಿದ್ದಾರೆ.
“ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ” #shivamogga #shivamoggaloksabhaconstituency #ModiAgainIn2024
— K S Eshwarappa (Modi Ka Parivar) (@ikseshwarappa) April 14, 2024
ರಾಜ್ಯ @BJP4Karnataka ಮಾನ್ಯ ಅಧ್ಯಕ್ಷ @BYVijayendra ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, @narendramodi @AmitShah ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ.
— K S Eshwarappa (Modi Ka Parivar) (@ikseshwarappa) April 14, 2024
ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ, ಪಾಪಾ 15 ದಿನದಿಂದ ಈ ರೀತಿ ಅನಿಸಿದೆ, ಮೊದಲು ಹೀಗೆ ಅನಿಸಿರಲಿಲ್ಲ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ಗೆ ಟಿಕೆಟ್ ಸಿಕ್ಕಿಲ್ಲ. ಹೀಗಾಗಿ ನಮ್ಮ ಕುಟುಂಬದ ಬಗ್ಗೆ ಈಶ್ವರಪ್ಪ ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಕೆ.ಇ.ಕಾಂತೇಶ್ಗೆ ಟಿಕೆಟ್ ಕೊಡದಿರುವುದು ಹೈಕಮಾಂಡ್ ನಿರ್ಧಾರ. ಹೈಕಮಾಂಡ್ ತೀರ್ಮಾನವನ್ನು ಕೆ.ಎಸ್.ಈಶ್ವರಪ್ಪ ಗೌರವಿಸಬೇಕಿತ್ತು. ನಮ್ಮ ಕುಟುಂಬದ ವಿರುದ್ಧ ಈಶ್ವರಪ್ಪ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ಈಶ್ವರಪ್ಪ ಏನೇ ಮಾತನಾಡಿದರೂ ಆಶೀರ್ವಾದ ಅಂದುಕೊಳ್ಳುತ್ತೇನೆ ಎಂದು ಸೂಕ್ಷ್ಮವಾಗಿ ತಿರುಗೇಟು ನೀಡಿದರು.
ಜನರು ಮತದಾನದ ಮೂಲಕ ಉತ್ತರ ಕೊಡುತ್ತಾರೆ. ರಾಘವೇಂದ್ರ ಗೆಲ್ಲಿಸಿ ಎಂದು ಮೋದಿ ಪ್ರಚಾರ ಮಾಡಿ ಹೋಗಿದ್ದಾರೆ. ಈಶ್ವರಪ್ಪ ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಈಶ್ವರಪ್ಪಗೆ ನಮ್ಮ ಕುಟುಂಬ ಯಾವುದೇ ಅನ್ಯಾಯ ಮಾಡಿಲ್ಲ ಎಂದರು.
ಇದೇ ವೇಳೆ ಈಶ್ವರಪ್ಪ ಪ್ರಚಾರಕ್ಕೆ ಮೋದಿ ಫೋಟೋ ಬಳಸುತ್ತಿರುವ ವಿಚಾರದ ಬಗ್ಗೆ ಮಾತನಾಡಿದ ರಾಘವೇಂದ್ರ, ನಾನು ಪಕ್ಷದ ಅಧಿಕೃತ ಅಭ್ಯರ್ಥಿ, ಯಾವುದೇ ಗೊಂದಲ ಇಲ್ಲ. ನಾನು ಕೆ.ಎಸ್.ಈಶ್ವರಪ್ಪ ಬಗ್ಗೆ ಮಾತಾಡಬಾರದು ಎಂದುಕೊಂಡಿದ್ದೆ. ಆದ್ರೆ ಈಗ ಅನಿವಾರ್ಯವಾಗಿ ಮಾತಾಡಬೇಕಾಯ್ತು. ಯಡಿಯೂರಪ್ಪ ಎಲ್ಲಾ ಸವಾಲು, ಹೋರಾಟ ಮಾಡಿ ಬಂದವರು. ಬಿಎಸ್ವೈರನ್ನು ರಾಜಕೀಯವಾಗಿ ಮುಗಿಸಬೇಕೆಂದು ಹಲ್ಲೆಯಾಗಿತ್ತು. ಶಿಕಾರಿಪುರದಲ್ಲಿ ಈ ಹಿಂದೆ ಯಡಿಯೂರಪ್ಪ ಮೇಲೆ ಮಾರಣಾಂತಿಕ ಹಲ್ಲೆಯಾಗಿತ್ತು ಎಂದು ಹೇಳಿದರು.
ಹಿಂದುತ್ವ, ಪಕ್ಷದ ವಿಚಾರದಲ್ಲಿ ನಮ್ಮ ಕುಟುಂಬ ರಾಜಿ ಮಾಡಿಕೊಳ್ಳಲ್ಲ. ಕೆ.ಎಸ್.ಈಶ್ವರಪ್ಪ ಪಕ್ಷ ಕಟ್ಟಿದವರು, ಪರಿಸ್ಥಿತಿ ಅರ್ಥ ಮಾಡಿಕೊಳ್ಳಲಿ. ಹೈಕಮಾಂಡ್ ಮೇಲೆ ಈಶ್ವರಪ್ಪಗೆ ಸಿಟ್ಟು ಇದೆ, ಹೇಳಿಕೊಳ್ಳಲು ಆಗುತ್ತಿಲ್ಲ ಎಂದು ಟಾಂಗ್ ಕೊಟ್ಟರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ